Cmsiddaramaiah: BJP ಸರ್ಕಾರದಲ್ಲಿ, ಕುಮಾರಸ್ವಾಮಿ ಸರ್ಕಾರದಲ್ಲಿ ಬಸ್ ಟಿಕೆಟ್ ಬೆಲೆ ಜಾಸ್ತಿ ಮಾಡಿಲ್ವಾ..?; ಸಿಎಂ ಪ್ರಶ್ನೆ

ದಾವಣಗೆರೆ: ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದಲ್ಲಿ 60% ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿರುವ ಬಗ್ಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ

ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬರವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ ಎಂದು ಪ್ರಶ್ನಿಸಿದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ:ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ

ಕೆಪಿಸಿಸಿ, ಮುಖ್ಯಮಂತ್ರಿಗಳ ಬದಲಾವಣೆಯ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಈ ವಿಷಯಗಳ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

ಖಾಲಿ ಇರುವ ಸಚಿವ ಸ್ಥಾನಗಳನ್ನು ತುಂಬುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾಗೇಂದ್ರ ಅವರ ರಾಜೀನಾಮೆಯಿಂದ ಖಾಲಿಯಾಗಿರುವ ಸಚಿವ ಸ್ಥಾನವನ್ನು ತುಂಬುವ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದರು.

ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ಸಿದ್ದ

ಜಿಲ್ಲಾ ಮತ್ತು ತಾಲ್ಲೂಕು ಪಂಚಾತಿಗಳು ಚುನಾವಣೆಗಳು ನಡೆದು ಐದು ವರ್ಷಗಳಾಗಿವೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ವಿಷಯ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ ಎಂದರು.

ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ

ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ರಾಜಕೀಯ ಚರ್ಚೆ ನಡೆದಿಲ್ಲ

ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಹಲವು ಸಚಿವರು ಸಭೆ ಸೇರಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಊಟಕ್ಕೆ ಸೇರುವುದೇ ತಪ್ಪೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕೆಂದು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಬಜೆಟ್ ನಲ್ಲಿ ಘೋಷಿಸಲಾಗಿತ್ತು ಎಂಬುದಕ್ಕೆ ಉತ್ತರಿಸಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಮಾರ್ಚ್ ನಲ್ಲಿ ಬಜೆಟ್ ಮಂಡನೆ

ಈ ಬಾರಿಯ ಬಜೆಟ್ ನ್ನು ಮಾರ್ಚ್ ನಲ್ಲಿ ಮಂಡಿ. ಆಯವ್ಯಯ ಪೂರ್ವಭಾವಿ ಚರ್ಚೆ ಪ್ರಾರಂಭವಾದ ನಂತರ ದಿನಾಂಕವನ್ನು ತಿಳಿಸಲಾಗುವುದು ಎಂದರು.

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!