Cmsiddaramaiah ಸಿಎಂ ಸಮ್ಮುಖದಲ್ಲಿ ಆರು ನಕ್ಸಲರು ಶರಣು; ರಾಜ್ಯದ ಇತಿಹಾಸದಲ್ಲಿಯೇ ಪ್ರಥಮ.. ಬಿಜೆಪಿ ಶಾಸಕ ಆಕ್ಷೇಪ.!

ಬೆಂಗಳೂರು: ಪಶ್ಚಿಮ ಘಟ್ಟದಲ್ಲಿ ಕಳೆದ ಹಲವು ವರ್ಷಗಳಿಂದ ಮಾವೋವಾದಿ ಚಟುವಟಿಕೆ ಯಲ್ಲಿ ಸಕ್ರಿಯರಾಗಿದ್ದ 6 ಮಂದಿ ನಕ್ಸಲರು ಸಿಎಂ ಸಿದ್ದರಾಮಯ್ಯ (Cmsiddaramaiah) ಮುಂದೆ ಬುಧವಾರ ಶರಣಾಗತರಾದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿ ಸದಸ್ಯರು ಹಾಗೂ ಶಾಂತಿಗಾಗಿ ನಾಗರೀಕರ ವೇದಿಕೆ ಸದಸ್ಯರ ಸಮ್ಮುಖದಲ್ಲಿ ಮುಂಡಗಾರು ಲತಾ, ಸುಂದರಿ ಕುತ್ತೂರು, ವನಜಾಕ್ಷಿ ಬಾಳೆಹೊಳೆ, ಜಯಣ್ಣ ಅರೋಲಿ, ಕೆ.ವಸಂತ ಟಿ.ಎನ್ ಹಾಗೂ ಜೀಶ್ ಶರಣಾಗಿದ್ದಾರೆ.

ಶರಣಾಗತರಾದ ನಕ್ಸಲರ ವಿರುದ್ಧ ಇರುವ ಘೋರ ಅಪರಾಧಗಳ ಕಾನೂನು ಪ್ರಕ್ರಿಯೆ ನ್ಯಾಯಾಲಯದಲ್ಲಿ ಮುಂದುವರಿಯುತ್ತವೆ. ರಾಜ್ಯ ಸರಕಾರವು ಸರಿಯಾದ ಕಾರ್ಯ ವಿಧಾನಗಳ ಮೂಲಕ ಶರಣಾದ ನಕ್ಸಲರ ವಿರುದ್ಧ ಬಾಕಿ ಇರುವ ಪ್ರಕರಣಗಳನ್ನು ಹಿಂಪಡೆಯಲು ಪರಿಗಣಿಸಬಹುದು.

ಶರಣಾದ ನಕ್ಸಲರಿಗೆ ಉಚಿತ ಕಾನೂನು ಸಹಕಾರ ನೀಡಲು ವಕೀಲರನ್ನು ಒದಗಿಸಬಹುದು. ಅಲ್ಲದೆ ತ್ವರಿತ ವಿಚಾರಣೆ ಗಾಗಿ ತ್ವರಿತಗತಿ ನ್ಯಾಯಾಲಯ ರಚನೆ ಮಾಡಲು ಸರಕಾರಕ್ಕೆ ಅವಕಾಶ ಇದೆ.

ಬಿಜೆಪಿ ಶಾಸಕ ಆಕ್ಷೇಪ

ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ?ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ.ಅವರಿಗೆ ಕ್ಷಮೆ,ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ! ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿ ಆಗಿದ್ದ ತಣ್ಣಗಿನ ಮಲೆನಾಡಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯ ನವರೇ?ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ?ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ.

ನಕ್ಸಲರು ಸರ್ಕಾರಕ್ಕೆ ಶರಣಾಗಿದ್ದಾರೋ, ನಕ್ಸಲರಿಗೆ ಸರ್ಕಾರ ಶರಣಾಗಿದೆಯೋ ? ಭೂಗತ ಚಟುವಟಿಕೆ ನಡೆಸಿ ತಲೆಮರೆಸಿಕೊಂಡಿದ್ದ ನಕ್ಸಲರು ಶರಣಾಗಬೇಕಿರುವುದು ಸಂಬಂಧಪಟ್ಟ ಎಸ್ಪಿ ಕಚೇರಿ ಅಥವಾ ಸಬ್ ಇನ್ಸ್‌ಪೆಕ್ಟರ್ ಎದುರು. ಆದರೆ ಇಲ್ಲೇನಾಗುತ್ತಿದೆ ?

