ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ನೂತನ ಅಧ್ಯಕ್ಷರನ್ನಾಗಿ ವಿ ನಾರಾಯಣನ್ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.
ಎಸ್ ಸೋಮನಾಥ್ ಅವರ ಅಧಿಕಾರಾವಧಿ ಮುಗಿದ ನಂತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾಗಿ ವಿ ನಾರಾಯಣನ್ ಅವರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ.
ಸದ್ಯ ವಿ ನಾರಾಯಣನ್ ಅವರು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ವಿ ನಾರಾಯಣನ್ ಪ್ರಸ್ತುತ ವಲಿಯಮಾಲದಲ್ಲಿರುವ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ (LPSC) ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಕೆಟ್ ಮತ್ತು ಬಾಹ್ಯಾಕಾಶ ನೌಕೆಯ ಪ್ರೊಪಲ್ಷನ್‌ನಲ್ಲಿ ಸುಮಾರು ನಾಲ್ಕು ದಶಕಗಳ ಅನುಭವವನ್ನು ಹೊಂದಿರುವ ವಿಜ್ಞಾನಿ ನಾರಾಯಣನ್ ಅವರು ತಮ್ಮ ಹೊಸ ಸ್ಥಾನಕ್ಕೆ ಗಣನೀಯ ಪರಿಣತಿಯನ್ನು ತರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದೆ.