Nikhil kumaraswamy| JDS ರಾಜ್ಯಾಧ್ಯಕ್ಷ ಹುದ್ದೆ: ನಿಖಿಲ್ ಕುಮಾರಸ್ವಾಮಿ ಮಹತ್ವದ ಹೇಳಿಕೆ..!

ರಾಯಚೂರು: ರಾಜ್ಯಾಧ್ಯಕ್ಷ ಸ್ಥಾನ ಹಾಗೂ ಇತರ ಯಾವುದೇ ಹುದ್ದೆಗಾಗಿ ಹಪಾಹಪಿಸುತ್ತಿಲ್ಲ. ಪಕ್ಷದ ರಾಜ್ಯಾಧ್ಯಕ್ಷನಾಗಬೇಕೆನ್ನುವ ಬಯಕೆ ನನಗಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil kumaraswamy) ತಿಳಿಸಿದರು

ರಾಯಚೂರು ಜಿಲ್ಲೆಯ ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ನೊಂದಣಿ ಮತ್ತು ಮಾಜಿ ಸಚಿವರಾದ ಶ್ರೀ ವೆಂಕಟರಾವ್ ನಾಡಗೌಡ ಅವರ ಹುಟ್ಟುಹಬ್ಬದ ಸಮಾರಂಭ ಕಾರ್ಯಕ್ರಮಕ್ಕೂ ಮುನ್ನ ನಿಖಿಲ್ ಕುಮಾರಸ್ವಾಮಿ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಬದಲಾವಣೆ ಪಕ್ಷದ ವೇದಿಕೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ. ಕುಮಾರಣ್ಣ ಅವರು ಕೇಂದ್ರ ಸಚಿವರಾಗಿ ಪಕ್ಷದ ಅಧ್ಯಕ್ಷರಾಗಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಮಾಡುವಂತಿದ್ದರೆ ಪಕ್ಷದಲ್ಲಿ ಹಿರಿಯರು, ಅನುಭವಿಗಳು ಇದ್ದಾರೆ. ಅವರಿಗೆ ಆದ್ಯತೆ ನೀಡಲಾಗುತ್ತದೆ. ಈಗ ಈ ವಿಷಯ ಅಪ್ರಸ್ತುತ ಎಂದರು.

ಬಿಜೆಪಿ ಜತೆಗೂಡಿಯೇ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ

ಜೆಡಿಎಸ್ ಪಕ್ಷ ಎನ್‌ಡಿಎ ಅಂಗವಾಗಿರುವದರಿಂದ ಮುಂಬರುವ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳು ಹೊಂದಾಣಿಕೆಯೊಂದಿಗೆ ಸ್ಪರ್ಧಿಸಲಾಗುವುದು. ವಿವಿಧ ಕ್ಷೇತ್ರಗಳಲ್ಲಿರುವ ಗೊಂದಲಗಳನ್ನು ರಾಜ್ಯ ನಾಯಕರು ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳಲಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ತಿರಸ್ಕಾರ ಮಾಡುವ ಕಾಲ ದೂರವಿಲ್ಲ ಎಂದರು ತಿಳಿಸಿದರು.

ಕಾಂಗ್ರೆಸ್ ಆಡಳಿತ ವಿರುದ್ದ ಜನತೆ ಬೇಸತ್ತಿದ್ದಾರೆ

ರಾಜ್ಯದಲ್ಲಿ ಕಾಂಗ್ರೆಸ್ ಭ್ರಷ್ಟ ಆಡಳಿತ ನಡೆಸುತ್ತಿದ್ದು, ಮುಡಾ ಹಗರಣ, ಭೋವಿ ನಿಗಮ, ವಾಲ್ಮೀಕಿ ಅಭಿವೃದ್ದಿ ನಿಗಮ ಭ್ರಷ್ಟಾಚಾರ, ಹಾಲಿನ ದರ, ಬಸ್ ದರ ಏರಿಕೆ ಖಂಡಿಸಿ ಬಿಜೆಪಿಯೊಂದಿಗೆ ಜೊತೆಗೂಡಿ ರಾಜ್ಯದ ಜನತೆಯ ಪರ ಧ್ವನಿ ಎತ್ತುವ ಕೆಲಸ ಜೆಡಿಎಸ್ ಮಾಡುತ್ತಿದೆ. ಕಾಂಗ್ರೆಸ್ ಆಡಳಿತ ವಿರುದ್ದ ಜನತೆ ಬೇಸತ್ತಿದ್ದಾರೆ ಎಂದು ಆರೋಪಿಸಿದರು.

