Ghati subramanya| ಘಾಟಿ ಕ್ಷೇತ್ರದಲ್ಲಿ ವಿಜೃಂಭಣೆಯ ಬ್ರಹ್ಮ ರಥೋತ್ಸವ: ಸಾವಿರಾರು ಮಂದಿ ಭಾಗಿ| ಗರುಡ ಪ್ರದಕ್ಷಿಣೆ ಹಾಕಿದ VIDEO ನೋಡಿ

ದೊಡ್ಡಬಳ್ಳಾಪುರ: ದಕ್ಷಿಣ ಭಾರತದಲ್ಲಿ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಶ್ರೀ ಸುಬ್ರಮಣ್ಯ ಘಾಟಿ ಪುಣ್ಯಕ್ಷೇತ್ರದಲ್ಲಿ (Ghati subramanya) ಭಾನುವಾರವಾದ ಇಂದು ಸ್ವಾಮಿಯ ಬ್ರಹ್ಮರಥೋತ್ಸವ ಅತ್ಯಂತ ವೈಭವದಿಂದ ನಡೆಯಿತು.

ಸಾವಿರಾರು ಜನ ಭಕ್ತಾಧಿಗಳು ರಾಜ್ಯದ ಹಲವು ಪ್ರದೇಶಗಳಿಂದಲೇ ಅಲ್ಲದೇ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಿಂದಲೂ ರಥೋತ್ಸವಕ್ಕೆ ಆಗಮಿಸಿದ್ದರು.

ಭಾನುವಾರ ಮಧ್ಯಾಹ್ನ 12-15 ಗಂಟೆಗೆ ಸ್ವಾಮಿಯನ್ನು ಪ್ರತಿಷ್ಠಿಸಲಾಗಿದ್ದ ತೇರನ್ನು ಅರ್ಚಕರ ವೇದಘೋಷಗಳ ನಡುವೆ ಭಕ್ತಾಧಿಗಳು ಎಳೆದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್ ಮುನಿಯಪ್ಪ ರಥೋತ್ಸವಕ್ಕೆ ಚಾಲನೆ ನೀಡಿದರು, ಜಿಲ್ಲಾಧಿಕಾರಿ ಶಿವಶಂಕರ್, ಶಾಸಕ ಧೀರಜ್ ಮುನಿರಾಜು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಸುಮಾರು 600 ವರ್ಷಗಳ ಇತಿಹಾಸವಿರುವ ಘಾಟಿ ಪುಣ್ಯಕ್ಷೇತ್ರದಲ್ಲಿ ಶ್ರೀ ಸುಬ್ಯಮಣ್ಯ ಸ್ವಾಮಿ ಸರ್ಪ ರೂಪದಲ್ಲಿ ನೆಲೆಸಿದ್ದಾರೆ.

ದೇವಾಲಯದ ಗರ್ಭಗುಡಿಯಲ್ಲಿರುವ ಏಕಶಿಲೆ ವಿಗ್ರಹದಲ್ಲಿ ಮುಂಭಾಗದಲ್ಲಿ ಸುಬ್ರಮಣ್ಯ,ಹಿಂಭಾಗದಲ್ಲಿ ನರಸಿಂಹಸ್ವಾಮಿ ನೆಲೆಸಿರುವುದು ಘಾಟಿಕ್ಷೇತ್ರದಲ್ಲಿ ಬಿಟ್ಟರೆ ಬೇರೆಲ್ಲೂ ಕಾಣುವುದಿಲ್ಲ.

ಸರ್ಪ ದೋಷ ಮತ್ತು ಕುಜದೋಷಗಳಿರುವವರು ಇಲ್ಲಿ ನಾಗರಕಲ್ಲನ್ನು ಪ್ರತಿಷ್ಠಿಸಿ ಪೂಜಿಸಿದರೆ ದೋಷನಿವಾರಣೆಯಾಗುತ್ತದೆಂಬುದು ಅದೇರೀತಿ ಇಲ್ಲಿನ ದೇವಾಲಯದ ಹಿಂಭಾಗದಲ್ಲಿರುವ ಕಳ್ಯಾಣಿಗಳಲ್ಲಿ ಸ್ನಾನ ಮಾಡಿದರೆ ಸರ್ವ ರೋಗಗಳು ವಾಸಿಯಾಗುತ್ತವೆ ಎಂದು ಭಕ್ತಾಧಿಗಳ ವಿಶ್ವಾಸ.

ಘಾಟಿ ಕ್ಷೇತ್ರದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ರತಿನಿತ್ಯವೂ ಎಲ್ಲೆಂದರಲ್ಲಿ ಸರ್ಪಗಳು ಕಾಣಿಸುತ್ತಿರುತ್ತವೆಂದು. ಆದರೆ ಸರ್ಪಗಳಿಗೆ ಗ್ರಾಮಸ್ತರಾಗಲಿ,ಗ್ರಾಮಸ್ತರಿಗೆ ಸರ್ಪಗಳಾಗಲೀ ಯಾವುದೇ ಹಾನಿ ಮಾಡುವುದಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ.

