ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ: BJP ನಾಯಕರು ದೆಹಲಿ ಗುಲಾಮರಾಗಿದ್ದಾರೆಂದ ಸಿಎಂ ಸಿದ್ದರಾಮಯ್ಯ

ಮೋದಿ ಅವರ ಎದುರು ನಿಂತು ನ್ಯಾಯ ಕೇಳುವ ಕನಿಷ್ಠ ಧೈರ್ಯವೂ BJP ಸಂಸದರಿಗೆ ಇಲ್ಲದೆ ದೆಹಲಿ ಸರ್ಕಾರದ ಗುಲಾಮರಾಗಿದ್ದಾರೆ.

ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ (BJP) ನಾಯಕರು ದೆಹಲಿ ಗುಲಾಮರಾಗಿದ್ದಾರೆ. ಜನಪ್ರತಿನಿಧಿಗಳು ದಾರಿ ತಪ್ಪಿದಾಗ ಸರಿದಾರಿಗೆ ತರುವ ಹೊಣೆ ಜನರದ್ದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾದ್ಯಮ ಪ್ರಕಟಣೆ ನೀಡಿರುವ ಅವರು, ಭಾರತೀಯ ಜನತಾ ಪಕ್ಷದ ನಾಯಕರು ಬಾಯಿ ಬಿಟ್ಟರೆ ದೇಶಪ್ರೇಮದ ಬಗ್ಗೆ ಮಾತನಾಡುತ್ತಾರೆ. ರಾಜ್ಯವನ್ನೇ ಪ್ರೀತಿಸದವರು ದೇಶವನ್ನು ಹೇಗೆ ಪ್ರೀತಿಸಲು ಸಾಧ‍್ಯ ಎನ್ನುವುದನ್ನು ಇವರೇ ಹೇಳಬೇಕು ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರ ಸೇಡು ತೀರಿಸಿಕೊಳ್ಳುವವರಂತೆ ಕರ್ನಾಟಕಕ್ಕೆ ನಿರಂತರವಾಗಿ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಿದ್ದ ರಾಜ್ಯದ ಬಿಜೆಪಿ (BJP) ನಾಯಕರು ಮತ್ತು ಸಂಸದರು ಅನ್ಯಾಯಕೋರ ಕೇಂದ್ರ ಸರ್ಕಾರವನ್ನು ಸಮರ್ಥಿಸುತ್ತಿರುವುದು ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯ ಮತ್ತು ಅವಮಾನವಾಗಿದೆ.

ಕೇಂದ್ರ ಸರ್ಕಾರ ಇತ್ತೀಚೆಗೆ ರಾಜ್ಯಗಳಿಗೆ ತೆರಿಗೆ ಮತ್ತು ಸುಂಕದ ಪಾಲಿನ ರೂಪದಲ್ಲಿ ಒಟ್ಟು 1,73,030 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕ ರಾಜ್ಯಕ್ಕೆ ನೀಡಿರುವ ಪಾಲು ಕೇವಲ 6,310 ಕೋಟಿ ರೂಪಾಯಿ.

ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ ಐದರಷ್ಟು ಕನ್ನಡಿಗರಿದ್ದರೂ ದೇಶದ ಜಿಡಿಪಿಯಲ್ಲಿ ಕನ್ನಡಿಗರ ಪಾಲಿನ ಪ್ರಮಾಣ ಶೇಕಡಾ 8.4 ಆಗಿದೆ. ಅತೀ ಹೆಚ್ಚು ಜಿಎಸ್‌ಟಿ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ‍್ಥಾನದಲ್ಲಿದೆ.

ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಶೇಕಡಾ 17ರಷ್ಟು ಹೆಚ್ಚಾಗುತ್ತಿದೆ. ಹೀಗಿದ್ದರೂ ತೆರಿಗೆ ಹಂಚಿಕೆಯಲ್ಲಿ ನಮ್ಮ ಪಾಲು ವರ್ಷದಿಂದ ವರ್ಷಕ್ಕೆ ಕಡಿಮೆ ಮಾಡುತ್ತಾ ಬರಲಾಗುತ್ತಿದೆ. ಈ ಅನ್ಯಾಯ ಯಾಕೆ.? ಎಂದು ಸಿಎಂ ಪ್ರಶ್ನಿಸಿದ್ದಾರೆ.

