Give justice to the candidates in the case of KAS Prelims Reexamination

R Ashoka: ಹಿಂದೂಗಳ ಸಂಖ್ಯೆ ಕಡಿಮೆಯಾಗಲಿ ಎಂಬುದು ಸಿಎಂ ಸಿದ್ದರಾಮಯ್ಯನವರ ಉದ್ದೇಶ: ಆರ್ ಅಶೋಕ

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಹುಡುಕಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಿಂದೂಗಳಿಗೆ ಘಾಸಿಯಾಗುವ ಘಟನೆ ನಡೆದಿದೆ.

ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುಗಳ ಕೆಚ್ಚಲು ಕೊಯ್ದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ವಹಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದೆ. ಈಗ ಕಾಟಾಚಾರಕ್ಕಾಗಿ ಒಬ್ಬನನ್ನು ಬಂಧಿಸಿದ್ದು, ಈತ ಬಿಹಾರದಿಂದ ಬಂದವನು ಎನ್ನಲಾಗಿದೆ. ಆದರೆ ಈತ ಇದೇ ಊರಿನಲ್ಲಿ ಹತ್ತು ವರ್ಷಗಳಿಂದ ನೆಲೆಸಿದ್ದು, ಆತನ ಅಣ್ಣನಿಗೆ ಫ್ಯಾಕ್ಟರಿ ಕೂಡ ಇದೆ.

ಪೊಲೀಸರು ಈತನನ್ನು ವಿಚಾರಣೆ ಮಾಡಿ, ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಮಾಡಬೇಕಿತ್ತು ಎಂದರು.

ಈ ಘಟನೆಯಲ್ಲಿ ಯಾರ ಕೈವಾಡವಿದೆ ಎಂದು ತನಿಖೆ ಮಾಡಬೇಕಿತ್ತು. ಇಲ್ಲಿ ಪಶು ಆಸ್ಪತ್ರೆಯ ಜಾಗವಿದ್ದು, ಅದನ್ನು ವಕ್ಫ್‌ಗೆ ನೀಡಲು ಪ್ರಯತ್ನ ನಡೆದಿತ್ತು. ಸುಮಾರು 500 ಕೋಟಿ ರೂ. ಬೆಲೆಬಾಳುವ ಆಸ್ತಿಯನ್ನು ಲೂಟಿ ಮಾಡಲು ನಕಲಿ ದಾಖಲೆಗಳನ್ನು ಸರ್ಕಾರ ಸೃಷ್ಟಿ ಮಾಡಿತ್ತು. ಅದರ ವಿರುದ್ಧ ಹೋರಾಟ ಮಾಡಿದ ಕರ್ಣ ಅವರ ಮೇಲೆ ಸೇಡು ತೀರಿಸಿಕೊಳ್ಳಲು ಹೀಗೆ ಮಾಡಿದ್ದಾರೆ. ಸಚಿವ ಜಮೀರ್‌ ಅಹ್ಮದ್‌ ಹಸು ನೀಡುವುದರಿಂದ ಪರಿಹಾರ ಸಿಗಲ್ಲ. ಇದಕ್ಕೆ ನ್ಯಾಯ ಸಿಗಬೇಕಿದೆ ಎಂದು ಆಗ್ರಹಿಸಿದರು.

ಹಿಂದೂಗಳ ಸಂಖ್ಯೆ ಕಡಿಮೆಯಾಗಿಸುವ ಹುನ್ನಾರ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಎರಡು ಮಕ್ಕಳು ಮಾಡಿಕೊಳ್ಳಿ ಎಂದು ಹೇಳಿದ್ದಾರೆ. ಇದನ್ನೇ ಮುಸ್ಲಿಮರ ಬಳಿ ಹೋಗಿ ಹೇಳಲಿ. ಹಿಂದೂಗಳ ಸಂಖ್ಯೆ ಕಡಿಮೆಯಾಗಲಿ, ಮುಸ್ಲಿಮರ ಸಂಖ್ಯೆ ಹೆಚ್ಚಲಿ ಎಂಬುದು ಅವರ ಉದ್ದೇಶ.

ಒಂದು ಧರ್ಮಕ್ಕೆ ಬೆಣ್ಣೆ, ಮತ್ತೊಂದು ಧರ್ಮಕ್ಕೆ ಸುಣ್ಣ ಹಚ್ಚಲಾಗುತ್ತಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಎಲ್ಲ ಸಮುದಾಯಗಳನ್ನು ಒಂದಾಗಿ ಕೊಂಡೊಯ್ಯಬೇಕು ಎಂದು ಕಿವಿಮಾತು ಹೇಳಿದರು.

