20 ಸಾವಿರ ರೂ.ಗಳಲ್ಲಿ 18 ದಿನಗಳ ಉತ್ತರ ಭಾರತ ಪ್ರವಾಸ: MSIL ಟೂರ್‌ ಪ್ಯಾಕೇಜ್‌ ಗೆ ಚಾಲನೆ ನೀಡಿದ ಸಚಿವ ಎಂಬಿ ಪಾಟೀಲ

ಬೆಂಗಳೂರು: ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರಕಾರಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಸರಕಾರಿ ಸ್ವಾಮ್ಯದ ಎಂಎಸ್‌ ಐಎಲ್‌ (MSIL) ಸಂಸ್ಥೆ ರೂಪಿಸಿರುವ ನಾನಾ ತರಹದ ಆಕರ್ಷಕ ಟೂರ್‌ ಪ್ಯಾಕೇಜುಗಳಿಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅವರು ಸಂಸ್ಥೆಯ ಡೈರಿ, ಕ್ಯಾಲೆಂಡರ್‌ ಮತ್ತು ಬಾಂಡ್ ಜೆರಾಕ್ಸ್ ಪೇಪರ್ ಕೂಡ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ʻಎಂಎಸ್‌ ಐಎಲ್‌ ಮೊದಲಿನಿಂದಲೂ ಗುಣಮಟ್ಟ ಮತ್ತು ವಿಶ್ವಾಸಾರ್ಹತೆಗೆ ಹೆಸರಾಗಿದೆ. ಈಗ ಟೂರ್‌ ಪ್ಯಾಕೇಜುಗಳ ಮೂಲಕ ಸಂಸ್ಥೆಯು ಜನರಿಗೆ ಮತ್ತಷ್ಟು ಹತ್ತಿರವಾಗುತ್ತಿದೆ.

ಈ ಪ್ಯಾಕೇಜುಗಳ ಅಡಿಯಲ್ಲಿ‌ ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಆದಿಕೈಲಾಸ ಮತ್ತು ವಾರಣಾಸಿಗೆ ಪ್ರವಾಸ ಆಯೋಜಿಸಲಾಗುವುದು. ಮುಖ್ಯವಾಗಿ ನಾವು ಆಫ್-ಲೈನ್‌ ಪ್ರವಾಸಿಗರಿಗೆ ಆದ್ಯತೆ ಕೊಡುತ್ತಿದ್ದೇವೆ,ʼ ಎಂದಿದ್ದಾರೆ.

ಈ ಪ್ಯಾಕೇಜುಗಳಲ್ಲಿ ಸುರಕ್ಷತೆ, ಶುಚಿರುಚಿಯಾದ ಆಹಾರ, ಮನೆ ಬಾಗಿಲಿನಿಂದಲೇ ಕರೆದುಕೊಂಡು ಹೋಗಿ ವಾಪಸ್‌ ಅಲ್ಲಿಗೇ ಬಿಡುವುದು, ಸಹಾಯಕರ ನೆರವು, ಮಾಸಿಕ ಕಂತುಗಳಲ್ಲಿ ಹಣ ಪಾವತಿ, ಲಕ್ಕಿ ಡ್ರಾ, ಕೈಗೆಟುಕುವ ವೆಚ್ಚದಲ್ಲಿ ಉತ್ತರ ಭಾರತ ಪ್ರವಾಸ ಮುಂತಾದ ಸೌಲಭ್ಯ ಮತ್ತು ಆಕರ್ಷಣೆಗಳಿವೆ. ಗುಂಪು ಪ್ರವಾಸ ಮಾಡಲು ಬಯಸುವವರಿಗೆ ಪ್ರತಿ ಬ್ಯಾಚಿನಲ್ಲಿ ಗರಿಷ್ಠ 100 ಮಂದಿಗೆ ಅವಕಾಶ ಇರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದಲ್ಲದೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆಂದು ʻಸ್ಟಡಿ-ಕಂ-ಪ್ಲೆಷರ್‌ ಟೂರ್)‌, ಇಕೋ ಟೂರಿಸಂ ಮತ್ತು ಕರಾವಳಿ ಪ್ರದೇಶಗಳ ವೀಕ್ಷಣೆ ಇರುವ ಕೋಸ್ಟಲ್‌ ಟೂರಿಸಂ ಮುಂತಾದ ಪ್ಯಾಕೇಜುಗಳನ್ನು ರೂಪಿಸಲು ಎಂಎಸ್‌ ಐಎಲ್‌ ಚಿಂತಿಸುತ್ತಿದೆ. ಸಂಸ್ಥೆಯು ಸದ್ಯಕ್ಕೆ ರೂಪಿಸಿರುವ ಪ್ಯಾಕೇಜಿನಲ್ಲಿ ಕೇವಲ 20 ಸಾವಿರ ರೂ. ವೆಚ್ಚದಲ್ಲಿ 15ರಿಂದ 18 ದಿನಗಳ ಉತ್ತರ ಭಾರತ ಪ್ರವಾಸ ಮಾಡಿಕೊಂಡು ಬರಬಹುದು ಎಂದು ಅವರು ವಿವರಿಸಿದ್ದಾರೆ.

