DKShivakumar: ದೆಹಲಿ ಚುನಾವಣೆಗೆ ಕಾಂಗ್ರೆಸ್ ಮೊದಲ ಗ್ಯಾರಂಟಿ: ಗೃಹಲಕ್ಷ್ಮಿ’ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ”

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ ಡಿಕೆ ಶಿವಕುಮಾರ್ (DKShivakumar) ಅವರು ಸೋಮವಾರ ಪ್ರಕಟಿಸಿದರು.

ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ದೆಹಲಿ ಕಾಂಗ್ರೆಸ್ ನ ಚುನಾವಣೆ ಪ್ರಣಾಳಿಕೆಯ ಭಾಗವಾಗಿ ಮೊದಲ ಗ್ಯಾರಂಟಿ ಭರವಸೆಯನ್ನು ಘೋಷಿಸಿದರು.

ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, “ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ “ಪ್ಯಾರಿ ದೀದಿ ಯೋಜನೆ” ಜಾರಿ ಮಾಡಿ ದೆಹಲಿಯ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ನೀಡಲಾಗುವುದು. ಉಳಿದ ಗ್ಯಾರಂಟಿ ಯೋಜನೆಯನ್ನು ಮುಂದಿನ ದಿನಗಳಲ್ಲಿ ನಮ್ಮ ನಾಯಕರು ತಿಳಿಸಲಿದ್ದಾರೆ” ಎಂದು ಹೇಳಿದರು.

“ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿ ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ನಾನಿಂದು ಇಲ್ಲಿ ಪ್ರಮುಖ ಯೋಜನೆಯ ಭರವಸೆ ನೀಡುತ್ತಿದ್ದೇನೆ. ನೂರು ವರ್ಷಗಳ ಹಿಂದೆ ಅಂದರೆ 1924ರ ಡಿ.26 ರಂದು ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದರು. ಅದರ ಶತಮಾನೋತ್ಸವವನ್ನು ನಾವು ಇತ್ತೀಚೆಗಷ್ಟೇ ಆಚರಿಸಿದ್ದೇವೆ.

ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಾಗದಲ್ಲಿ ಇರುವ ಬಾವಿಯಲ್ಲಿನ ನೀರು ತೆಗೆದುಕೊಂಡು ಸಿದ್ದರಾಮಯ್ಯ ಅವರು ಸೇರಿದಂತೆ ನಮ್ಮ ಪಕ್ಷದ ನಾಯಕರು ಅಲ್ಲಿನ ಜಾಗವನ್ನು ಸ್ವಚ್ಛ ಮಾಡಿ ಕರ್ನಾಟಕ ರಾಜ್ಯವನ್ನು ಭ್ರಷ್ಟ ಸರ್ಕಾರದಿಂದ ಮುಕ್ತಗೊಳಿಸುವ ಪಣತೊಟ್ಟೆವು.

ಇದೇ ಸಂದರ್ಭದಲ್ಲಿ ನಮ್ಮ ಪಕ್ಷದ ಮೊದಲ ಗ್ಯಾರಂಟಿ ಯೋಜನೆ ಗೃಹಜ್ಯೋತಿಯನ್ನು ಘೋಷಣೆ ಮಾಡಲಾಯಿತು. ನಂತರ ಗೃಹಲಕ್ಷ್ಮಿ ಯೋಜನೆಯನ್ನು ಪ್ರಿಯಾಂಕಾ ಗಾಂಧಿ ಅವರು ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಅವರು ಇದು ಕೇವಲ ಭರವಸೆಯಾಗಬಾರದು. ಈ ಯೋಜನೆ ಜಾರಿ ಬಗ್ಗೆ ಜನರಲ್ಲಿ ನಂಬಿಕೆ ಹುಟ್ಟಬೇಕು ಎಂದು ಹೇಳಿದರು. ಹೀಗಾಗಿ ನಾನು ಹಾಗೂ ಸಿದ್ದರಾಮಯ್ಯ ಅವರು ಗ್ಯಾರಂಟಿ ಚೆಕ್ ಗೆ ಸಹಿ ಹಾಕಿದೆವು. ನಂತರ ಸರ್ಕಾರ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಅನುಮೋದನೆ ನೀಡಲಾಯಿತು.

