Know the history of Rayanna and develop patriotism

Rayanna: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ -2025

ಬೆಳಗಾವಿ: ರಾಣಿ ಕಿತ್ತೂರು ಚೆನ್ನಮ್ಮರನ್ನು ನೆನೆದರೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (Rayanna) ಸ್ಮರಿಸಲೇಬೇಕು. ಬ್ರಿಟಿಷ್ ವಿರುದ್ಧ ಹೋರಾಟದ ಕಿಚ್ಚು ಹಚ್ಚಿ ತಮ್ಮ ಬಲಿದಾನಗಳ ಮೂಲಕ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ.

ಇಂದಿನ ಯುವ ಸಮೂಹ ರಾಯಣ್ಣನ ಇತಿಹಾಸ ಅರಿತು ರಾಷ್ಟ್ರಪ್ರೇಮ ಬೆಳಸಿಕೊಳ್ಳಬೇಕು ಎಂದು ಬೈಲಹೊಂಗಲ ಶಾಸಕರು ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ ಅವರು ಕರೆ ನೀಡಿದರು.

ಬೆಳಗಾವಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಭಾನುವಾರ (ಜ.12) ಸಂಗೊಳ್ಳಿ ಶಾಲಾ ಆವರಣದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ -2025 ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿಗಳ ಆಶ್ವಾಸನೆಯಂತೆ ಸಂಗೊಳ್ಳಿಯಲ್ಲಿ ರಾಕ್ ಗಾರ್ಡನ್ ಹಾಗೂ ಸೈನಿಕ ಶಾಲೆ ನಿರ್ಮಾಣ ಮಾಡಿ ಈಗಾಗಲೇ ಲೋಕಾರ್ಪಣೆಗೊಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಈ ಭಾಗದ ಅಭಿವೃದ್ಧಿಗೆ ಬಹಳಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರು.

ಅದೇ ರೀತಿಯಲ್ಲಿ ಬೇವೀನಕೊಪ್ಪ ಸೇತುವೆ ನಿರ್ಮಾಣವಾಗಿದೆ. ಏತನೀರಾವರಿ, ಕೃಷಿ, ಶೈಕ್ಷಣಿಕ ಅಭಿವೃದ್ಧಿ ಸೇರಿದಂತೆ ಇನ್ನೂ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು.

ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಅಮಟೂರು ಬಾಳಪ್ಪ ಸೇರಿದಂತೆ ಬಹುಪಾಲು ಸ್ವಾತಂತ್ರ್ಯ ಹೋರಾಟಗಾರರು ಈ ಭಾಗದವರೇ ಆಗಿದ್ದಾರೆ ಎಂಬುದು ಹೆಮ್ಮಯ ವಿಚಾರ ಎಂದು ಶಾಸಕ ಮಹಾಂತೇಶ ಕೌಜಲಗಿ ತಿಳಿಸಿದರು.

ತಾಯಿ ನಿಷ್ಠೆ ಮೆರೆದ ರಾಯಣ್ಣ

ಕಿತ್ತೂರು ಕಲ್ಮಠ ಸಂಸ್ಥಾನದ ರಾಜಗುರು ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು ಮಾತನಾಡಿ ತಾಯಿಗೆ ನೀಡಿದ ಮಾತಿನಂತೆ ಸಂಗೊಳ್ಳಿ ರಾಯಣ್ಣ ತಾಯಿ ನಿಷ್ಠೆ ಮೇರಿದಿದ್ದಾರೆ.

ರಾಯಣ್ಣ ಪ್ರಾಮಾಣಿಕತೆ, ಪ್ರಬುದ್ಧತೆಯ ಮಹಾ ಶೂರನಾಗಿದ್ದರು. ಕಿತ್ತೂರು ಚಿಕ್ಕ ಸಂಸ್ಥಾನವಾದರೂ ಇಡೀ ಬ್ರಿಟಿಷ್ ಆಡಳಿತದ ನಿದ್ದೆಗೆಡಿಸಿ ಸ್ವಾತಂತ್ರ್ಯ ಹೋರಾಟದ ಕಿಡಿ ಹೊತ್ತಿಸಿದರು. ಚನ್ನಮ್ಮ, ರಾಯಣ್ಣನ ದಿಟ್ಟತನ ಯುವ ಪೀಳಿಗೆಗೆ ಮೈಗೂಡಿಸಿಕೊಳ್ಳಬೇಕು ಎಂದರು.