ಸರಕಾರಿ ಉದ್ಯೋಗಿಗಳನ್ನು ಗಮನದಲ್ಲಿ ಇಟ್ಟುಕೊಂಡು ಮಾಡಿರುವ ಪ್ಯಾಕೇಜಿನಲ್ಲಿ ಮೊದಲು ಶೇ.50ರಷ್ಟು ಹಣ ಪಾವತಿಸಿ, ಪ್ರವಾಸ ಕೈಗೊಳ್ಳಬಹುದು. ಪ್ರವಾಸ ಮುಗಿಸಿಕೊಂಡು ಬಂದ ಬಳಿಕ ಉಳಿದ ಶೇ.50ರಷ್ಟು ಹಣವನ್ನು ಮಾಸಿಕ ಕಂತುಗಳಲ್ಲಿ ಕಟ್ಟಬಹುದು. ಹಾಗೆಯೇ ಲಕ್ಕಿ ಡ್ರಾದಲ್ಲಿ ವಿಜೇತರಾಗುವ ಅದೃಷ್ಟಶಾಲಿಗಳು ಡ್ರಾ ನಂತರದ ಹಣವನ್ನು ಪಾವತಿಸಬೇಕಾಗಿಲ್ಲ.

ಈ ಎಲ್ಲ ಪ್ಯಾಕೇಜುಗಳಲ್ಲೂ ಎಂಎಸ್‌ ಐಎಲ್‌ ವತಿಯಿಂದ ಟೂರ್‌ ಮ್ಯಾನೇಜರ್‌ ಅಥವಾ ಸಹಾಯಕರೊಬ್ಬರು ಜತೆಗಿರಲಿದ್ದು, ಪ್ರವಾಸಿಗರ ಬೇಕು-ಬೇಡಗಳನ್ನು ಆಲಿಸಿ, ನೆರವು ನೀಡಲಿದ್ದಾರೆ ಎಂದು ಅವರು ನುಡಿದಿದ್ದಾರೆ.

ಪ್ರವಾಸಿಗರಿಗೆ ಆದಷ್ಟು ಕಡಿಮೆ ವೆಚ್ಚದಲ್ಲಿ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ ಸಾಧ್ಯವಾಗಬೇಕು ಎನ್ನುವ ಆಶಯದೊಂದಿಗೆ ಎಂಎಸ್‌ ಐಎಲ್‌ ಮೂಲಕ ಈ ಹೆಜ್ಜೆ ಇಡಲಾಗುತ್ತಿದೆ. ಖಾಸಗಿ ಸಂಸ್ಥೆಗಳ ದರಕ್ಕೆ ಹೋಲಿಸಿದರೆ ನಾವು ನಿಗದಿ ಪಡಿಸಿರುವ ದರ ತುಂಬಾ ಕಡಿಮೆ ಇದೆ. ಹಾಗೆಯೇ ಪ್ರತಿಯೊಂದು ಸೇವೆಯನ್ನೂ ಗುಣಮಟ್ಟದೊಂದಿಗೆ ಒದಗಿಸಲಾಗುವುದು ಎಂದು ಪಾಟೀಲ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಎಂಎಸ್ಐಎಲ್‌ ಅಧ್ಯಕ್ಷ ಪುಟ್ಟರಂಗಶೆಟ್ಟಿ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ವಾಣಿಜ್ಯ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಎಂಎಸ್ಐಎಲ್ ನಿರ್ದೇಶಕ ಚಂದ್ರಪ್ಪ, ಪ್ರವಾಸ ವಿಭಾಗದ ಮುಖ್ಯಸ್ಥ ರವಿಕುಮಾರ್ ಮುಂತಾದವರು ಭಾಗವಹಿಸಿದ್ದರು.‌

ಎಲ್ಲೆಲ್ಲಿಗೆ ಪ್ರವಾಸ ಪ್ಯಾಕೇಜು?

ಎಂಎಸ್‌ ಐಎಲ್‌ ಸಂಸ್ಥೆಯ ಟೂರ್ಸ್‌ ಅಂಡ್‌ ಟ್ರಾವೆಲ್ಸ್‌ ವಿಭಾಗವು ಈ ಟೂರ್‌ ಪ್ಯಾಕೇಜುಗಳನ್ನು ನಿರ್ವಹಿಸಲಿದೆ. ಇದರಡಿಯಲ್ಲಿ ಕಾಶಿ, ಅಯೋಧ್ಯೆ, ಪುರಿ, ಆದಿ ಕೈಲಾಸ ಮುಂತಾದ ಧಾರ್ಮಿಕ ಮತ್ತು ಐತಿಹಾಸಿಕ ತಾಣಗಳಿಗೆ ಪ್ರವಾಸಿಗರನ್ನು ಅದು ಕರೆದೊಯ್ಯಲಿದೆ. ಜೊತೆಗೆ ದುಬೈ, ಸಿಂಗಪುರ್‌, ವಿಯಟ್ನಾಂ, ಶ್ರೀಲಂಕಾ, ನೇಪಾಳ, ಥಾಯ್ಲೆಂಡ್‌ ಮತ್ತು ಯೂರೋಪಿನ ಹಲವು ದೇಶಗಳಿಗೂ ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜುಗಳನ್ನು ರೂಪಿಸಿದೆ. ಈ ಪ್ರವಾಸಗಳಿಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಸಾರ್ವಜನಿಕರು ಮಾಹಿತಿ ಪಡೆದುಕೊಳ್ಳಬಹುದು.

