Cmsiddaramaiah| ಸಂಘಟನೆ-ಒಗ್ಗಟ್ಟು ಇಲ್ಲದಿದ್ದರೆ ಶೋಷಿತ ಸಮುದಾಯಗಳಿಗೆ ಶಕ್ತಿ ಬರುವುದಿಲ್ಲ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ಜಾತ್ಯತೀತ ದಾರ್ಶನಿಕ ಸಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ನುಡಿದರು.

537 ನೇ ಕನಕ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

ಕುರುಬ ಜಾತಿಯಲ್ಲಿ ಹುಟ್ಟಿ ಜಾತಿ ರಹಿತ ಸಮ‌ಸಮಾಜಕ್ಕಾಗಿ ಹೋರಾಡಿದ, ಜಾತ್ಯತೀತ ಸಂತ. ಮನುಕುಲದ ಏಳೆಗೆಗಾಗಿ ಶ್ರಮಿಸಿ ದಾಸ ಶ್ರೇಷ್ಠರಾದರು ಎಂದರು.

ಶರಣ ಸಾಹಿತ್ಯದಲ್ಲಿ ಅಣ್ಣ ಬಸವಣ್ಣ, ದಾಸ ಸಾಹಿತ್ಯದಲ್ಲಿ ಕನಕದಾಸರು ಅತ್ಯಂತ ಪ್ರಮುಖರು. ಬುದ್ದನಿಂದ ಕನಕದಾಸರವರೆಗೂ, ಆ ನಂತರವೂ ಬಹಳ ಪುಣ್ಯಾತ್ಮರು ಜಾತಿರಹಿತ ಸಮಾಜಕ್ಕಾಗಿ ಶ್ರಮಿಸಿದ್ದಾರೆ. ಅಂಬೇಡ್ಕರ್, ನಾರಾಯಣಗುರು ಮತ್ತು ಕನಕದಾಸರು ಕೂಡ ಜಾತಿ ವ್ಯವಸ್ಥೆ, ವರ್ಣ ವ್ಯವಸ್ಥೆಯ ಕಾರಣಕ್ಕೆ ಅವಮಾನಿತರಾಗಿದ್ದರು. ಯಾರೂ ಜನ್ಮತಃ ದಡ್ಡರಾಗಿರಲು ಸಾಧ್ಯವಿಲ್ಲ. ಕಾಳಿದಾಸರು ಶಾಕುಂತಲಾ ಬರೆದದ್ದು, ವ್ಯಾಸರು ಮಹಾಭಾರತ ಬರೆದದ್ದು, ವಾಲ್ಮೀಕಿ ರಾಮಾಯಣ ಬರೆದದ್ದೇ ಹುಟ್ಟಿನಿಂದ ಯಾರೂ ದಡ್ಡರಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದೆ ಎಂದರು.

ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದ ಕಾರಣದಿಂದ ನನಗೆ ಮುಖ್ಯಮಂತ್ರಿ ಅಗುವ ಅವಕಾಶ ಸಿಕ್ಕಿತು ಎಂದರು.

ಒಬ್ಬರಿಗೆ ಒಂದೇ ಮತ. ಎಲ್ಲಾ ಜಾತಿ, ಧರ್ಮ, ಅಂತಸ್ತಿವರಿಗೂ ಒಂದೇ ಮತ. ಈ ಸಮಾನತೆ ಆರ್ಥಿಕವಾಗಿ, ಸಾಮಾಜಿಕವಾಗಿಯೂ ಜಾರಿ ಆಗಬೇಕು. ಆಗ ಮಾತ್ರ ಸಮಾನತೆ ದಿಕ್ಕಿನಲ್ಲಿ ನಾವು ಮುನ್ನಡೆಯಲು ಸಾಧ್ಯ ಎಂದರು.