ನಕ್ಸಲ್ ವಿಕ್ರಮ್ ಗೌಡರನ್ನು ಎನ್ ಕೌಂಟರ್ ಮಾಡಿದ ಪೊಲೀಸರ ದಿಟ್ಟ ಕ್ರಮಕ್ಕೆ ಸಿದ್ದರಾಮಯ್ಯ ಇಂದು ಪ್ರಾಯಶ್ಚಿತ್ತ ಮಾಡಿಕೊಂಡಿದ್ದಾರೆ. ಮತ್ತು ಪೊಲೀಸ್’ರನ್ನ ಅಣಕಿಸುವ ರೀತಿ ಸಿ.ಎಂ ನಡೆದುಕೊಂಡಿದ್ದಾರೆ.

ಇಲ್ಲಿ ಯಾರ ಶರಣಾಗತಿ?ಸರ್ಕಾರದ ಮುಂದೆ ನಕ್ಸಲರಶರಣಾಗತಿಯೋ?ಅಥವಾ ಬುದ್ದಿಜೀವಗಳ ಒತ್ತಡಕ್ಕೆ ಮಣಿದ ಸಿದ್ದರಾಮಯ್ಯ ನಕ್ಸಲರಿಗೆಶರಣಾದರೊ? ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ. ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಇವರ ವಿರುದ್ದದ ಪ್ರಕರಣಗಳ ಶೀಘ್ರ ಇತ್ಯರ್ಥ್ಕಕ್ಕೆ ಅಗತ್ಯವಾದ ಕ್ರಮಗಳನ್ನೂ ನಮ್ಮ ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಅನ್ಯಾಯ-ಶೋಷಣೆ ವಿರುದ್ದದ ಪ್ರಜಾಸತ್ತಾತ್ಮಕವಾಗಿ ನಡೆಸುವ ಹೋರಾಟವನ್ನು ನಾನು ಸದಾ ಗೌರವಿಸುತ್ತಾ ಬಂದವನು.ನಮ್ಮ ಸಂವಿಧಾನದಲ್ಲಿಯೂ ಇದಕ್ಕೆ ಅವಕಾಶ ಇದೆ.

ಕಾಡಿನಲ್ಲಿದ್ದುಕೊಂಡು ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಸುತ್ತಿದ್ದ ನಕ್ಸಲರು ಮನವೊಲಿಸಿ ಅವರನ್ನು ನಾಡಿಗೆ ಕರೆದು ತರುವ ಪ್ರಯತ್ನವನ್ನು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿಯೇ ನಮ್ಮ ಸರ್ಕಾರ ಪ್ರಾರಂಭಿಸಿತ್ತು. ಕಳೆದ ಅವಧಿಯಲ್ಲಿ ಹನ್ನೆರಡು ಮಂದಿ ನಕ್ಸಲರು ಶರಣಾಗಿ ಬಂದು ಮುಖ್ಯವಾಹಿನಿ ಸೇರಿಕೊಂಡಿದ್ದರು. ಇದೀಗ ಆರು ಮಂದಿ ನಕ್ಸಲರು ಬಂದಿದ್ದಾರೆ.

