16ನೇ Bengaluru ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ನೇಮಕ

ಬೆಂಗಳೂರು: ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು (Bengaluru) ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.

ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, 2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದು, ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರ ಸಲುವಾಗಿ ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಕನ್ನಡದ ಖ್ಯಾತ ನಟ ಕಿಶೋರ್ ಕುಮಾರ್. ಜಿ ಇವರನ್ನು ಚಿತ್ರೋತ್ಸವದ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಆದೇಶದಲ್ಲಿ ತಿಳಿಸಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಲ್ಜಿಯಂ ನ FIAPF ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುನ್ನತ ಚಿತ್ರಗಳ ಪ್ರದರ್ಶನ ಹಾಗೂ ಚಲನಚಿತ್ರಗಳಿಗೆ ಸಂಬಂಧಿಸಿದಂತೆ ಕಾರ್ಯಾಗಾರಗಳು, ವಿಚಾರ ಸಂಕಿರಣ ಇನ್ನಿತರ ಚಿತ್ರರಂಗಕ್ಕೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಅಧ್ಯಕ್ಷರೂ ಆಗಿರುವ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗಷ್ಟೆ ಸಭೆ ನಡೆಸಿ, ಚಿತ್ರೋತ್ಸವದ ದಿನಾಂಕ ಘೋಷಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ, 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ “ಸರ್ವ ಜನಾಂಗದ ಶಾಂತಿಯ ತೋಟ” ಶೀರ್ಷಿಕೆಯಡಿ ಪ್ರಸಕ್ತ ಸಾಲಿನಲ್ಲಿ ನಡೆಯುತ್ತಿದ್ದು, ಚಿತ್ರೋತ್ಸವಕ್ಕೆ ದೇಶ-ವಿದೇಶಗಳಿಂದ ಅತ್ಯುನ್ನತ ಚಿತ್ರಗಳನ್ನು ತರುವ ಕುರಿತು ಹಾಗೂ ದೇಶ-ವಿದೇಶಗಳ ಸಿನಿಮಾ ರಂಗದ ಗಣ್ಯಾಥಿ ಗಣ್ಯರನ್ನು ಚಿತ್ರೋತ್ಸವದಲ್ಲಿ ಭಾಗವಹಿಸಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದರು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]