ರಾಜ್ಯದಲ್ಲಿ ಆಡಳಿತ ನೆಲ ಕಚ್ಚಿದೆ. ಅಭಿವೃದ್ಧಿ ಕಾರ್ಯವನ್ನು ಟಾರ್ಚ್‌ ಹಾಕಿ ಹುಡುಕಬೇಕಿದೆ. ಸಿಎಂ ಕುರ್ಚಿ ಖಾಲಿ ಇಲ್ಲವೆಂದು ಸಿದ್ದರಾಮಯ್ಯ ಸಾವಿರ ಬಾರಿ ಹೇಳಿದ್ದಾರೆ. ಎಲ್ಲೇ ಹೋದರೂ ಅದನ್ನೇ ಮಾತಾಡುತ್ತಿದ್ದಾರೆ.

ಎಲ್ಲ ನಾಯಕರು ಪವರ್‌ ಪಾಲಿಟಿಕ್ಸ್‌ನಲ್ಲಿ ಮುಳುಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಮಂಡ್ಯಕ್ಕೆ ಹೋಗಿ ಅಧಿಕಾರ ಕೊಡಿ ಎಂದು ಜನರ ಮುಂದೆ ಹೇಳಿದ್ದರು. ಈಗ ಶಾಸಕರ ಮುಂದೆ ಹೋಗಿ ಅಂಗಲಾಚುತ್ತಿದ್ದಾರೆ. ಇವರ ಕಥೆ ಕತ್ತಲಲ್ಲಿ ಕರಡಿಯನ್ನು ಹುಡುಕುವಂತಾಗಿದೆ. ಈ ಪವರ್‌ ಶೇರಿಂಗ್‌ ಎಲ್ಲಿ ನಡೆದಿದೆ ಎಂದು ಜನರಿಗೆ ಸ್ಪಷ್ಟವಾಗಿ ತಿಳಿಸಲಿ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಶ್ಲೋಕ ಹೇಳಿದರೆ, ಸಚಿವ ರಾಜಣ್ಣ ಟೀಕೆ ಮಾಡುತ್ತಿದ್ದಾರೆ. ಸಚಿವ ಪರಮೇಶ್ವರ್‌ ಕೂಡ ಕೆಂಡಕಾರಿದ್ದಾರೆ. ಕೆಲವು ಶಾಸಕರು ಮುಂದಿನ ಸಿಎಂ ಶಿವಕುಮಾರ್‌ ಎನ್ನುತ್ತಿದ್ದಾರೆ. ಜನರು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಇಂತಹ ಪಾಪಿ ಸರ್ಕಾರ ಯಾಕಾದರೂ ಬಂತೋ ಎಂದು ಜನರು ಶಾಪ ಹಾಕುತ್ತಿದ್ದಾರೆ ಎಂದರು.

ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲ ಬಂದು ಹೋದ ಬಳಿಕವೂ ಈ ಸಮಸ್ಯೆ ನಿವಾರಣೆಯಾಗಲ್ಲ. ಪವರ್‌‌ ಶೇರಿಂಗ್‌ ಬಗ್ಗೆ ಶಾಸಕರಿಗೆ ಸ್ಪಷ್ಟವಾಗಬೇಕಿದೆ. ಹೈಕಮಾಂಡ್‌ ಡಿ.ಕೆ.ಶಿವಕುಮಾರ್‌ ಅವರಿಗೆ ಮಾತು ನೀಡಿದೆ. ಅದರ ಬಗ್ಗೆ ಸರಿಯಾಗಿ ತಿಳಿಸಲಿ ಎಂದರು.

ರಾಜಕೀಯ

ದೆಹಲಿ ತೀರ್ಪು: ಸೋತ ಕೇಜ್ರಿವಾಲ್, ಕಾಂಗ್ರೆಸ್ಗೆ ಮುಖಭಂಗ.. BJP ಅಧಿಕಾರಕ್ಕೆ

ದೆಹಲಿ ತೀರ್ಪು: ಸೋತ ಕೇಜ್ರಿವಾಲ್, ಕಾಂಗ್ರೆಸ್ಗೆ ಮುಖಭಂಗ.. BJP ಅಧಿಕಾರಕ್ಕೆ

ಇದರೊಂದಿಗೆ ಕಳೆದ ಹತ್ತು ವರ್ಷಗಳ ಹಿಂದೆ ಕ್ಲೀನ್ ಇಮೇಜ್ ನೊಂದಿಗೆ ಸತತ ಎರಡು ಬಾರಿ ದೆಹಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್​ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿದೆ. AAP

[ccc_my_favorite_select_button post_id="102437"]
ಬಾಶೆಟ್ಟಿಹಳ್ಳಿ ಕೆರೆ ಗೋಡೆಯ ಮೇಲೆ ಬಣ್ಣಬಣ್ಣದ ಚಿತ್ತಾರ..!:  WWF ಇಂಡಿಯಾ ಸಂಸ್ಥೆಯಿಂದ ಪರಿಸರ ಮಾಹಿತಿ..