ಮೊದಲ ಮೂರು ತಿಂಗಳಲ್ಲಿ ಎಲ್ಲಾ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದೆವು. ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಉಚಿತ ಸರ್ಕಾರಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಬಡವರಿಗೆ 10 ಕೆ.ಜಿ ಅಕ್ಕಿ ನೀಡಲಾಗುತ್ತಿದೆ. ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ, ಪ್ರತಿ ಮನೆಗೆ 200 ಯೂನಿಟೆ ವರೆಗೂ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ನೀಡಲಾಗುತ್ತಿದೆ” ಎಂದರು ಹೇಳಿದರು.

ಮಾಸಿಕ 4-5 ಸಾವಿರ ಉಳಿತಾಯ

ಈ ಯೋಜನೆಗಳಿಗಾಗಿ 56 ಸಾವಿರ ಕೋಟಿ ಹಣವನ್ನು ಬಜೆಟ್ ನಲ್ಲಿ ಮೀಸಲಿಡಲಾಗಿದೆ. 1.22 ಕೋಟಿ ಮಹಿಳೆಯರು ಪ್ರತಿ ತಿಂಗಳು 2 ಸಾವಿರ ಹಣ ಪಡೆಯುತ್ತಿದ್ದಾರೆ. ಈ ಯೋಜನೆಯಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಲ್ಲಿ ಆರ್ಥಿಕ ಬದಲಾವಣೆ ತರಲಾಗಿದೆ.

ಪ್ರತಿ ತಿಂಗಳು 4-5 ಸಾವಿರ ಉಳಿತಾಯವಾಗುತ್ತಿದೆ. ಇದರಿಂದ ರಾಜ್ಯದ ಆರ್ಥಇಕತೆ ಪ್ರಗತಿ ಸಾಧಿಸುತ್ತಿದೆ. ಸಮಾಜದ ಪ್ರತಿ ವರ್ಗದ ಹಿತವನ್ನು ಕಾಯಬೇಕು ಎಂಬುದು ಮಹಾತ್ಮಾ ಗಾಂಧಿ ಅವರ ಸಂದೇಶವಾಗಿತ್ತು. ಹೀಗಾಗಿ ನಮ್ಮ ಸರ್ಕಾರ ಈ ಯೋಜನೆ ಜಾರಿ ಮಾಡಿದೆ ಎಂದು ತಿಳಿಸಿದರು.

ಇದೇ ವೇಳೆ ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಫಲಾನುಭವಿಗಳ ಕುಟುಂಬಗಳಲ್ಲಿ ಆಗಿರುವ ಬದಲಾವಣೆ, ನೆರವಿನ ಕುರಿತ ವಿಡಿಯೋಗಳನ್ನು ಪ್ರಸಾರ ಮಾಡಲಾಯಿತು.

“ನಾವು ಇಲ್ಲಿ ತೋರಿಸಿರುವ ವಿಡಿಯೋಗಳು ನಾವು ಮಾಡಿರುವುದಲ್ಲ. ಮಾಧ್ಯಮಗಳು ವರದಿ ಮಾಡಿರುವ ವಿಡಿಯೋಗಳನ್ನು ನಿಮ್ಮ ಮುಂದೆ ಇಟ್ಟಿದ್ದೇವೆ. ಈ ಯೋಜನೆಯಲ್ಲಿ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲು ಯಾವುದೇ ಮಧ್ಯವರ್ತಿಗಳಿಲ್ಲ. ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ರವಾನಿಸಲಾಗುತ್ತಿದೆ” ಎಂದರು.

ಟೀಕಿಸಿದವರಿಂದಲೇ ನಮ್ಮ ಯೋಜನೆ ನಕಲು

“ನಾವು ಈ ಯೋಜನೆ ಘೋಷಣೆ ಮಾಡಿದಾಗ, ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಕರ್ನಾಟಕ ಸರ್ಕಾರ ದಿವಾಳಿಯಾಗಲಿದೆ ಎಂದು ಮಧ್ಯಪ್ರದೇಶದಲ್ಲಿ ಹೇಳಿದರು. ನಂತರ ಮಹಾರಾಷ್ಟ್ರದಲ್ಲೂ ನಮ್ಮ ಯೋಜನೆ ವಿರುದ್ಧ ಅಪಪ್ರಚಾರ ಮಾಡಿದರು.