ಯಾವ ಧರ್ಮದಲ್ಲೂ ಮನುಷ್ಯ ತಾರತಮ್ಯ ಇಲ್ಕ. ಧರ್ಮವನ್ನು ರಾಜಕೀಯವಾಗಿ ಬಳಸಿಕೊಳ್ಳುವವರು ತಮ್ಮ ಲಾಭಕ್ಕಾಗಿ ತಾರತಮ್ಯ, ದ್ವೇಷ ಸೃಷ್ಟಿಸುತ್ತಾರೆ ಎಂದರು.

ಶೋಷಿತ ಸಮುದಾಯಗಳು ಜಾತಿ ಸಮ್ಮೇಳನ ಮಾಡುವುದು ತಪ್ಪಲ್ಲ. ಆದರೆ ಮುಂದುವರೆದ ಜಾತಿಗಳು ಜಾತಿ ಹೆಸರಲ್ಲಿ ಸಮ್ಮೇಳನ ನಡೆಸುವುದು ಸಾಮಾಜಕವಾಗಿ ತಪ್ಪಾಗುತ್ತದೆ. ಸಂಘಟನೆ-ಒಗ್ಗಟ್ಟು ಇಲ್ಲದಿದ್ದರೆ ಶೋಷಿತ ಸಮುದಾಯಗಳಿಗೆ ಶಕ್ತಿ ಬರುವುದಿಲ್ಲ ಎಂದರು.

ಮನುಷ್ಯ ಧರ್ಮ ಸ್ಥಾಪನೆ ಆಗುವವರೆಗೂ ನಾವೆಲ್ಲರೂ ಶ್ರಮಿಸುತ್ತಲೇ ಇರಬೇಕು.

ನಾನು ಎಲ್ಲಾ ಜಾತಿಯವರನ್ನೂ ಪ್ರೀತಿಸುತ್ತೇನೆ. ಆದರೆ ಜಾತಿ ಮಾಡುವವರನ್ನು ನಾನು ವಿರೋಧಿಸುತ್ತೇನೆಯೇ ಹೊರತು ಅವರನ್ನೂ ದ್ವೇಷಿಸುವುದಿಲ್ಲ. ಜಾತಿ ಕಾರಣದಿಂದ ಕನಕದಾಸರನ್ನು ಉಡುಪಿ ಮಠದ ಒಳಗೆ ಬಿಡಲಿಲ್ಲ ಎನ್ನುತ್ತಾ ಕನಕನ‌ ಕಿಂಡಿ ಸೃಷ್ಟಿಯಾದ ಪ್ರಸಂಗವನ್ನು ವಿವರಿಸಿದರು.

ಕನಕದಾಸರ 500 ನೇ ಜಯಂತಿಯನ್ನು ನಾನು ಸಾರಿಗೆ ಸಚಿವನಾಗಿದ್ದಾಗ ಆಗಿನ ಎಸ್.ಆರ್.ಬೊಮ್ಮಾಯಿ ಸರ್ಕಾರದಲ್ಲಿ ಆರಂಭಿಸಿದೆವು. ಬಳಿಕ ಇಡೀ ರಾಜ್ಯ ಪ್ರವಾಸ ಮಾಡಿ ಕಾಗಿನೆಲೆ ಗುರುಪೀಠವನ್ನು , ಮಠವನ್ನು ರೂಪಿಸಿದ್ದು ಕೂಡ ನಾನೇ. ಆದ್ದರಿಂದ ಇಡೀ ಸಮುದಾಯ ಒಟ್ಟಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು ಎಂದರು.

ಕಾಂತರಾಜ ವರದಿ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ

ನಾನು ಜಾತಿ ಜನಗಣತಿ ಪರವಾಗಿ ಇದ್ದೇವೆ. ಕಾಂತರಾಜ ಅವರ ವರದಿಯನ್ನು ಮುಂದಿನ ಕ್ಯಾಬಿನೆಟ್ ನಲ್ಲಿ ಇಟ್ಟು ಚರ್ಚಿಸುವ ಉದ್ದೇಶ ಕೂಡ ಇದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!