ಶರಣಾಗಿರುವ ನಕ್ಸಲರು. ಮುಂದಿನ ದಿನಗಳಲ್ಲಿ ಇವರೆಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ತಮ್ಮ ಬದುಕನ್ನು ಕಳೆಯಲಿದ್ದಾರೆ ಎಂಬ ನಂಬಿಕೆ ನನಗಿದೆ. ಈ ಆರು ಮಂದಿ ನಕ್ಸಲೀಯರ ಶರಣಾಗತಿಯ ನಂತರ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ ಎಂಬ ವಿಶ್ವಾಸ ನನಗಿದೆ. ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರಲು ಪ್ರಯತ್ನಿಸಿದ ಪುನರ್ವಸತಿ ಸಮಿತಿ ಸದಸ್ಯರು ಮತ್ತಿತರ ಸಾಮಾಜಿಕ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಯಾಕೆ ಬೆಚ್ಚಿ ಬಿದ್ದಿಲ್ಲ?; ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಕಳೆದ ತಿಂಗಳು ಚತ್ತೀಸ್ ಘಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರೇ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಟ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ ಎಂದು ಕೇಳಬೇಕಾಗಿದೆ. ಶಹಾ ಅವರಿಗೆ ನಕ್ಸಲರ ಬಗ್ಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಕೇಳುವ ದಮ್ಮು ಸುನೀಲ್ ಕುಮಾರ್ ಅವರಿಗೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಕಳೆದ ವರ್ಷ ಮಹಾರಾಷ್ಟ್ರದಲ್ಲಿ ಶರಣಾದ ನಕ್ಸಲ್ ದಂಪತಿಗೆ ಅಲ್ಲಿನ ಬಿಜೆಪಿ ಸರ್ಕಾರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು 41 ಲಕ್ಷ ರೂಪಾಯಿಗಳ ನೆರವು ನೀಡಿರುವುದು ಶಾಸಕ ಸುನೀಲ್ ಕುಮಾರ್ ಗೊತ್ತಿರಲಿಲ್ಲವೇ? ಈ ನೆರವನ್ನು ಯಾವ ಮಾನದಂಡದಲ್ಲಿ ನೀಡಿದ್ದೀರಿ ಎಂದು ಕೇಳುವ ಧೈರ್ಯ ಸುನೀಲ್ ಕುಮಾರ್ ಅವರಿಗೆ ಇದೆಯೇ?

ಶರಣಾಗಿರುವ ಈ ನಕ್ಸಲೀಯರ ಅನುಸರಿಸಿದ ಹಿಂಸಾ ಮಾರ್ಗದ ಬಗ್ಗೆ ನಮಗೆಲ್ಲರಿಗೂ ವಿರೋಧವಿದೆ. ಆದರೆ ಇವರಲ್ಲಿ ಯಾರೂ ಜನರ ತೆರಿಗೆ ಹಣವನ್ನು ನುಂಗಿದ ಭ್ರಷ್ಟರೂ ಅಲ್ಲ, ರಾಮ-ಪರಶುರಾಮನ ಮೂರ್ತಿ ನಿರ್ಮಾಣದಲ್ಲಿಯೂ ಮೋಸ ಮಾಡಿ ಜೇಬು ತುಂಬಿಕೊಂಡವರೂ ಅಲ್ಲ.

ಲಾಠಿ-ದೊಣ್ಣೆ, ಕತ್ತಿ-ತ್ರಿಶೂಲಗಳನ್ನು ನೀಡಿ ಅಮಾಯಕರನ್ನು ಹಿಂಸಾಮಾರ್ಗಕ್ಕೆ ಇಳಿಸಿ ರಾಜಕೀಯ ಲಾಭ ಗಳಿಸುವ ಕುತಂತ್ರದ ರಾಜಕಾರಣ ನಮ್ಮದ್ದಲ್ಲ.

ದಾರಿ ತಪ್ಪಿ ಹಿಂಸೆಯ ಮಾರ್ಗ ಹಿಡಿದವರ ಮನವೊಲಿಸಿ ಸಮಾಜದ ಮುಖ್ಯವಾಹಿನಿಗೆ ಸೇರಿಸಿ ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಪರಿವರ್ತನೆ ಮಾಡುವುದು ಒಂದು ಸರ್ಕಾರದ ಕರ್ತವ್ಯವಾಗಿದೆ. ಇದೇ ಕರ್ತವ್ಯವನ್ನು ನಮ್ಮ ಸರ್ಕಾರ ಪಾಲಿಸುತ್ತಾ ಬಂದಿದೆ ಎಂದು ತಿರುಗೇಟು ನೀಡಿದ್ದಾರೆ.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!