ಸರ್ಕಾರದಿಂದ ಶಾಲಾ ಪಠ್ಯಕ್ರಮದಲ್ಲಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ ಸೇರಿದಂತೆ ಈ ನಾಡಿನ ವೀರರ ಪರಿಚಯ ಆಗಬೇಕಿದೆ. ದೆಹಲಿ ಪಾರ್ಲಿಮೆಂಟ್ ನಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನೆ ಆಗಬೇಕಿದೆ.

ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ ಆಗಬೇಕು ಎಂಬುದು ಜನರ ಬೇಡಿಕೆಯಾಗಿದೆ. ಅವರ ದೇಶಪ್ರೇಮವನ್ನು ನಾವೆಲ್ಲರೂ ಪ್ರೇರಣೆಯಾಗಿ ತೆಗೆದುಕೊಳ್ಳಬೇಕು ಎಂದು ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು ತಿಳಿಸಿದರು.

ಸಂಗೊಳ್ಳಿ ರಾಯಣ್ಣ ಒಡನಾಟದಲ್ಲಿದ್ದ ಬಿಚ್ಚುಗತ್ತಿ ಚನ್ನಪಸಪ್ಪನವರ ಮೂರ್ತಿ ಸಂಗೊಳ್ಳಿಯಲ್ಲಿ ನಿರ್ಮಾಣವಾಗಬೇಕಿದೆ.

ರಾಯಣ್ಣನ ಇತಿಹಾಸ ಪರಿಚಯಿಸುವ ರಾಕ್ ಗಾರ್ಡನ್ ಈಗಾಗಲೇ ನಿರ್ಮಾಣವಾಗಿದೆ ಸಾಕಷ್ಟು ಪ್ರೇಕ್ಷಕರನ್ನು ಆಕರ್ಷಿಸಿದೆ
ಸಂಗೊಳ್ಳಿಯ ಶ್ರೀ ಗುರು ಸಿದ್ಧಲಿಂಗೇಶ್ವರ ಹಿರೇಮಠ ಸಂಸ್ಥಾನದ ಶ್ರೀ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ರಾಕ್ ಗಾರ್ಡನ್ ವೀಕ್ಷಣೆಗೆ ಬಹಳಷ್ಟು ದೂರದಿಂದ ಸಾರ್ವಜನಿಕರು, ಶಾಲಾ ಕಾಲೇಜು ಮಕ್ಕಳು ಬರುತ್ತಿದ್ದಾರೆ. ಹಾಗಾಗಿ ಮುಂಬರುವ ದಿನಗಳಲ್ಲಿ ಬರುವ ವೀಕ್ಷಕರಿಗೆ ರಾಕ್ ಗಾರ್ಡನ್ ಪ್ರವೇಶ ದರ 50% ಇಳಿಕೆ ಮಾಡಬೇಕು ಇದರಿಂದ ಸಾರ್ವಜನಿಕರಿಗೆ ಅನುಕಲಾಗಲಿದೆ ಎಂದು ಹೇಳಿದರು.

ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ, ಬೈಲಹೊಂಗಲ ತಹಶೀಲ್ದಾರ್ ಹಣಮಂತ ಶಿರಹಟ್ಟಿ, ಬೈಲಹೊಂಗಲ ಉಪ ಅಧೀಕ್ಷಕ ರವಿ ನಾಯಕ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸವದತ್ತಿ ಸಹಶೀಲ್ದಾರ್ ಮಲ್ಲಿಕಾರ್ಜುನ್ ಹೆಗ್ಗನವರ, ಕಿತ್ತೂರು ತಹಶೀಲ್ದಾರ್ ರವೀಂದ್ರ ಹಾದಿಮನಿ, ಸಂಗೊಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ರೂಪಾ ಚಚಡಿ, ಉಪಾಧ್ಯಕ್ಷ ಫಕೀರಪ್ಪ ಕೋರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ರಾಜಕೀಯ

ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಗ್ಯಾರಂಟಿಗಳಿಗೆ ಈ ಹಣವನ್ನು ಬಳಸಿದರೂ ಇನ್ನೂ ಹಣ ಉಳಿಯುತ್ತದೆ. ಗ್ಯಾರಂಟಿಗೆ ಹಣ ಕೊಡಬೇಡಿ ಎಂದು ಹೇಳುತ್ತಿಲ್ಲ. ಆರ್. ಅಶೋಕ (R. Ashoka)

[ccc_my_favorite_select_button post_id="112891"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!