ಬಾಶೆಟ್ಟಿಹಳ್ಳಿ ಕೆರೆ ಗೋಡೆಯ ಮೇಲೆ ಬಣ್ಣಬಣ್ಣದ ಚಿತ್ತಾರ..!: WWF ಇಂಡಿಯಾ ಸಂಸ್ಥೆಯಿಂದ ಪರಿಸರ

ಕೆರೆಗೆ ಬರುವವರಿಗೆ ಮತ್ತು ಹಾದು ಹೋಗುವವರಿಗೆ ಕೆರೆಯ ಸಂರಕ್ಷಣಾ ಮಹತ್ವ ತಿಳಿಸುವ ಉದ್ದೇಶದಿಂದ, ಕೆರೆಯ ಜೀವವೈವಿದ್ಯತೆ, ಕೆರೆಗಳ ಮಹತ್ವ, ಕೆರೆಗಳಿಗೆ ಇರುವ ತೊಂದರೆಗಳು ಮತ್ತು ಚಿಟ್ಟೆಗಳ ಬಗ್ಗೆ WWF

[ccc_my_favorite_select_button post_id="102448"]
ಭಾರತೀಯರಿಗೆ ಅವಮಾನ: ಯುಎಸ್ ಪ್ರವಾಸ ರದ್ದುಗೊಳಿಸಿ.. ಮೋದಿಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಭಾರತೀಯರಿಗೆ ಅವಮಾನ: ಯುಎಸ್ ಪ್ರವಾಸ ರದ್ದುಗೊಳಿಸಿ.. ಮೋದಿಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಅಲ್ಲದೆ ಬಿಜೆಪಿಯ ಐಟಿ ಸೆಲ್ ಭಾರತೀಯರ ಕೈಕೋಳ ಮತ್ತು ಸರಪಳಿಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಅದಾನಿಯನ್ನು ಬಹುಪಾಲುಗಳಿಂದ ರಕ್ಷಿಸಲು ಮೋದಿಗೆ ಸಹಾಯ ಮಾಡಿದರೆ ಅದು ಸಹ ಭಾರತೀಯರನ್ನು ಅಪಹಾಸ್ಯ ಮಾಡುತ್ತದೆ ಎಂದಿರುವ ಟ್ವಿಟ್ಗೆ ಉತ್ತರ ನೀಡಿ,

[ccc_my_favorite_select_button post_id="102440"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
Doddaballapura: ಅಣ್ಣ ಸಾವನಪ್ಪಿದ್ದ ಮರದ ಬಳಿಯಲ್ಲೇ ತಮ್ಮ ಆತ್ಮಹತ್ಯೆ..!

Doddaballapura: ಅಣ್ಣ ಸಾವನಪ್ಪಿದ್ದ ಮರದ ಬಳಿಯಲ್ಲೇ ತಮ್ಮ ಆತ್ಮಹತ್ಯೆ..!

ಆತ್ಮಹತ್ಯೆಗೂ ಮುನ್ನಾ ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. Suicide

[ccc_my_favorite_select_button post_id="102462"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಸೆಲೆಬ್ರಿಟಿಗಳಿಗೆ ಕ್ಷಮೆ ಕೋರಿದ ದರ್ಶನ್.. ಕಾರಣವೇನು..? video ನೋಡಿ

ಸೆಲೆಬ್ರಿಟಿಗಳಿಗೆ ಕ್ಷಮೆ ಕೋರಿದ ದರ್ಶನ್.. ಕಾರಣವೇನು..? video ನೋಡಿ

ಜನ್ಮದಿನದ ಹಿನ್ನೆಲೆಯಲ್ಲಿ ವಿಡಿಯೋ ಮೂಲಕ ಸೆಲೆಬ್ರಿಟಿಗಳಿಗೆ ದರ್ಶನ್ ಸಂದೇಶ ನೀಡಿದ್ದಾರೆ. ಇದೇ ವೇಳೆ ಹಲವ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. Darshan

[ccc_my_favorite_select_button post_id="102428"]
error: Content is protected !!