13 ಪೈಸೆಯಷ್ಟು ಮಾತ್ರ ವಾಪಸು

2018-19ರಲ್ಲಿ ರೂ. 24.42 ಲಕ್ಷ ಕೋಟಿಗಳಷ್ಟಿದ್ದ ಕೇಂದ್ರದ ಬಜೆಟ್ ಗಾತ್ರ, 2024-25ರಲ್ಲಿ ರೂ.46.28 ಲಕ್ಷ ಕೋಟಿಯಷ್ಟಾಗಿದೆ.

2018-19ರಲ್ಲಿ ಕರ್ನಾಟಕಕ್ಕೆ ನೀಡಿರುವ ತೆರಿಗೆ ಪಾಲು ರೂ.46,288 ಕೋಟಿಗಳಾಗಿದ್ದರೆ, 2024-25ರಲ್ಲಿ ಇದು ರೂ.44,485 ಕೋಟಿ ಮಾತ್ರ.

ಅಂದರೆ ಆರು ವರ್ಷಗಳ ಅವಧಿಯಲ್ಲಿ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ಕರ್ನಾಟಕದ ತೆರಿಗೆ ಪಾಲು 15,299 ರೂಪಾಯಿಗಳಷ್ಟು ಮಾತ್ರ ಹೆಚ್ಚಾಗಿದೆ. ಈ ತೆರಿಗೆ ಪಾಲು ಕನಿಷ್ಠ ಒಂದು ಲಕ್ಷ ಕೋಟಿ ರೂಪಾಯಿಗಳಷ್ಟಾದರೂ ಆಗಬೇಕಿತ್ತಲ್ಲವೇ?

ಕರ್ನಾಟಕದ ಜನತೆ ತೆರಿಗೆ ಮತ್ತು ಸುಂಕದ ಮೂಲಕ ಪ್ರತಿವರ್ಷ ನಾಲ್ಕುವರೆ ಲಕ್ಷ ಕೋಟಿ ರೂಪಾಯಿಗಳನ್ನು ಕೇಂದ್ರದ ಬೊಕ್ಕಸಕ್ಕೆ ನೀಡುತ್ತಿದೆ.

ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರ ತೆರಿಗೆ ಪಾಲಿನ ರೂಪದಲ್ಲಿ ರೂ.45,000 ಕೋಟಿ ಮತ್ತು ಅನುದಾನವಾಗಿ ರೂ.15,000 ಕೋಟಿ ನೀಡುತ್ತಿದೆ. ಅಂದರೆ ನಾವು ನೀಡುತ್ತಿರುವ ಒಂದು ರೂಪಾಯಿಗೆ ಕೇವಲ 13 ಪೈಸೆಯಷ್ಟು ಮಾತ್ರ ವಾಪಸು ನೀಡುತ್ತಿದೆ.

ಮೋದಿ ಸರ್ಕಾರದ ಗುಲಾಮರಾಗಿದ್ದಾರೆ

ತೆರಿಗೆ ಹಂಚಿಕೆ ಮಾಡುವಾಗಲೂ ‘’ಬಿಮಾರು’’ ರಾಜ್ಯಗಳೆಂಬ ಅಪಖ್ಯಾತಿಗೀಡಾಗಿರುವ ಬಿಹಾರ (ರೂ.17,403 ಕೋಟಿ), ಮಧ್ಯಪ್ರದೇಶ (ರೂ.13,582 ಕೋಟಿ), ರಾಜಸ್ತಾನ (ರೂ.10,426 ಕೋಟಿ) ಮತ್ತು ಉತ್ತರಪ್ರದೇಶಕ್ಕೆ (ರೂ.31,099 ಕೋಟಿ) ತೆರಿಗೆ ಪಾಲನ್ನು ನೀಡಿರುವ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕೇವಲ ರೂ.6,310 ಕೋಟಿ ನೀಡಿದೆ.

ಇದು ಉತ್ತಮ ಆಡಳಿತ, ಸುಸ್ಥಿರ ಅಭಿವೃದ್ದಿ ಮತ್ತು ಜಿಎಸ್‌ಟಿ ಸಂಗ್ರಹದಲ್ಲಿ ಮಾಡಿರುವ ಸಾಧನೆಗಾಗಿ ಕರ್ನಾಟಕಕ್ಕೆ ನೀಡಿರುವ ಶಿಕ್ಷೆಯೇ? ಕನ್ನಡಿಗರ ಬೆವರ ಗಳಿಕೆಯ ತೆರಿಗೆ ಹಣ ಭ್ರಷ್ಟ ರಾಜ್ಯಗಳ ಬೊಕ್ಕಸ ತುಂಬಲು ಯಾಕೆ ಬಳಕೆಯಾಗಬೇಕು?

