JDS elects new state president through elections

ಚುನಾವಣೆ ಮೂಲಕ JDS ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ನಿರ್ಧಾರ; ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಂಡಿದೆ ಎಂದು ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಆದರೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ಆಗಿಲ್ಲ ಎಂದು ಸಚಿವರು ಹೇಳಿದರು.

ಜತೆಗೆ; ಪಕ್ಷದ ದ್ವೈವಾರ್ಷಿಕ ಸಾಂಸ್ಥಿಕ ಚುನಾವಣೆ, ಸದಸ್ಯತ್ವ ಅಭಿಯಾನವನ್ನು ಚುರುಕುಗೊಳಿಸುವುದು, ಜಿಪಂ ಮತ್ತು ತಾಪಂ ಚುನಾವಣೆ ತಯಾರಿ ಹಾಗೂ ಪಕ್ಷ ಸಂಘಟನೆ ವಿಷಯಗಳ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದರು.

ಮುಖಂಡರ ಸಭೆಯ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ಮುಂದಿನ ಏಪ್ರಿಲ್ ಒಳಗೆ ರಾಜ್ಯದ ಘಟಕದ ಅಧ್ಯಕ್ಷ ಸ್ಥಾನವನ್ನು ಚುನಾವಣೆ ಮೂಲಕ ಆಯ್ಕೆ ಮಾಡುವ ತೀರ್ಮಾನ ಆಗಿದೆ. ಪಕ್ಷದ ಸಂಘಟನೆ ಬಗ್ಗೆ ಪಕ್ಷದ ನಾಯಕರಿಗೆ ಕಠಿಣವಾಗಿಯೇ ಹೇಳಿದ್ದೇನೆ.

ಯಾರು ಪ್ರಾಮಾಣಿಕವಾಗಿ ಪಕ್ಷದ ಸಂಘಟನೆಗೆ ದುಡಿಯುತ್ತಾರೋ ಅಂಥವರಿಗೆ ಆದ್ಯತೆ ಕೊಡುತ್ತೇವೆ. ನಾನು ಕೂಡ ಪಕ್ಷ ಸಂಘಟನೆಯಲ್ಲಿ ನಿಯಮಿತವಾಗಿ ತೊಡಗಿಸಿಕೊಳ್ಳುತ್ತೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ಮೇಲೆ ರಾಜ್ಯದಲ್ಲಿ ನಾಯಕತ್ವ ಶೂನ್ಯ ಉಂಟಾಗಿದೆ ಎಂದು ಹೇಳಲಾಗುತ್ತಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು; ವಾರದಲ್ಲಿ ನಾಲ್ಕು ದಿನ ನವದೆಹಲಿಯ ಸಚಿವಾಲಯದಲ್ಲಿ ಕೆಲಸ ಮಾಡುತ್ತೇನೆ.

ಒಂದು ಅಥವಾ ಎರಡು ದಿನ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ಕಾರ್ಖಾನೆಗಳಿಗೆ ಭೇಟಿ ಕೊಡುತ್ತೇನೆ. ಉಳಿದ ಸಮಯವನ್ನು ಪಕ್ಷದ ಕೆಲಸಕ್ಕೆ ಮಿಸಲಿಡುತ್ತೇನೆ.

ಪಕ್ಷದ ಸಂಘಟನೆ, ಸಭೆ, ಪ್ರವಾಸ, ಮಂಡ್ಯ ಕ್ಷೇತ್ರಕ್ಕೆ ಭೇಟಿ ಇತ್ಯಾದಿಗಳ ಬಗ್ಗೆ ವೇಳಾಪಟ್ಟಿ ಸಿದ್ಧ ಮಾಡಿಕೊಂಡಿದ್ದೇನೆ. ಇನ್ನು ಮುಂದೆ ಅದರಂತೆಯೇ ಕೆಲಸ ಮಾಡುತ್ತೇನೆ ಎಂದು ಸಚಿವರು ಹೇಳಿದರು.

