Asha ಕಾರ್ಯಕರ್ತರಿಗೆ 10,000 ರೂ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಆಶಾ (Asha) ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಈ ಮುಂಚೆ ಮಾಹೆಯಾನ 8000 ರೂ. ನೀಡಲಾಗುತ್ತಿದ್ದು, ಈಗ ಪ್ರೋತ್ಸಾಹಕಗಳನ್ನೂ ಸೇರಿದಂತೆ ಪ್ರತಿ ಮಾಹೆ 10,000 ರೂ.ಗಳ ವೇತನವನ್ನು ನೀಡಲು ನಿರ್ಧಾರ ಕೈಗೊಂಡಿದ್ದು, ಅವರು ಮುಷ್ಕರವನ್ನು ಕೈಬಿಡಲು ಸಮ್ಮತಿಸಿದ್ದಾರೆ ಹಾಗೂ ಈ ಮೊತ್ತವನ್ನು ನೀಡಲು, ಸರ್ಕಾರದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇಂದು ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ.

ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು.

ಪೋರ್ಟಲ್ ಸುಧಾರಣೆಗೆ ಸೂಚನೆ

ಮಾಹಿತಿಯನ್ನು ಪೋರ್ಟಲ್ ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಗೌರವಧನ ನಿಲ್ಲಿಸದೆ ರಜೆ

ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ ಪ್ರತಿ ತಿಂಗಳು ಸಿಗುವ ರಜೆ ಕ್ರೋಡೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು.

ಸರ್ಕಾರ ನಿಮ್ಮೊಂದಿಗಿದೆ

ಆಯವ್ಯಯ ಪೂರ್ವಭಾವಿ ಸಭೆ ನಡೆಸುವಾಗ ಆಶಾ ಕಾರ್ಯಕರ್ತೆಯರೊಂದಿಗೂ ಸಭೆ ನಡೆಸಲಾಗುವುದು. ಸರ್ಕಾರ ನಿಮ್ಮೊಂದಿಗಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ

ಹೋರಾಟ ಮಾಡುವುದು ಸಂವಿಧಾನ ಬದ್ಧ ಹಕ್ಕು.ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ

ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ.ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ ದಾರಿ ಹಿಡಿಯಬಾರದೆಂಬುದು ಸರ್ಕಾರದ ನಿಲುವು ಎಂದರು.

ಶರಣಾಗತರಾದ ನಕ್ಸಲರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ಹಾಗೂ ನಕ್ಸಲರ ಶರಣಾಗತಿಯ ಬಗ್ಗೆ ಪರವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನಕ್ಸಲರು ಶರಣಾಗಿದ್ದು, ಅವರ ಶಸ್ತ್ರಾಸ್ತ್ರಗಳನ್ನೂ ಮೊಹಜರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಹೋರಾಟುಗಳು ಸಂವಿಧಾನತ್ಮಕ ರೀತಿಯಲ್ಲಿ ನಡೆಯಬೇಕೆಂದು ಡಾ.ಅಂಬೇಡ್ಕರ್ ರವರೂ ಹೇಳಿದ್ದಾರೆ.

ಅನ್ಯಾಯದ ವಿರುದ್ಧ ಧ್ವನಿಎತ್ತಲು ಸಂವಿಧಾನದಲ್ಲಿ ಅವಕಾಶವಿದ್ದರೂ, ಕಾನೂನನ್ನು ಕೈಗೆ ತೆಗೆದುಕೊಳ್ಳುವ ಅವಕಾಶ ಯಾರಿಗೂ ನೀಡಲಾಗಿಲ್ಲ. ಶೃಂಗೇರಿಯಲ್ಲಿ ಮತ್ತೊಬ್ಬ ನಕ್ಸಲ್ ಇರುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೂ ಅವರೂ ಕೂಡ ಕಾನೂನಿಗೆ ಶರಣಾಗಿ ಮುಖ್ಯವಾಹಿನಿಗೆ ಬರುವಂತಾಗಲಿ ಎಂದು ಕೋರುವುದಾಗಿ ತಿಳಿಸಿದರು.

ಅಂಬೇಡ್ಕರ್ ರವರ ಕುರಿತ ಕಾಂಗ್ರೆಸ್ ಬದ್ಧತೆಯನ್ನು ತೋರ್ಪಡಿಸುವ ಅಗತ್ಯವಿಲ್ಲ

ಕಾಂಗ್ರೆಸ್ ಸರ್ಕಾರಕ್ಕೆ ಅಂಬೇಡ್ಕರ್ ರವರ ಕುರಿತ ಬದ್ಧತೆಯನ್ನು ತೋರ್ಪಡಿಸುವ ಅಗತ್ಯವಿಲ್ಲ, ಸಂವಿಧಾನದ ರಕ್ಷಣೆಯಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರ, ಅದರ ಆಶಯಗಳ ಅನುಷ್ಠಾನಕ್ಕೆ ಬದ್ಧವಾಗಿದೆ ಎಂದು ತಿಳಿಸಿದರು.

