ಕಲಬುರಗಿ: ಅಕ್ರಮ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಯ ಮೇಲೆ ಪೋಲಿಸರು ಫೈರಿಂಗ್ (Police firing) ಮಾಡಿರುವ ಘಟನೆ ನಗರದ ಹೊರವಲಯದ ತಾವರಗೇರಾ ಕ್ರಾಸ್ ಬಳಿ ನಡೆದಿದೆ.
ಆರೋಪಿಯನ್ನು ಸುಪ್ರೀತ್ ನವಲೆ (32 ) ಎಂದು ಗುರುತಿಸಲಾಗಿದೆ. ಆರೋಪಿ ಅಕ್ರಮವಾಗಿ ಕಾರಿನಲ್ಲಿ ಡ್ರಗ್ಸ್ನ್ನು ಮಾರಾಟ ಮಾಡುತ್ತಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದು, ಕಾರು ನಿಲ್ಲಿಸಿ ತಪಾಸಣೆ ಮಾಡುವಾಗ ಪೋಲಿಸರ ಮೇಲೆ ಚಾಕುವಿನಿಂದ ಆರೋಪಿ ದಾಳಿ ಮಾಡಿದ್ದಾನೆ.
ಹೆಡ್ ಕಾನ್ಸ್ಟೇಬಲ್ ಗುರುಮೂರ್ತಿಯ ಮೇಲೆ ಆರೋಪಿ ಚಾಕುವಿನಿಂದ ಹಲ್ಲೆ ಮಾಡಿದ್ದು, ಈ ವೇಳೆ ಚೌಕ್ ಪೋಲಿಸ್ ಠಾಣೆಯ ಪಿಐ ರಾಘವೇಂದ್ರ ಅವರು ಆರೋಪಿ ಮೇಲೆ ಫೈರಿಂಗ್ ನಡೆಸಿದ್ದಾರೆ.
ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.