ಒಬ್ಬನೇ ಒಬ್ಬ ಅರ್ಹ BPL ಕಾರ್ಡುದಾರನ ಬಿಪಿಎಲ್‌ ಕಾರ್ಡ್‌ ರದ್ದು ಮಾಡಬಾರದು: ಸಿಎಂ ಎಚ್ಚರಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು (BPL), ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದ, ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಹಂತ ಹಂತವಾಗಿ ತೆಗೆದು ಹಾಕಬೇಕು. ಆದರೆ ಒಬ್ಬನೇ ಒಬ್ಬ ಅರ್ಹ ಬಿಪಿಎಲ್‌ ಕಾರ್ಡುದಾರನ ಬಿಪಿಎಲ್‌ ಕಾರ್ಡ್‌ ರದ್ದು ಮಾಡಬಾರದು ಎಚ್ಚರಿಕೆ ನೀಡಿದರು‌.

ಅನರ್ಹ ಬಿಪಿಎಲ್‌ ಪಡಿತರ ಚೀಟಿದಾರರು ಸ್ವಯಂ ತಮ್ಮ ಬಿಪಿಎಲ್‌ ಕಾರ್ಡ್‌ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು, ಆ ಬಳಿಕ ಅಂತವರಿಗೆ ನೊಟೀಸ್‌ ನೀಡಿ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಈಗಾಗಲೇ 4ಸಾವಿರ ಸರ್ಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ, ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ ರೂ.4692 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್‌ ಅಂತ್ಯದವರೆಗೆ ರೂ. 3253 ಕೋಟಿ ವೆಚ್ಚ ಮಾಡಲಾಗಿದೆ. 4,44,48,294 ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯ ಮುಖ್ಯಾಂಶಗಳು

• ಪಡಿತರ ಹಾಗೂ ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನು ತಳಹಂತದಲ್ಲಿ ಬಲಪಡಿಸುವ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಬೇಕು. ಸಮಿತಿ ನಿಯಮಿತವಾಗಿ ಸಭೆ ನಡೆಸುವುದನ್ನು ಖಾತ್ರಿಪಡಿಸಬೇಕು.

• ರಾಜ್ಯದಲ್ಲಿ ಒಟ್ಟು 4518 ಪೆಟ್ರೋಲ್‌ ಬಂಕ್‌ಗಳಿದ್ದು, ಡಿಸೆಂಬರ್‌ ಅಂತ್ಯದವರೆಗೆ 503 ಪೆಟ್ರೋಲ್‌ ಬಂಕ್‌ಗಳ ತಪಾಸಣೆ ಮಾಡಲಾಗಿದೆ. ಪೆಟ್ರೋಲ್‌ ಬಂಕ್‌ಗಳ ತಪಾಸಣೆಯನ್ನು ಹೆಚ್ಚಿಸಿ ಅಳತೆ ಮತ್ತು ಗುಣಮಟ್ಟದಲ್ಲಿ ಮೋಸದಂತಹ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು.

• ಕನಿಷ್ಠ ಬೆಂಬಲ ಬೆಲೆ ಅಡಿ ಆಹಾರ ಧಾನ್ಯ ಸಂಗ್ರಹಿಸಲು ಎಲ್ಲಾ ವ್ಯವಸ್ಥೆ ಮಾಡಬೇಕು. ರೈತರಿಗೆ ಸಮಸ್ಯೆಯಾಗದಂತೆ ತ್ವರಿತವಾಗಿ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು.

• ರಾಜ್ಯದಲ್ಲಿ 1,53,69,945 ಪಡಿತರ ಚೀಟಿಗಳಿದ್ದು, 5,30,88,636 ಸದಸ್ಯ ಫಲಾನುಭವಿಗಳಿದ್ದಾರೆ. ಇಲಾಖೆಯಲ್ಲಿ ಒಟ್ಟು 709 ಹುದ್ದೆಗಳು ಖಾಲಿಯಿವೆ.

• ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ ಕರ್ನಾಟಕದಲ್ಲಿ ಬೇರೆ ರಾಜ್ಯಗಳ 13,383 ಫಲಾನುಭವಿಗಳು ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ.

• ಕುಟುಂಬದಲ್ಲಿ ಒಬ್ಬರೇ ಇರುವ, 80 ವರ್ಷ ದಾಟಿದವರಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ಒದಗಿಸುವ ಅನ್ನ-ಸುವಿಧಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. 8,500 ಪಡಿತರ ಚೀಟಿದಾರರು ಯೋಜನೆಯಡಿ ಪ್ರಯೋಜನ ಪಡೆಯುತ್ತಿದ್ದಾರೆ.

ರಾಜಕೀಯ

ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಮಾರ್ಚ್ 6 ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ (Budget) ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್

[ccc_my_favorite_select_button post_id="119957"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ಮೊನ್ನೆಯಷ್ಟೇ ಉದ್ಘಾಟನೆಯಾಗಿದ್ದ ರೈಲ್ವೇ ನಿಲ್ದಾಣದ ಸಿಗ್ನಲ್ ಬಳಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident) ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="119943"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!