ಡಾ.ಅಂಬೇಡ್ಕರ್ ರವರ ಕುರಿತು ಬಿಜೆಪಿಯವರ ಅಗೌರವದ ಹೇಳಿಕೆ

ಡಾ.ಅಂಬೇಡ್ಕರ್ ರವರ ಜಪ ಮಾಡಬಾರದೆಂದು ಹೇಳುವ ಕೇಂದ್ರ ಸಚಿವ ಅಮಿತ್ ಶಾ ಅವರು ದಲಿತರ ಮನೆಗಳಿಗೆ ಭೇಟಿ ನೀಡಿ,ಡಾ.ಅಂಬೇಡ್ಕರ್ ಅಭಿಯಾನ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಡಾ. ಅಂಬೇಡ್ಕರ್ ಅವರ ಕುರಿತ ಅವರ ಹೇಳಿಕೆ, ಬಿಜೆಪಿಯವರಿಗೆ ಅಂಬೇಡ್ಕರ್ ರವರ ಮೇಲಿನ ಅಗೌರವವನ್ನು ತೋರಿಸುತ್ತದೆ.

ಕಾಂಗ್ರೆಸ್ ಪಕ್ಷದವರ ಕಾಲದಲ್ಲಿ ಸಂವಿಧಾನವನ್ನು ಅಂಬೇಡ್ಕರ್ ಅವರೇ ರಚಿಸಿದ್ದರು. ವಾಜಪೇಯಿಯವರ ಸರ್ಕಾರವಿದ್ದ ಸಂದರ್ಭದಲ್ಲಿ ಸಂವಿಧಾನ ಬದಲಾವಣೆಗೆ ಮುಂದಾಗಿದ್ದರು. ಸಂವಿಧಾನ ಬದಲಾವಣೆಗಾಗಿಯೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಬಿಜೆಪಿಯ ಅನೇಕ ಸಚಿವರು ಹೇಳಿಕೆ ನೀಡಿದ್ದರು. ಆರ್ ಎಸ್ ಎಸ್ ನ ಪ್ರಮುಖರು ಸಂವಿಧಾನವನ್ನು ವಿರೋಧಿಸಿದ್ದರು ಎಂದರು.

ಕೇಂದ್ರದಲ್ಲಿ ಅಮಾನವೀಯ ಹಾಗೂ ರೈತವಿರೋಧಿ ಸರ್ಕಾರವಿದೆ

ನವದೆಹಲಿಯಲ್ಲಿ ಎಂಎಸ್ ಪಿ ಬೇಡಿಕೆ ಸಂಬಂಧ ರೈತರ ಬಹಳ ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಕೇಂದ್ರ ಸರ್ಕಾರ ಅವರ ನ್ಯಾಯಬದ್ಧ ಬೇಡಿಕೆಗೆ ಸ್ಪಂದಿಸುತ್ತಿಲ್ಲವೆಂಬ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರ ರೈತರ ಪರವಾದ ಸರ್ಕಾರವಲ್ಲ.

ಬೆಳೆಗಳಿಗೆ ಎಂಎಸ್ ಪಿ ನೀಡುವುದಕ್ಕೆ ಕಾನೂನು ರಚಿಸುವಂತೆ ರೈತರ ಬೇಡಿಕೆಯಾಗಿದ್ದು, ಈ ಬೇಡಿಕೆಗೆ ಮಣಿಯದ ಅಮಾನವೀಯ ಹಾಗೂ ರೈತವಿರೋಧಿ ಸರ್ಕಾರವಾಗಿದೆ. ನೂರಾರು ರೈತರು ಪ್ರತಿಭಟನೆಯನ್ನು ಪ್ರಾಣ ಕಳೆದುಕೊಂಡಿದ್ದರೂ ಸಹ ರೈತರ ಬೇಡಿಕೆಗೆ ಮಣಿಯುತ್ತಿಲ್ಲ ಎಂದರು.

ಚಾಮರಾಜನಗರದಲ್ಲಿ ಸಚಿವ ಸಂಪುಟ ಸಭೆ

ಚಾಮರಾಜನಗರದಲ್ಲಿ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಇದರಲ್ಲಿ ಯಾವುದೇ ಗೊಂದಲವಿಲ್ಲ. ಚಾಮರಾಜನಗರ ಭಾಗದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಸಭೆ ನಡೆಸಲಾಗುವುದು ಎಂದರು.

ಮೈಸೂರಿನ ರಸ್ತೆಯೊಂದಕ್ಕೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡುವ ಬಗ್ಗೆ ರಾಜಕಾರಣ ನಡೆಯುತ್ತಿರುವ ಪ್ರತಿಕ್ರಿಯೆ ನೀಡಿ, ನನ್ನ 45 ವರ್ಷದ ರಾಜಕೀಯದ ಅವಧಿಯಲ್ಲಿ ಎಂದಿಗೂ ತನ್ನ ಹೆಸರಿನ್ನಿಡುವಂತೆ ತಿಳಿಸಲಿಲ್ಲ. ಹಿಂದೆ ಮೈಸೂರು ವಿಶ್ವವಿದ್ಯಾಲಯದವರು ನೀಡುವ ಡಾಕ್ಟರೇಟ್ ನ್ನು ತಾನು ನಿರಾಕರಿಸಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!