ಸಾರ್ವಜನಿಕ ಉದ್ಯಮಿಗಳು ಅಭದಾಯಕವಲ್ಲ ಎನ್ನುವ ಮಾತಿದೆ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಆ ಕಾರ್ಖಾನೆಗಳು ಲಾಭ ಮಾಡಬಲ್ಲವು ಎಂಬುದನ್ನು ತೋರಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.

ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಕಿಡಿ

ಕಾಂಗ್ರೆಸ್ ಪಕ್ಷ ಜೆಡಿಎಸ್ ಶಾಸಕರನ್ನು ಆಪರೇಷನ್ ಮಾಡುತ್ತಿದೆ, ಜೆಡಿಎಸ್ ನಲ್ಲಿ ಗಡಗಡ, ಸಂಕ್ರಾಂತಿ ನಂತರ ಜೆಡಿಎಸ್ ಇರುವುದೇ ಇಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸಚಿವರೇ.. ಮೊದಲು ನಿಮ್ಮ ಪಕ್ಷದ ಕಥೆ ನೋಡಿಕೊಳ್ಳಿ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಕಾಂಗ್ರೆಸನ್ನು ದೂರ ಇಟ್ಟು ಏಕಾಂಗಿಯಾಗಿ ಚುನಾವಣೆ ಎದುರಿಸುತ್ತಿದೆ.

ಇಂಡಿ ಕೂಟವನ್ನು ವಿಸರ್ಜನೆ ಮಾಡಿ ಎಂದು ಓಮರ್ ಅಬ್ದುಲ್ಲಾ ಹೇಳುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ನಾವು ಏಕಾಂಗಿಯಾಗಿ ಸ್ಥಳಿಯ ಸಂಸ್ಥೆಗಳ ಚುನಾವಣೆ ಎದುರಿಸುತ್ತೇವೆ ಎಂದು ಶಿವಸೇನೆ ಹೇಳುತ್ತಿದೆ. ಅಲ್ಲೆಲ್ಲಾ ಎಲ್ಲಿದೆ ಕಾಂಗ್ರೆಸ್? ನಿಮ್ಮ ಪಕ್ಷದ ಒಳಗೆ ಏನಾಗುತ್ತಿದೆ ಎನ್ನುವುದನ್ನು ಮೊದಲು ನೋಡಿಕೊಳ್ಳಿ. ಪಾಟೀಲರೇ.. ನಿಮ್ಮ ಪಕ್ಷದ ತಟ್ಟೆಯಲ್ಲಿಯೇ ಹೆಗ್ಗಣ ಸತ್ತು ಬಿದ್ದಿದೆ ಎಂದು ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು.

ನಮಗೆ, ನಮ್ಮ ಕುಟುಂಬಕ್ಕೆ ಸೋಲು ಗೆಲುವು ಹೊಸದೇನಲ್ಲ. ಸೋತಾಗ ಕುಗ್ಗಿಲ್ಲ, ಗೆದ್ದಾಗ ಹಿಗ್ಗಿಲ್ಲ ಎಂದ ಅವರು; ನಮ್ಮ ಪಕ್ಷ ಗಟ್ಟಿಯಾಗಿದೆ. ಅದನ್ನು ಸಹಿಸುವುದು ಕಾಂಗ್ರೆಸ್ ಪಕ್ಷಕ್ಕೆ ಆಗುತ್ತಿಲ್ಲ. ಅದಕ್ಕೆ ಇಷ್ಟೆಲ್ಲಾ ನಾಟಕ ಆಡುತ್ತಿದೆ. ಅದರ ಆಟ ನಡೆಯುವುದಿಲ್ಲ ಎಂದು ಸಚಿವರು ಎಚ್ಚರಿಕೆ ಕೊಟ್ಟರು.

