HD Kumaraswamy| ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಡಿ: ಹೆಚ್‌.ಡಿ.ಕುಮಾರಸ್ವಾಮಿ ಸಲಹೆ

ಮೈಸೂರು: ಕಾಂಗ್ರೆಸ್ ಸರಕಾರದಲ್ಲಿ ಬಡವರಿಗೆ ಮನೆ ಹಂಚಿಕೆಯಲ್ಲಿಯೂ ಲಂಚ ಪಡೆಯಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರು, ಲಂಚದ ಪ್ರಮಾಣ ಶೇ.60 ತಲುಪಿದೆ ಎಂದು ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಭಾನುವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು; ಕಾಂಗ್ರೆಸ್ ಸರಕಾರದಲ್ಲಿ ಶೇ.60 ರಷ್ಟು ಲಂಚ, ಕಮೀಶನ್ ವಸೂಲಿ ಮಾಡುತ್ತಿರುವುದನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಒಪ್ಪಿಕೊಂಡಿದ್ದಾರೆ ಎಂದರು.

ಬಡವರಿಗೆ ಮನೆ ಹಂಚಿಕೆಯಲ್ಲೂ ಲಂಚ ಹೊಡೆಯಲಾಗುತ್ತಿದೆ‌. ಮೊದಲು ಪಿಡಿಒ ಲಂಚ ಪಡೆಯುತ್ತಿದ್ದರು. ಈಗ ವಿಧಾನಸೌಧದಲ್ಲಿ ಸಚಿವರೇ ರಾಜಾರೋಷವಾಗಿ ಲಂಚ ಪಡೆಯುತ್ತಿದ್ದಾರೆ. ಸತ್ಯಮೇವ ಜಯತೇ ಎಂದರೆ ಇದೇನಾ? ಇವರ ಸತ್ಯಮೇವ ಜಯತೆ ಬರೀ ಜಾಹೀರಾತಿಗೆ ಸೀಮಿತವಾಗಿದೆ ಎಂದು ಕೇಂದ್ರ ಸಚಿವರು ವ್ಯಂಗ್ಯವಾಡಿದರು.

ಗಾಂಧೀಜಿ ಅವರ ಸತ್ಯಮೇವ ಜಯತೆ ಮಾತಿನಂತೆ ಸಿದ್ದರಾಮಯ್ಯ ಅವರು ನಡೆದುಕೊಳ್ಳುತ್ತಿದ್ದಾರಾ? ಅವರ ಆತ್ಮಕ್ಕೆ ಅವರೇ ಉತ್ತರ ಕೊಟ್ಟುಕೊಳ್ಳಲಿ. ಹಣ ಲೂಟಿ ಮಾಡುವುದಕ್ಕೆ ಇತಿಮಿತಿ ಇಲ್ಲವಾ? ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರಕಾರದ ವಿರುದ್ಧ ಕುಮಾರಸ್ವಾಮಿ ಅವರು ವಾಗ್ದಾಳಿ ಮಾಡಿದರು.

ರಾಜ್ಯದ ಗುತ್ತಿಗೆದಾರ ಪರಿಸ್ಥಿತಿ ಶೋಚನೀಯವಾಗಿದೆ. ಇವತ್ತಿನ ಪರಿಸ್ಥಿತಿ ನೋಡಿದರೆ ಹಿಂದಿನ ಬಿಜೆಪಿ ಸರಕಾರವೇ ಚೆನ್ನಾಗಿತ್ತು ಎನ್ನುತ್ತಿದ್ದಾರೆ ಕಾಂಗ್ರೆಸ್ ಪರವಾಗಿರುವ ಗುತ್ತಿಗೆದಾರರು. ಇದಕ್ಕೆಲ್ಲಾ ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಬೆಲೆ ತರಬೇಕಾಗುತ್ತದೆ ಎಂದು ಕೇಂದ್ರ ಸಚಿವರು ಎಚ್ಚರಿಕೆ ನೀಡಿದರು.

ಗ್ಯಾರಂಟಿಗಳನ್ನು ನಿಲ್ಲಿಸಲು ಸರಕಾರ ನೆಪ ಹುಡುಕುತ್ತಿದೆ!

