ದೊಡ್ಡಬಳ್ಳಾಪುರ, (Doddaballapura): ಪಾಠ ಹೇಳಿ, ಜ್ಞಾನಾರ್ಜನೆ ಮಾಡಿಸಿ ಬದುಕಿಗೆ ಬೆಳಕಾದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಎಂದಿಗೂ ಮರೆಯಬಾರದು ಎಂಬಂತೆ 2006-07 ನೇ ಸಾಲಿನ ವಿದ್ಯಾರ್ಥಿಗಳು, ಸಾಸಲು ಗ್ರಾಮದ ಡಾ.ಬಿಆರ್ ಅಂಬೇಡ್ಕರ್ ಪ್ರೌಢಶಾಲೆ ಆವರಣದಲ್ಲಿ ಶನಿವಾರ ಗುರುವಂದನಾ ಕಾರ್ಯಕ್ರಮ ಮತ್ತು ಸ್ನೇಹಸಮ್ಮಿಲನ ಕಾರ್ಯಕ್ರಮ ನಡೆಸಿಕೊಟ್ಟರು.
ಗುರುಗಳ ಸೇವೆಯನ್ನು ಸ್ಮರಿಸುವುದು ಮತ್ತು ಅವರಿಗೆ ಪ್ರತ್ಯಕ್ಷವಾಗಿ ಧನ್ಯತೆ ಸಮರ್ಪಣೆ ಮಾಡುವುದು ಸಾರ್ಥಕ ಕಾರ್ಯ. ಇದೇ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಹಿರಿಯ ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಣ ಕಲಿಸಿದ ಗುರುಗಳನ್ನು ಸತ್ಕರಿಸಿ ಸನ್ಮಾನಿಸಿದರು.
ಈ ವೇಳೆ ನಿವೃತ್ತ ಶಿಕ್ಷಕರಾದ ಮಂಜುನಾಥ್ (RMN), ಬಸವರಾಜು (BNB), ಲಕ್ಷ್ಮಣ್ (LK), ಶಿವಣ್ಣ (SRS), ನರಸಿಂಹಮೂರ್ತಿ (GSN), ದಕ್ಷಿಣ ಮೂರ್ತಿ (VDM), ವೀರಪ್ಪ (SAV), ಹಾಲಿ ಶಿಕ್ಷಕರಾದ ರಂಗೇಗೌಡ (AR), ಸಹಾಯಕರಾದ ಹನುಮಂತರಾಯಪ್ಪ, ಗಂಗಣ್ಣ, ಚಂದ್ರಪ್ಪ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಕಳೆದ ವರ್ಷ SSLC ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಉಡುಗೊರೆ ನೀಡಲಾಯಿತು. ಅಲ್ಲದೆ ಶಾಲೆಗೆ ಬೀರು ಮತ್ತು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ, ಪೆನ್ ನೀಡಲಾಯಿತು.
ಇದೇ ವೇಳೆ ಹಳೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭರ್ಜರಿ ಡ್ಯಾನ್ಸ್ ಮಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಮಧುಸೂಧನ್, ಕಾರ್ಯದರ್ಶಿ ದೇವರಾಜಯ್ಯ 2006-07 ನೇ ಸಾಲಿನಲ್ಲಿ SSLC ಯಲ್ಲಿ ಓದಿದ ವಿದ್ಯಾರ್ಥಿಗಳು ಭಾಗವಹಿಸಿದ್ದರು.