ಹದಿನೈದನೇ ಹಣಕಾಸು ಆಯೋಗ ಕರ್ನಾಟಕದ ತೆರಿಗೆ ಪಾಲನ್ನು ಶೇ.4.73ರಿಂದ ಶೇಕಡಾ 3.64ಕ್ಕೆ ಇಳಿಸಿದೆ. ಇದರಿಂದ ಕಳೆದ ಐದು ವರ್ಷಗಳಲ್ಲಿ 79,770 ಕೋಟಿ ರೂಪಾಯಿಯನ್ನು ಕರ್ನಾಟಕ ಕಳೆದುಕೊಂಡಿದೆ.

ಈ ಅನ್ಯಾಯಕ್ಕೆ ಪರಿಹಾರವಾಗಿ ರೂ.5,495 ಕೋಟಿ ವಿಶೇಷ ಅನುದಾನ ನೀಡಬೇಕೆಂಬ ಹಣಕಾಸು ಆಯೋಗದ ಶಿಫಾರಸನ್ನು ಕೂಡಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರಸ್ಕರಿಸಿ ಕರ್ನಾಟಕಕ್ಕೆ ಅನ್ಯಾಯ ಎಸಗಿದ್ದಾರೆ.

ಇದು ಕರ್ನಾಟಕದ ಪ್ರಾಮಾಣಿಕ ತೆರಿಗೆದಾರರಿಗೆ ಮಾಡಿರುವ ಘೋರ ಅನ್ಯಾಯವಲ್ಲವೇ? ಈ ಅನ್ಯಾಯವನ್ನು ಖಂಡಿಸಬೇಕಾಗಿರುವ ರಾಜ್ಯದ ಬಿಜೆಪಿ (BJP) ನಾಯಕರು ನಿರ್ಲಜ್ಜರಾಗಿ ಸಮರ್ಥಿಸುತ್ತಿರುವುದು ಕನ್ನಡಿಗರಿಗೆ ಬಗೆಯುತ್ತಿರುವ ದ್ರೋಹವಾಗಿದೆ.

ಇವರ ಆರ್ಭಟವೇನಿದ್ದರೂ ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಲು ಮತ್ತು ಬೀದಿಗಳಲ್ಲಿ ಪರಸ್ಪರ ಕಚ್ಚಾಡಲು ಸೀಮಿತವಾಗಿದೆ ಎಂದು ಸಿಎಂ ಲೇವಡಿ ಮಾಡಿದ್ದಾರೆ.

ರಾಜ್ಯದಿಂದ ಆರಿಸಿಹೋಗಿರುವ ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಎದುರು ನಿಂತು ನ್ಯಾಯ ಕೇಳುವ ಕನಿಷ್ಠ ಧೈರ್ಯವೂ ಇಲ್ಲದೆ ದೆಹಲಿ ಸರ್ಕಾರದ ಗುಲಾಮರಾಗಿದ್ದಾರೆ.

ಜನಪ್ರತಿನಿಧಿಗಳು ಜನದ್ರೋಹಿಗಳಾದಾಗ ಅವರನ್ನು ಜನರೇ ವಿಚಾರಿಸಿಕೊಳ್ಳಬೇಕಾಗುತ್ತದೆ. ಕೇಂದ್ರದ ಕಿವುಡ ಸರ್ಕಾರ ಮತ್ತು ಬಿಜೆಪಿಯ ಮೂಗ ನಾಯಕರ ವಿರುದ್ಧ ಕನ್ನಡಿಗರೆಲ್ಲರೂ ಜಾತಿ, ಧರ್ಮ, ಪಕ್ಷ ಪಂಥಗಳನ್ನು ಮೀರಿ ದನಿ ಎತ್ತಬೇಕಾಗಿದೆ.

ಇಂತಹದ್ದೊಂದು ಸಂಕಲ್ಪವನ್ನು ಸಂಕ್ರಮಣದ ಶುಭದಿನದಂದು ಪ್ರತಿಯೊಬ್ಬ ಕನ್ನಡಿಗರು ಕೈಗೊಂಡು ಕರ್ನಾಟಕವನ್ನು ಅನ್ಯಾಯ ಮತ್ತು ಅವಮಾನದಿಂದ ರಕ್ಷಿಸಬೇಕಾಗಿದೆ ಎಂದಿದ್ದಾರೆ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]