ಬೆಂಗಳೂರು: ಮನೆ ಯಜಮಾನನೇ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದಿರುವಂತಹ (Murder) ಆಘಾತಕಾರಿ ಘಟನೆ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ.
ಹೋಂ ಗಾರ್ಡ್ ಕೆಲಸ ಮಾಡುವ ಗಂಗರಾಜು ತನ್ನ ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಕೊಂದಿದ್ದಾನೆ ಎಂದು ವರದಿಯಾಗಿದೆ. ಕೃತ್ಯದ ಬಳಿಕ ಗಂಗರಾಜು ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಸ್ಥಳಕ್ಕೆ ಪೀಣ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಆರೋಪಿ ಗಂಗರಾಜುವನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ವಿಚಾರಣೆ ವೇಳೆ ಕೊಲೆಗೆ ಕಾರಣ ಏನು ಎಂಬುದು ತಿಳಿದು ಬರಲಿದೆ.