ಬೆಂಗಳೂರು: ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣದಲ್ಲಿ ಬಿಹಾರ ಮೂಲದ ಸೈಯ್ಯದ್ ನಸ್ರು (30 ವರ್ಷ) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ (Arrest).
ಬಂಧಿತ ಆರೋಪಿಯನ್ನು ಪೊಲೀಸರು ವಿಚಾರಣೆ ವೇಳೆ ಕುಡಿದ ಅಮಲಿನಲ್ಲಿ ಕೃತ್ಯ ಎಸಗಿರೋದಾಗಿ ತಪ್ಪೊಪ್ಪಿಗೆ ನೀಡಿದ್ದಾನೆ ಎನ್ನಲಾಗಿದೆ.
ಸೈಯ್ಯದ್ ನಸ್ರು ಬಿಹಾರ ಮೂಲದವನಾಗಿದ್ದು, ಬೆಂಗಳೂರಲ್ಲಿ ಪ್ಲಾಸ್ಟಿಕ್ ಹಾಗೂ ಕ್ಲಾತ್ ಬ್ಯಾಗ್ ಸ್ಟಿಚ್ಚಿಂಗ್ ಕೆಲಸ ಮಾಡ್ತಿದ್ದಾನೆ ಎನ್ನಲಾಗಿದೆ.
ಆರೋಪಿಯನ್ನು ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿದ್ದು, ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸದ್ಯದ ಮಾಹಿತಿ ಅನ್ವಯ ಈತ ಬೇರೆ ಯಾವುದೇ ವ್ಯಕ್ತಿಗಳು ಈ ಕೃತ್ಯದಲ್ಲಿ ಭಾಗಿಯಾಗಿಲ್ಲ ಎಂದು ತಿಳಿದುಬಂದಿದೆ.