ಬೆಂಗಳೂರು; ಕನ್ನಡ ಚಿತ್ರರಂಗದ ಖ್ಯಾತ ನಟಿ ತಾರಾ ಅನುರಾಧ ಅವರಿಗೆ ಗೌರವ ಡಾಕ್ಟರೇಟ್ (Doctorate) ದೊರೆತಿದೆ.
ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ನಟಿ ತಾರಾ ಅನುರಾಧಾ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಜ9ರಂದು ಮಧ್ಯಾಹ್ನ 12.30ಕ್ಕೆ 16ನೇ ಘಟಿಕೋತ್ಸವ ನಡೆಯಲಿದೆ.
ಈ ಸಮಾರಂಭದಲ್ಲಿ ಕಲಾಕ್ಷೇತ್ರದ ಸಾಧನೆಗಾಗಿ ವೇದರಾಣಿ, ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಮೀನಾಕ್ಷಿ ಬಾಳಿ ಮತ್ತು ಸಿನಿಮಾ ಕ್ಷೇತ್ರದ ಸಾಧನೆಗಾಗಿ ತಾರಾ ಅವರಿಗೆ ವಿವಿಯ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಪ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.
ದೆಹಲಿಯ ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ಸಂಸ್ಥೆಯ ಕುಲಪತಿ ಪ್ರೊ.ಶಶಿಕಲಾ ವಂಜಾರಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪಾಲ್ಗೊಳ್ಳುವರು ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಕೋಸ್ಟಗಳಲ್ಲಿ ಗರಿಷ್ಠ ಅಂಕ ಗಳಿಸಿ ಒಟ್ಟು 63 ವಿದ್ಯಾರ್ಥಿನಿಯರಿಗೆ 80 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುತ್ತದೆ.
ಒಟ್ಟು 13,461 ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಪದವಿ ಪಡೆಯಲಿದ್ದಾರೆ.