ಅಂತಿಮವಾಗಿ ಎಲ್ಲಾ ರಾಜ್ಯಗಳ ಚುನಾವಣೆಯಲ್ಲೂ ಅವರೇ ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವುದು ರಾಜಕೀಯ ಉದ್ದೇಶಕ್ಕಾಗಿ ಅಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಕಲ್ಯಾಣಕ್ಕಾಗಿ, ರಕ್ಷಣೆಗಾಗಿ ಈ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ” ಎಂದು ತಿಳಿಸಿದರು.

“ಮೋದಿ ಅವರ ಸರ್ಕಾರ ರೈತರ ಆದಾಯ ಡಬಲ್ ಮಾಡುವುದಾಗಿ ಹೇಳಿತ್ತು. ಆದರೆ ಬೆಲೆಗಳನ್ನು ಡಬಲ್ ಮಾಡಿತು. ಜನಧನ್ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಹೇಳಿದಂತೆ ಭರವಸೆ ಈಡೇರಿಸಲಿಲ್ಲ. ಬಿಜೆಪಿ ಸರ್ಕಾರಗಳು ಕೊಟ್ಟ ಮಾತನ್ನು ಎಂದಿಗೂ ಉಳಿಸಿಕೊಂಡಿಲ್ಲ. ಆದರೂ ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿವೆ.

ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಆಹಾರ ಭದ್ರತಾ ಕಾಯ್ದೆ, ಶೈಕ್ಷಣಿಕ ಹಕ್ಕು, ಗ್ರಾಮೀಣ ಉದ್ಯೋಗ ಖಾತರಿ, ಮಾಹಿತಿ ಹಕ್ಕು ಸೇರಿದಂತೆ ಸಂವಿಧಾನಿಕ ತಿದ್ದುಪಡಿ ಮೂಲಕ ಗ್ಯಾರಂಟಿ ಯೋಜನೆ ನೀಡಲಾಗಿತ್ತು.

ಕಾಂಗ್ರೆಸ್ ಪಕ್ಷ ಸುದೀರ್ಘ ಅವಧಿಗಳ ಕಾಲ ದೇಶವನ್ನು ಆಳಿದೆ. ಮತ್ತೆ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಒಳ್ಳೆಯ ದಿನಗಳು ಮತ್ತೆ ಬರಲಿವೆ. ದೆಹಲಿ ಹಾಗೂ ಇಲ್ಲಿನ ಜನರ ಬದುಕಿನಲ್ಲಿ ಬದಲಾವಣೆ ತರಲು ಜನರು ನಮಗೆ ಮತ್ತೊಂದು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ” ಎಂದು ತಿಳಿಸಿದರು.

ಹೊಸ ವರ್ಷ ದೆಹಲಿಯಲ್ಲಿ ಬದಲಾವಣೆ ತರಲಿ

“ಎಲ್ಲರಿಗೂ ಹೊಸವರ್ಷದ ಶುಭಾಷಯಗಳು. ಈ ಹೊಸ ವರ್ಷ ದೆಹಲಿಯಲ್ಲಿ ಬದಲಾವಣೆಯನ್ನು ತರಲಿ. ನೀವೆಲ್ಲರೂ ಕಾಂಗ್ರೆಸ್ ಸರ್ಕಾರ ಬರಲು ಸಹಾಯ ಮಾಡುವ ನಿರೀಕ್ಷೆಯಿದೆ. ಕಾಂಗ್ರೆಸ್ ಪಕ್ಷ ಕೊಟ್ಟ ಮಾತನನ್ನು ಉಳಿಸಿಕೊಂಡಿದೆ. ಇದು ಕಾಂಗ್ರೆಸ್ ಪಕ್ಷದ ಇತಿಹಾಸ. ಮುಂದೆಯೂ ನಾವು ಕೊಟ್ಟ ಮಾತನ್ನು ಉಳಿಸಿಕೊಂಡು ಕೆಲಸ ಮಾಡುತ್ತೇವೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ” ಎಂದು ತಿಳಿಸಿದರು.

