ಶ್ರೀ ಸಿದ್ದರಾಮೇಶ್ವರರು ಕಾಯಕದ ಮೂಲಕ ಪವಾಡ ಸೃಷ್ಠಿಸಿದವರು: ಬಸವರಾಜ ಬೊಮ್ಮಾಯಿ

Sri Siddarameshwar created a miracle through Kayak

ಬೆಂಗಳೂರು: ಶರಣ ಶ್ರೀ ಸಿದ್ದರಾಮೇಶ್ವರರು ಕಾಯಕದ ಮೂಲಕ ಪವಾಡ ಸೃಷ್ಠಿಸಿದವರು. ಕಾಯಕ ಮಾಡುವವರಿಗೆ ಯಾವತ್ತೂ ಬಡತನ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನೊಳಂಬ ಲಿಂಗಾಯತ ಸಂಘ ಏರ್ಪಡಿಸಿದ್ದ ಶ್ರೀ ಗುರು ಸಿದ್ದರಾಮೇಶ್ವರರ 852ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಸಾಹಿತ್ಯಗೋಷ್ಠಿ ಉದ್ಘಾಟಿಸಿ ಮಾತನಾಡಿದರು.

ನಮ್ಮದು ದಿವ್ಯ ಪರಂಪರೆ ಹೊಂದಿರುವ ಸಮಾಜ, 12ನೇ ಶತಮಾನದಲ್ಲಿ ಹಲವಾರು ಶರಣರನ್ನು ಸೃಷ್ಟಿಸಿದ ಶ್ರೇಷ್ಠ ಕ್ರಾಂತಿಯಲ್ಲಿ ವಿಭಿನ್ನರಾದವರು ಶ್ರೀ ಸಿದ್ದರಾಮೇಶ್ವರ ಶರಣರು, ಬಸವಣ್ಣನವರ ಕಾಯಕ ತತ್ಬವನ್ನು ಪಾಲಿಸಿದ್ದರು ಎಂದು ಹೇಳಿದರು.

ಶ್ರೀ ಸಿದ್ದರಾಮೇಶ್ವರರು ಬಾಲ್ಯದಲ್ಲಿಯೇ ವಯಸ್ಸಿಗೆ ಮೀರಿ ಜ್ಞಾನ ಮತ್ತು ನಡವಳಿಕೆ ಮೂಲಕ ಪವಾಡಪುರುಷರಾಗುವ ಎಲ್ಲ ಗುಣ ಹೊಂದಿದ್ಸರು. ಅವರು ಶ್ರೀಶೈಲ ಮಲ್ಲಿಮಾರ್ಜುನನ ಆಶೀರ್ವಾದ ಪಡೆದವರು.

ಮಲ್ಲಿಕಾರ್ಜುನ ಭಿಕ್ಷೆಗೆ ಬಂದಾಗ ಇವರು ಭಿಕ್ಷೆ ನೀಡದಿದ್ದಾಗ ಮಲ್ಲಿಕಾರ್ಜುನ ಕಾಣೆಯಾದಾಗ ಶ್ರೀಶೈಲಕ್ಕೆ ತೆರಳಿ ಅಲ್ಲಿಯೇ ತಪಸ್ಸು ಮಾಡಿ ಶ್ರಿಶೈಲ ಮಲ್ಲಿಕಾರ್ಜುನನ್ನು ಒಲಿಸಿಕೊಳ್ಳುತ್ತಾರೆ. ಕಾಯಕದ ಮೂಲಕ ಪವಾಡ ಸೃಷ್ಠಿಸಿದವರು ಶ್ರೀ ಸಿದ್ದರಾಮೇಶ್ವರರು ಎಂದರು.

ಬಸವಣ್ಣನವರು ಕಾಯಕೇ ಕೈಲಾಸ ಎಂದರು. ಕಾಯಕ ಪೂಜೆಗಿಂತ ದೊಡ್ಡದು. ಭಗವಂತ ಎದುರು ಬಂದರೂ ನಿಮ್ಮ ಕಾಯಕ ನಿಲ್ಲಿಸಬೇಡ ಎಂದು ಬಸವಣ್ಣನರು ಹೇಳಿದ್ದರು.

ಅಂತಹ ಅದಮ್ಯ ಕಾಯಕದ ಮೂಲಕ ಪವಾಡ ಮಾಡಿದವರು ಶ್ರೀ ಸಿದ್ದರಾಮೇಶ್ವರರು. ಸೊಲ್ಲಾಪುರದಲ್ಲಿ ಬರಗಾಲ ಬಂದಾಗ ನಾಲ್ಕು ಸಾವಿರ ಶರಣರನ್ನು ಸೇರಿಸಿ ಕೆರೆ ಕಟ್ಟಿಸಿದರು. ಅದರಲ್ಲಿ ಇಂದಿಗೂ ನೀರಿದೆ ಎಂದು ಹೇಳಿದರು.

ಕಾಯಕ ಎಂದರೆ ಹೊಟ್ಟೆಪಾಡಿಗಾಗಿ ಅಲ್ಲ. ಕಾಯಕ ಅಂದರೆ ಪರಿಪೂರ್ಣತೆ. ಆ ಸಂದರ್ಭದಲ್ಲಿ ರೈತರಿಗೆ ನೀರು, ನೀರಾವರಿ ಮಹತ್ವ ಹೇಳಿಕೊಟ್ಟವರು, ಮಣ್ಣಿನ ಮಹತ್ವ, ಬದುಕಿನ ಜೀವಾಳ ಎನ್ನುವುದನ್ನು ತೋರಿಸಿದರು ಶ್ರೀ ಸಿದ್ದರಾಮೇಶ್ವರರು. ನೊಳಂಬ ಸಮಾಜದಲ್ಲಿ ಕಾಯಕ ಎನ್ನುವುದು ರಕ್ತಗತವಾಗಿ ಬಂದಿದೆ.