ಜಾತಿಗಣತಿ; ಸಿಎಂ ವಿರುದ್ಧ HDK ಕೆಂಡ

ಕಾಂತರಾಜ್ ವರದಿ ಸರ್ಕಾರದ ಕೈ ಸೇರಿ ಎಷ್ಟು ವರ್ಷವಾಯಿತು? ಜಾತಿಗಳ ಸಮಸ್ಯಗಳಿಗೆ ಏನು ಪರಿಹಾರ ಕೊಟ್ಟಿದ್ದಾರೆ ಇವರು. ಏಳು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇದ್ದಾರಲ್ಲವೇ? ಅಹಿಂದಾ ನಾಯಕರು, ಬೇರೆ ಸಮಾಜಗಳ ಮಾತಿರಲಿ, ಅಹಿಂದಾ ವರ್ಗಕ್ಕೆ ಅವರು ಏನು ಮಾಡಿದ್ದಾರೆ.

ಇಷ್ಟು ದಿನ ಅಧಿಕಾರದಲ್ಲಿ ಇದ್ದರೂ ಇವರು ಇನ್ನೂ ಅಹಿಂದಾ ಅಹಿಂದಾ ಎಂದು ಹೇಳುತ್ತಿದ್ದಾರೆ. ಕೇವಲ ರಾಜಕೀಯಕ್ಕಾಗಿ ಸಿದ್ದರಾಮಯ್ಯ ಅವರು ಈ ಸಮುದಾಯವನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ ಹೋದ ಕಡೆ, ಬಂದ ಕಡೆ ಜಾತಿಗಣತಿ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರಕಾರವೇ ಜಾತಿ ಗಣತಿಗೆ ತೀರ್ಮಾನ ಮಾಡಿದೆ. ಹೀಗಿದ್ದ ಮೇಲೆ ರಾಜ್ಯ ಸರಕಾರ ಕೇಂದ್ರದ ವರದಿ ಬರುವ ತನಕ ಕಾಯಲಿ.

ರಾಜ್ಯದಲ್ಲಿ ಈಗಾಗಲೇ ಆಗಿರುವ ಜಾತಿಗಣತಿ ವರದಿ ದೋಷಪೂರಿತವಾಗಿದೆ. ಗಣತಿ ಆಗಿ ಹತ್ತು ವರ್ಷಗಳು ಮೀರಿದೆ. ರಾಜ್ಯದಲ್ಲಿ ಹಣಕ್ಕೆ ಬರವಿಲ್ಲ. ರಾಜ್ಯ ಸರಕಾರವೇ ಹೊಸದಾಗಿ ಇನ್ನೊಂದು ಜಾತಿ ಜನಗಣತಿ ಮಾಡಲಿ. ಜನರಿಂದ ಹಣವನ್ನು ಯಥೇಚ್ಛವಾಗಿ ಸುಲಿಗೆ ಮಾಡುತ್ತಿದ್ದೀರಿ.

ಗಂಜಿ ಕೇಂದ್ರಗಳಿಗಾಗಿ ಬಾಯಿ ಬಿಟ್ಟುಕೊಂಡು ಕಾಯುತ್ತಾ ಕೂತಿರುವರು ಕೆಲವರು ಇರುತ್ತಾರಲ್ಲವೇ.. ಅವರನ್ನೇ ಸೇರಿಸಿ ಇನ್ನೊಂದು ಇನ್ನೊಂದು ಸಮಿತಿ ಮಾಡಿ ಜಾತಿಗಣತಿ ಮಾಡಿ ಎಂದು ಸಿಎಂಗೆ ಟಾಂಗ್ ಕೊಟ್ಟರು ಕುಮಾರಸ್ವಾಮಿ ಅವರು.

ರಾಜಕೀಯ

ದೊಡ್ಡಬಳ್ಳಾಪುರ: ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ.06 ಕೊನೆಯ ದಿನ

ದೊಡ್ಡಬಳ್ಳಾಪುರ: ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ.06 ಕೊನೆಯ ದಿನ

ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಸಾರ್ವಜನಿಕ ಪ್ರಕಟಣೆಯಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ (Teachers' Constituency) ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಗಳ (Voter list) ಸಮಗ್ರ ಪರಿಷ್ಕರಣೆ ನಡೆಸಲಾಗುತ್ತಿದೆ.

[ccc_my_favorite_select_button post_id="115466"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!