ಯುವ ಘಟಕದ ರಾಜ್ಯಾಧ್ಯಕ್ಷನಾಗಿ ರಾಜ್ಯಾದಾದ್ಯಂತ ಪಕ್ಷ ಸಂಘಟನೆಗೆ ಶ್ರಮಿಸುತ್ತಿದ್ದೇನೆ. ಈಗಾಗಲೇ ಏಳು ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ರಾಯಚೂರಿಗೂ ಬರಬೇಕಿತ್ತು. ಆದರೆ ಉಪಚುನಾವಣೆ ಹಿನ್ನಲೆಯಲ್ಲಿ ಸಾಧ್ಯವಾಗಿರಲಿಲ್ಲ. ಮೈಸೂರು ಪ್ರಾಂತ್ಯದ ಜೆಡಿಎಸ್‌ಗೆ ರಾಜಕೀಯ ಶಕ್ತಿ ತುಂಬಿದೆ. ಈ ಭಾಗದಲ್ಲಿ ಜೆಡಿಎಸ್ ಪಕ್ಷಕ್ಕೆ ಉತ್ತಮ ಒಲವಿದೆ. ಮುಂದಿನ ದಿನಗಳಲ್ಲಿ ಹಿರಿಯರ ಅನುಭವನಗಳನ್ನು ಪಡೆದು ಪಕ್ಷ ಸಂಘಟನೆಗೆ ದುಡಿಯುವೆ ಎಂದರು.

ಚುನಾವಣೆಯ ಮೂರು ತಿಂಗಳ ಮುಂಚೆ ಹಣ ಬಿಡುಗಡೆ ಮಾಡ್ತಾರೆ

ಚನ್ನಪಟ್ಟಣ ಉಪಚುನಾವಣೆಯಲ್ಲಿ ನನ್ನ ಸೋಲಿಗೆ ನಾನಾ ಕಾರಣಗಳಿವೆ. ಮೂರು ದಿನ ಮುಂಚೆಯೇ ಗೃಹಲಕ್ಷ್ಮೀ ಯೋಜನೆಯ ಮೂರು ತಿಂಗಳ ಹಣ ಚುನಾವಣೆ ಎರಡು ದಿನಗಳು ಇರುವ ಮುನ್ನ ಮಹಿಳೆಯರ ಖಾತೆಗೆ ಹಾಕಿದರು. ರಾಜ್ಯ ಸರಕಾರ ಅಧಿಕಾರ ದುರುಪಯೋಗ ಮಾಡಿಕೊಂಡು ಮತ ಪಡೆದುಕೊಂಡಿರುವುದು ನಾಚಿಕೆಗೇಡು. ಜೆಡಿಎಸ್ ಬಲಿಷ್ಠವಾಗಿದ್ದಾಗ ಮನೆಯವರು ನಿಂತುಕೊಂಡು ಚುನಾವಣೆ ಎದುರಿಸುತ್ತಾರೆ. ಸೋಲಿನ ಭೀತಿಯಿದ್ದರೆ ಕಾರ್ಯಕರ್ತರನ್ನು ಬಲಿ ಕೊಡುತ್ತಾರೆ ಎನ್ನುವ ವಿರೋಧಿಗಳ ಆರೋಪ ಸುಳ್ಳಾಗಿಸಲು ನಾನು ಸ್ಪರ್ಧೆ ಮಾಡಬೇಕಾಯಿತು ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ವೆಂಕಟರಾವ ನಾಡಗೌಡ, ದೇವದುರ್ಗಾ ಶಾಸಕಿ ಜಿ.ಕರೆಮ್ಮ ನಾಯಕ, ಮಾನ್ವಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ರಾಯಚೂರು ಜಿಲ್ಲಾಧ್ಯಕ್ಷ ಎಂ.ವಿರುಪಾಕ್ಷಿ, ಕೊಪ್ಪಳ ಜಿಲ್ಲಾಧ್ಯಕ್ಷ ಸಿ.ವಿ.ಚಂದ್ರಶೇಖರ, ಮುಖಂಡರಾದ ಮಹಾಂತೇಶ ಪಾಟೀಲ್ ಅತ್ತನೂರು, ಶಿವಶಂಕರ ವಕೀಲ, ಬಸವರಾಜ ನಾಡಗೌಡ, ಚಂದ್ರಭೂಪಾಲ ನಾಡಗೌಡ ಸೇರಿದಂತೆ ಅನೇಕರು ಇದ್ದರು

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!