ಪ್ರಶ್ನೋತ್ತರ

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕತೆ ಹದಗೆಡುತ್ತಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ನಾವು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಅಗತ್ಯವಾದ ಅನುದಾನ ಮೀಸಲಿಟ್ಟಿದ್ದೇವೆ. ನಮ್ಮ ರಾಜ್ಯದ ಬಜೆಟ್ ಗಾತ್ರ 3.70 ಲಕ್ಷ ಕೋಟಿಗೂ ಹೆಚ್ಚಿದೆ. ಅದರಲ್ಲಿ 56 ಸಾವಿರ ಕೋಟಿ ಈ ಯೋಜನೆಗಳಿಗೆ ವೆಚ್ಚ ಮಾಡಲಾಗುತ್ತಿದೆ.

ಫಲಾನುಭವಿಗಳ ಖಾತೆಗೆ ಹಣ ತಲುಪುವುದು 10-15 ದಿನಗಳು ವಿಳಂಬವಾಗಬಹುದು, ಆದರೆ ನಮ್ಮ ಯೋಜನೆ ನಿಲ್ಲುವುದಿಲ್ಲ. ದೇಶದಲ್ಲಿ ಮಹಾರಾಷ್ಟ್ರ ನಂತರ ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಆರ್ಥಿಕತೆ ಹೊಂದಿರುವ ರಾಜ್ಯ. ನಾವು ದೇಶಕ್ಕೆ ಹೆಚ್ಚು ತೆರಿಗೆ ನೀಡುತ್ತಿದ್ದು, ನಮ್ಮ ರಾಜ್ಯ ಆರ್ಥಿಕವಾಗಿ ಸುಭದ್ರವಾಗಿದೆ” ಎಂದರು.

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಜನರಿಗೆ ಆರ್ಥಿಕ ಶಕ್ತಿ ತುಂಬುವುದು ಅಭಿವೃದ್ಧಿಯಲ್ಲವೇ? ಪ್ರತಿ ಕುಟುಂಬ, ಜನರು ಆರ್ಥಿಕವಾಗಿ ಸುಭದ್ರವಾಗುವುದು ಅಭಿವೃದ್ಧಿಯಲ್ಲವೇ? ವ್ಯಾಪಾರಿಗಳು, ಜನ ಸಾಮಾನ್ಯರ ಬಳಿ ಹಣ ಹರಿದಾಡುತ್ತಿದ್ದು, ಸಂತೋಷವಾಗಿದ್ದಾರೆ. ಇದು ಅಭಿವೃದ್ಧಿಯಲ್ಲವೇ? ಜನರಿಗೆ ವೈಯಕ್ತಿಕವಾಗಿ ಆರ್ಥಿಕ ಬಲ ತುಂಬುವುದು ನಮ್ಮ ಯೋಜನೆಗಳ ಉದ್ದೇಶ. ಜನರು ಶಕ್ತಿಶಾಲಿಯಾದರೆ ಅವರ ಕುಟುಂಬ ಶಕ್ತಿಶಾಲಿಯಾಗುತ್ತದೆ. ಕುಟುಂಬಗಳು ಶಕ್ತಿಶಾಲಿಯಾದರೆ ನಮ್ಮ ರಾಜ್ಯ ಶಕ್ತಿಶಾಲಿಯಾಗುತ್ತದೆ” ಎಂದು ತಿಳಿಸಿದರು.

ಬಸ್ ದರ ಏರಿಕೆ ಬಗ್ಗೆ ಕೇಳಿದಾಗ, “ಬಸ್ ಟಿಕೆಟ್ ದರ ಏರಿಕೆ ವಿಚಾರವಾಗಿ ಕೆಲವು ಮಾನದಂಡಗಳಿವೆ. ಇಂಧನ ಬೆಲೆ ಏರಿಕೆಯಾದಾಗ ಟಿಕೆಟ್ ದರ ಕೂಡ ಏರಿಕೆಯಾಗುತ್ತದೆ. ಎಸ್.ಎಂ ಕೃಷ್ಣ ಅವರ ಕಾಲದಲ್ಲೇ ನಾವು ಇಂಧನೆ ಬೆಲೆ ಏರಿಕೆಯಾದರೆ ಟಿಕೆಟ್ ದರ ಏರಿಸಲು ತೀರ್ಮಾನಿಸಲಾಗಿತ್ತು. ರಾಜ್ಯ ಸಾರಿಗೆ ಸಂಸ್ಥೆಗಳು ತಮ್ಮದೇ ಸಾಮರ್ಥ್ಯಗಳ ಮೇಲೆ ನಡೆಯುತ್ತಿವೆ” ಎಂದು ಉತ್ತರಿಸಿದರು.

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!