ದೊಡ್ಡಬಳ್ಳಾಪುರ ( Doddaballapura): ಯುವ ಕಾಂಗ್ರೆಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುನೀತ್ ಗೌಡ ಮಲ್ಲೋಹಳ್ಳಿ ಹೊರತಂದಿರುವ 2025ರ ನೂತನ ವರ್ಷದ ಕ್ಯಾಲೆಂಡರ್ ಅನ್ನು, ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಹಾಗೂ ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರು ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ, ಕ್ಷೇತ್ರದ ಜನತೆಗೆ ಹೊಸವರ್ಷದ ಶುಭಾಶಯಗಳನ್ನು ಕೋರಿದರು. ಕ್ಷೇತ್ರದ ಜನತೆಯ ಕಷ್ಟ ಸುಖಗಳಲ್ಲಿ ಭಾಗಿಯಾಗುವುದಾಗಿ, ಸೋಲು ಗೆಲುವು ಸಮಾನವಾಗಿ ಸ್ವೀಕರಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿ, ರಾಜ್ಯ ಸರ್ಕಾರದ ಜನಪರ ಕಾರ್ಯಗಳನ್ನು ಜನತೆಗೆ ತಲುಪಿಸುತ್ತ, ಪಕ್ಷ ಸಂಘಟನೆ ಮಾಡುವಂತೆ ಸಲಹೆ ನೀಡಿದರು.

ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿ ಮಾತನಾಡಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷ ಸಂಘಟನೆ ಮಾಡಬೇಕಾದ ಹೊಣೆಗಾರಿ ನಮ್ಮೆಲ್ಲರ ಮೇಲಿದೆ. ಸೋತಿದ್ದೇವೆ ಹಾಗೆಂದ ಮಾತ್ರ ಮೈ ಮರೆಯುವುದು ಸರಿಯಲ್ಲ. ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಶಕ್ತಿ ಹೆಚ್ಚಾಗಿದ್ದು, ಅದನ್ನು ಮತ್ತಷ್ಟು ಬಲಗೊಳಿಸೋಣ ಎಂದು ಕರೆ ನೀಡಿದರು.
ಈ ವೇಳೆ ಯುವ ಕಾಂಗ್ರೆಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುನೀತ್ ಗೌಡ ಮಲ್ಲೋಹಳ್ಳಿ, ಮುಖಂಡರಾದ ರಾಜಣ್ಣ, ಶ್ರೀನಿವಾಸ್, ಶಿವಾರಾಜ್, ಕಿರಣ್ ಕುಮಾರ್, ಹನುಮಂತ ರಾಜು ಇದ್ದರು.