ಸರಕಾರಿ ಬಸ್ ಪ್ರಯಾಣ ದರವನ್ನು ಒಮ್ಮೆಲೇ ಶೇ.15ರಷ್ಟು ಏರಿಕೆ ಮಾಡಿರುವ ಬಗ್ಗೆಯೂ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು; ಕಾಂಗ್ರೆಸ್ ಸರಕಾರ ಗ್ಯಾರಂಟಿಗಳನ್ನು ನಿಲ್ಲಿಸಲು ಕಾರಣವನ್ನು ಹುಡುಕುತ್ತಿದೆ. ಹೇಗಾದರೂ ಮಾಡಿ ಗ್ಯಾರಂಟಿ ನಿಲ್ಲಿಸಲು ನೆಪ ಹುಡುಕುತ್ತಿದೆ ಎಂದು ದೂರಿದರು.

ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸಬೇಡಿ. ಸಾಕಷ್ಟು ಜನರಿಗೆ ಇದರಿಂದ ಅನುಕೂಲ ಆಗಿದೆ ಎಂದು ನೀವೇ ಹೇಳುತ್ತಿದ್ದೀರಿ. ಹಾಗಿದ್ದ ಮೇಲೆ ಮತ ಕೊಟ್ಟು ಅಧಿಕಾರ ನೀಡಿದ ಜನರಿಂದ ಅವುಗಳನ್ನು ಕಿತ್ತುಕೊಳ್ಳುವ ಕೆಲಸವನ್ನು ಸರಕಾರ ಮಾಡಬಾರದು. ಮಧ್ಯಮ ವರ್ಗದ ಜನರ ಬದುಕಿನ ಜತೆ ರಾಜ್ಯ ಸರಕಾರ ಚೆಲ್ಲಾಟವಾಡುತ್ತಿದೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಅತ್ತೆಯದನ್ನು ಅಳಿಯ ದಾನ ಮಾಡಿದ ಎನ್ನುವ ಮಾತಿನಂತೆ ಅವರಿಂದ ಕಿತ್ತು ಅವರಿಗೆ ಕೊಡುವುದಕ್ಕೆ ಇವರೇ ಆಗಬೇಕಾ? ಬಸ್ ಪ್ರಯಾಣ ದರ ಏರಿಕೆಯಿಂದ ಜನಸಾಮನ್ಯರಿಗೆ ಹೊರೆಯಾಗಲಿದೆ. ಯಾವುದೇ ಮಂತ್ರಿಯ ಮಕ್ಕಳು, ಶಾಸಕರ ಮಕ್ಕಳು ಸರಕಾರಿ ಬಸ್ ನಲ್ಲಿ ಓಡಾಡುವುದಿಲ್ಲ. ಓಡಾಡುವವರೆಲ್ಲಾ ಜನ ಸಾಮಾನ್ಯರು. ದಿನಕ್ಕೆ 10 ರೂಪಾಯಿ ಹೆಚ್ಚಿಗೆಯಾದರೂ ಅದು ಅವರಿಗೆ ಹೊರೆಯಾಗಲಿದೆ ಎಂದು ಕುಮಾರಸ್ವಾಮಿ ಅವರು ಕಳವಳ ವ್ಯಕ್ತಪಡಿಸಿದರು.

ಬಸ್ ದರ ಪ್ರಶ್ನಿಸಿದರೆ ಮಾಂಸ ತಿನ್ನುವುದಿಲ್ಲವಾ ಎಂದು ಹಾರಿಕೆಯ ಮಾತನಾಡುತ್ತಾರೆ ಸಚಿವರು. ಬಡವರು ಮಾಂಸ ತಿನ್ನುವುದರ ಮೇಲೆ ಏಕೆ ಇವರಿಗೇಕೆ ಕಣ್ಣು? ಬಡ ಮಧ್ಯಮ ವರ್ಗದವರು ವಾರಕ್ಕೆ ಒಮ್ಮೆ ಮಾಂಸ ಖರೀದಿ ಮಾಡಲು ಎಷ್ಟು ಕಷ್ಟಪಡುತ್ತಾರೆ ಗೊತ್ತಾ ಇವರಿಗೆ? ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅದಕ್ಕೆ ಜವರ ಕಾರ್ಯಕ್ರಮ ಏನು? ಅಷ್ಟು ಪರಿಜ್ಞಾನ ಬೇಡವೇ ಇವರಿಗೆ ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ರಾಜಕೀಯ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ರಾಹುಕಾಲ: 01:30PM ರಿಂದ 3:00PM, ಗುಳಿಕಕಾಲ: 09:00AM ರಿಂದ 10:30AM, ಯಮಗಂಡಕಾಲ: 06:00AM ರಿಂದ 07:30AM, Astrology

[ccc_my_favorite_select_button post_id="115027"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!