ಶ್ರೀ ಸುಬ್ರಹ್ಮಣ್ಯಸ್ವಾಮಿಯ ದರ್ಶನ ಪಡೆಯಲು ಬೆಳಗಿನಿಂದಲೇ ಭಕ್ತಾದಿಗಳು ಸಾಲುಗಟ್ಟಿ ನಿಂತಿದ್ದರು. ಕ್ಷೇತ್ರದಲ್ಲಿರುವ ನಾಗರಕಲ್ಲುಗಳಿಗೆ ಭಕ್ತ ಸಮೂಹ ಹಾಲೆರೆದು ಪೂಜಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಜಾತ್ರೆಯ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ತಾಲೂಕು ಸವಿತಾ ಯುವ ಜನ ವೇದಿಕೆ, ಆಂಧ್ರ ದೇವಾಂಗ ಸಂಘ, ನಗರ್ತರ ಸಂಘ ಸೇರಿದಂತೆ ವಿವಿಧ ಭಕ್ತ ಮಂಡಲಿಗಳಿಂದ ಅರವಂಟಿಗೆ ಹಾಗೂ ಅನ್ನ ಸಂತರ್ಪಣೆಗಳನ್ನು ಏರ್ಪಡಿಸಲಾಗಿತ್ತು.

ವೀಕೆಂಡ್ ಸಾವಿರಾರು ಮಂದಿ ಭಾಗಿ

ಷಷ್ಠಿ ಹಾಗೂ ಭಾನುವಾರ ರಜೆಯ ಕಾರಣ ರಥೋತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದು, ಟ್ರಾಫಿಕ್ ಜಾಮ್ ಉಂಟಾಗಿತ್ತು. ದೇವಾಲಯಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ನೆರವು, ಮಾಹಿತಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಪಿಸುವ ಸಲುವಾಗಿ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಗ್ರಾಮ ಪಂಚಾಯಿತಿ, ನಗರಸಭೆ ಹಾಗೂ ವಿವಿಧ ಇಲಾಖೆಗಳ ತಾಲ್ಲೂಕು ಹಂತದ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ವಹಿಸಲಾಗಿತ್ತು.

ರಥೋತ್ಸವ ಕರ್ತವ್ಯಕ್ಕೆ ನಿಯೋಜನೆಗಳೊಂಡಿರುವ ಎಲ್ಲಾ ಅಧಿಕಾರಿಗಳು ಬೆಳಿಗ್ಗೆ 4 ಗಂಟೆಯಿಂದಲೇ ಹಾಜರಿದ್ದರು. ಭಕ್ತರ ಸಹಾಯಕ್ಕಾಗಿ ಮಾಹಿತಿ ಕೇಂದ್ರವನ್ನು ತೆರೆಯಲಾಗಿತ್ತು.

ಭದ್ರತಾ ವ್ಯವಸ್ಥೆ: ಘಾಟಿ ಕ್ಷೇತ್ರಕ್ಕೆ ಬಸ್ಗಳು ಗೌರಿಬಿದನೂರು ರಸ್ತೆಯ ಮಾಕಳಿ ಮಾರ್ಗವಾಗಿ ಸಂಚರಿಸಲಿವೆ. ದೇವಾಲಯದಿಂದ ದೂರದಲ್ಲೇ ಬಸ್ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.

ಬಸ್ ನಿಲ್ದಾಣದಿಂದ ಹಾಗೂ ಕಾರುಗಳ ನಿಲುಗಡೆ ಸ್ಥಳದಿಂದ ದೇವಾಲಯದ ಬಳಿಗೆ ಹೋಗಲು ಹಿರಿಯ ನಾಗರೀಕರು, ಮಕ್ಕಳಿಗೆ ಉಚಿತ ಆಟೋ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು.

ಕಾರು, ಬೈಕ್ಗಳ ಮೂಲಕ ಬರುವ ಜನರು ಕಂಟನಕುಂಟೆ, ಹಾಡೋನಹಳ್ಳಿ ಮಾರ್ಗವಾಗಿ ಘಾಟಿ ಕ್ಷೇತ್ರಕ್ಕೆ ಬರಲು ಪ್ರತ್ಯೇಕ ಮಾರ್ಗ ನಿಗದಿ ಮಾಡಲಾಗಿದೆ. ಕಾರು ಹಾಗೂ ಬೈಕ್ಗಳ ನಿಲುಗಡೆಗಾಗಿಯೇ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು.

ಈ ಎಲ್ಲಾ ಉಸ್ತುವಾರಿಗಳನ್ನು ನೋಡಿಕೊಳ್ಳಲು 10 ಜನ ಇನ್ಸ್ಪೆಕ್ಟರ್, 15 ಜನ ಸಬ್ ಇನ್ಸ್ಪೆಕ್ಟರ್, 400 ಜನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದಲ್ಲದೆ ಸಿಸಿ ಟಿವಿ ಕ್ಯಾಮರಗಳನ್ನು ಅಳವಡಿಸಲಾಗಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆಗಳಿಂದ ಕೆಎಸ್ಆರ್ಟಿಸಿ ಬಸ್ಗಳ ಸೌಲಭ್ಯ ಇತ್ತು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!