ಕಾಯಕ ಸಮಾಜಕ್ಕೆ ಎಂದೂ ಬಡತನ, ದುಖ ಬರುವುದಿಲ್ಲ. ಕಷ್ಟಗಳನ್ನು ಮೆಟ್ಟಿ ನಿಲ್ಲುವ ಶಕ್ತಿ ನೊಳಂಬ ಸಮುದಾಯಕ್ಕೆ ಇದೆ ಎಂದು ಹೇಳಿದರು.

ಮಾಧುಸ್ವಾಮಿ ಕಾರ್ಯ ಶ್ಲಾಘನೆ

ನಾನು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಮಾಜಿ ಸಂಸದ ಬಸವರಾಜು ಅವರ ಜೊತೆ ಎರಡು ದಶಕಗಳ ಕಾಲ ಕೆಲಸ ಮಾಡುವ ಅವಕಾಶ ಪಡೆದಿದ್ದೆ. ಸಣ್ಣ ನಿರಾವರಿ ಇಲಾಖೆಯಲ್ಲಿ ದೊಡ್ಡ ಸಾಧನೆ ಮಾಡಿರುವುದು ಮಾಧುಸ್ವಾಮಿಯವರು. ಅವರು ಬಹಳ ಅದ್ಬುತವಾದ ಕೆಲಸಗಳನ್ನು ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ‌ ಜಿಲ್ಲೆಗಳಲ್ಲಿ ಅವರು ಮಾಡಿರುವ ಕಾರ್ಯಗಳು ಶ್ಲಾಘನೀಯ.

ಚಿಕ್ಕನಾಯಕನಹಳ್ಳಿಯ ದೊಡ್ಡ ನಾಯಕ ಮಾಧುಸ್ವಾಮಿಯವರು, ಮಾಜಿ ಸಂಸದ ಬಸವರಾಜು ಅವರು ಹೇಮಾವತಿ ನೀರಿಗಾಗಿ ನಿರಂತರ ಹೋರಾಟ ಮಾಡಿದ್ದಾರೆ‌. ನೊಳಂಬರ ನಾಡಿನಲ್ಲಿ ನೀರಾವರಿ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಕೆರೆ ತುಂಬಿಸುವ ಕೆಲಸ ಮಾಡಿದೆ.

ಗೋರೂರು ಹೆಬ್ಬೂರು ಏತ ನೀರಾವರಿ ಯೋಜನೆ 30 ವರ್ಷದಿಂದ ನೆನೆಗುದಿಗೆ ಬಿದ್ದಿತ್ತು. ಹದಿನೆಂಟು ತಿಂಗಳಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಂಡು, ಪರಮಪೂಜ್ಯ ಶ್ರೀ ಶಿವಕುಮಾರಸ್ವಾಮಿ ಹಾಗೂ ಬಾಲಗಂಗಾಧರ ನಾಥ ಸ್ವಾಮೀಜಿ ಅವರ ಕೈಯಿಂದ ಉದ್ಘಾಟನೆ ಮಾಡಿಸಿದೆ.

ನೀರಾವರಿ ಸಚಿವನಾಗಿ ಸುಮಾರು ಏಳೂವರೆ ಲಕ್ಷ ಎಕರೆ ಜಮೀನು ನೀರಾವರಿ ಮಾಡಿದ ಸಂತೃಪ್ತಿ ಇದೆ ಎಂದರು.
ಶರಣರ ಸಾಹಿತ್ಯ ಮತ್ತು ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಿಳಿಸುವ ಕೆಲಸವಾಗಬೇಕಿದೆ. ಇತ್ತೀಚೆಗೆ ಪಾಶ್ಚಾತ್ಯ ಸಂಸ್ಕೃತಿ ಅನುಕರಣೆ ಹೆಚ್ಚಾಗಿದೆ.

ನಾಗರಿಕತೆ ಮತ್ತು ಸಂಸ್ಕೃತಿ ಬೇರೆ ಬೇರೆ ಇದನ್ನು ಅರ್ಥ ಮಾಡಿಕೊಂಡು ನಮ್ಮ ಸಂಸ್ಕೃತಿ ಉಳಿಸಿಕೊಂಡು ಹೋಗಬೇಕು. ಈ ಮೂಲಕ ಶ್ರೀ ಸಿದ್ದರಾಮೇಶ್ವರ ಜಯಂತಿ ಆಯೋಜನೆ ಮಾಡಿರುವುದಕ್ಕೆ ಸಾರ್ಥಕವಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಂಗ ಸ್ವಾಮೀಜಿ, ಅರಸೀಕರೆಯ ಜ್ಞಾನಪ್ರಭು ಸ್ವಾಮೀಜಿ , ಶಿವಶಂಕರ ಶಿವಯೋಗಿ ಮಹಾ ಸ್ವಾಮಿಗಳು, ಮಾಜಿ ಸಚಿವರಾದ ಜೆ.ಸಿ. ಮಾಧುಸ್ವಾಮಿ, ಡಾ. ಸಿ.ಎನ್. ಅಶ್ವತ್ಥ್ ನಾರಾಯಣ, ಸಿ.ಟಿ. ರವಿ, ನಿವೃತ್ತ ಡಿಜಿಪಿ ಶಂಕರ ಬಿದರಿ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]