24/7 ಸಹಾಯವಾಣಿ ಸೌಲಭ್ಯ

ಪ್ರವಾಸಿಗರ ಅನುಕೂಲಕ್ಕೆ ಎಂಎಸ್‌ ಐಎಲ್‌ 24/7 ಸಹಾಯವಾಣಿ ಮತ್ತು ವಾಟ್ಸ್ಯಾಪ್‌ ಸೌಲಭ್ಯವನ್ನೂ (080-45888882, 9353645921) ಹೊಂದಿದೆ. ಇದರ ನಿರ್ವಹಣೆಗಾಗಿ ಪ್ರತ್ಯೇಕ ತಂಡವೇ ಇರಲಿದೆ. ಒಂದು ನಂಬರಿನಲ್ಲಿ ಯಾರಾದರೂ ಮಾತನಾಡುತ್ತಿದ್ದರೆ, ಅದು ತಾನಾಗಿಯೇ ಮತ್ತೊಂದು ಸಂಖ್ಯೆಗೆ ಸಂಪರ್ಕ ಕಲ್ಪಿಸುವ ಕ್ಲೌಡ್‌ ಬೇಸ್ಡ್‌ ಟೆಲಿಕಾಂ ಸಿಸ್ಟಮ್‌ ಅನ್ನು ಅಳವಡಿಸಿಕೊಳ್ಳಲಾಗಿದೆ

ಎಂಎಸ್ಐಎಲ್ ಚಿಟ್ ಫಂಡ್ ಬಲವರ್ಧನೆ

ಈಗಿನ ಸರಕಾರವು ಎಂಎಸ್ಐಎಲ್, ಮೈಸೂರು ಪೇಂಟ್ಸ್ & ವಾರ್ನಿಶ್, ಎನ್.ಜಿ.ಇ.ಎಫ್ ಮುಂತಾದವುಗಳನ್ನು ಲಾಭದಾಯಕವನ್ನಾಗಿ ಮಾಡುತ್ತಿದೆ. ಎಂಎಸ್ಐಎಲ್ ಸದ್ಯಕ್ಕೆ ವಾರ್ಷಿಕ 250 ಕೋಟಿ ರೂ.ಗಳ ಚಿಟ್ ಫಂಡ್ ನಡೆಸುತ್ತಿದೆ.

ಇದನ್ನು ಮುಂದಿನ 5 ವರ್ಷಗಳಲ್ಲಿ ವರ್ಷಕ್ಕೆ 5,000 ಕೋಟಿ ರೂ. ಮಟ್ಟಕ್ಕೆ ಕೊಂಡೊಯ್ಯುವ ಯೋಜನೆ ರೂಪಿಸಲಾಗಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಸದ್ಯದಲ್ಲೇ ಚಾಲನೆ ನೀಡಲಿದ್ದಾರೆ. ಹಾಗೆಯೇ, ಸಂಸ್ಥೆಯ 200 ಮದ್ಯದ ಅಂಗಡಿಗಳನ್ನು ಮೇಲ್ದರ್ಜೆಗೆ ಏರಿಸುವ ಯೋಜನೆಯಡಿ 63 ಮಳಿಗೆಗಳ ಕೆಲಸ ಮುಗಿದಿದ್ದು, ಇಲ್ಲೆಲ್ಲ ವಹಿವಾಟು ಮೂರು ಪಟ್ಟು ಹೆಚ್ಚಾಗಿದೆ.

ಮೈಸೂರು ಪೇಂಟ್ಸ್ & ವಾರ್ನಿಶ್ ಮೂಲಕ ಗೃಹ ಬಳಕೆಯ ಪೇಂಟ್ ತಯಾರಿಕೆಗೂ ಗಮನ ಹರಿಸಲಾಗಿದೆ. ಹುಬ್ಬಳ್ಳಿ ಎನ್ಜಿಇಎಫ್ ದೆಹಲಿಯ ನೂತನ ಸಂಸತ್ ಭವನ ಮತ್ತು ರೈಲ್ವೆ ಇಲಾಖೆಗೆ ತನ್ನ ಟ್ರಾನ್ಸ್-ಫಾರ್ಮರುಗಳನ್ನು ಪೂರೈಸುತ್ತಿದೆ. ಬಿಇಚ್ಇಎಲ್ ಜತೆ ಒಪ್ಪಂದ ಮಾಡಿಕೊಂಡು ಅದನ್ನು ಪುನರುಜ್ಜೀವನ ಗೊಳಿಸುವ ಉದ್ದೇಶ ಇದೆ ಎಂದು ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!