ಗದಗ: ಶಿರಹಟ್ಟಿಯ ಬಿಜೆಪಿ (BJP) ಶಾಸಕ ಚಂದ್ರು ಲಮಾಣಿ ಅವರ ಕಾರು ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಚಂದ್ರು ಲಮಾಣಿ ಅವರಿಗೆ ಸೇರಿದ ನಿವಾಸದಲ್ಲಿ ಚಾಲಕ 25 ವರ್ಷದ ಸುನೀಲ್ ಲಮಾಣಿ ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ವರದಿಯಾಗಿದೆ.
ಲಕ್ಷೇಶ್ವರ ಪಟ್ಟಣದಲ್ಲಿ ಚಂದ್ರು ಲಮಾಣಿ ಅವರಿಗೆ ಸೇರಿದ್ದು ಎನ್ನಲಾದ ನಿವಾಸದಲ್ಲಿ ಈ ಘಟನೆ ನಡೆದಿದ್ದು, ಚಾಲಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರಬೇಕಿದೆ.