ದೊಡ್ಡಬಳ್ಳಾಪುರ: ಅಖಿಲ ಭಾರತ ವೀರಶೈವ ಮಹಾಸಭಾದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರನ್ನಾಗಿ ದೊಡ್ಡಬಳ್ಳಾಪುರದ ಲತಾ ಆರಾಧ್ಯ ( Latha Aradhya) ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಡಾ.ಶಾಮನೂರು ಶಿವಶಂಕರಪ್ಪ ಅವರು ಆದೇಶಿಸಿದ್ದಾರೆ.
ಮಹಾಸಭಾದ ರಾಜ್ಯ ಯುವಘಟಕದಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಲತಾ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕವಾಗಿದ್ದಾರೆ.
ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸಲು ರಚನಾತ್ಮಕವಾಗಿ ಕೆಲಸ ನಿರ್ವಹಿಸುವುದಾಗಿ ತಿಳಿಸಿದ್ದಾರೆ.