390 Crore Rs. Foundation stone laying for investment IBC Giga Factory

ದೇವನಹಳ್ಳಿಯಲ್ಲಿ 390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ: ಎಂಬಿ ಪಾಟೀಲ| IBC GIGA

ದೇವನಹಳ್ಳಿ: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ (IBC GIGA) ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಕಂಪನಿಯು ತಯಾರಿಸುವ ಬ್ಯಾಟರಿಗಳ ಪ್ರದರ್ಶನವನ್ನು ಕೂಡ ಏರ್ಪಡಿಸಲಾಗಿತ್ತು.

ಮಹಾನಗರ ಗ್ಯಾಸ್ ಲಿಮಿಟೆಡ್ ಜತೆ ಸೇರಿ ಐಬಿಸಿ ಈ ಕಾರ್ಖಾನೆಯನ್ನು ಸ್ಥಾಪಿಸುತ್ತಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವನಹಳ್ಳಿಯ ಕೆಐಎಡಿಬಿ ಐಟಿಐಆರ್ ಕೈಗಾರಿಕಾ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಉತ್ಪಾದನಾ ಘಟಕಕ್ಕೆ ಕಂಪನಿಯು ಮೊದಲ ಹಂತದಲ್ಲಿ 390 ಕೋಟಿ ರೂ. ಹೂಡಿಕೆ ಮಾಡಲಿದ್ದು, 300 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ.

ಇಲ್ಲಿ ಉತ್ಪಾದಿಸಲಾಗುವ ಬ್ಯಾಟರಿಗಳ ಪೈಕಿ ಶೇಕಡ 20ರಷ್ಟನ್ನು ಅಮೆರಿಕ ಮತ್ತು ಯೂರೋಪಿನ ದೇಶಗಳಿಗೆ ರಫ್ತು ಮಾಡಲಾಗುವುದು ಎಂದಿದ್ದಾರೆ.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಐಬಿಸಿ ಘಟಕಕ್ಕೆ 10 ಎಕರೆ ಜಾಗ ಕೊಟ್ಟಿದ್ದು, ಫಾಕ್ಸ್-ಕಾನ್ ಸಂಸ್ಥೆಯ ಸಮೀಪದಲ್ಲೇ ಇದು ಅಸ್ತಿತ್ವಕ್ಕೆ ಬರಲಿದೆ. ಮುಂದಿನ ಒಂಬತ್ತು ತಿಂಗಳಲ್ಲಿ ಈ ಘಟಕವು ಕಾರ್ಯಾಚರಣೆ ಆರಂಭಿಸಲಿದ್ದು, ಇಲ್ಲೇ ಬ್ಯಾಟರಿಗಳನ್ನು ತಯಾರಿಸಿ, ಇಲ್ಲಿಂದಲೇ ದೇಶ-ವಿದೇಶಗಳಿಗೂ ಕಳಿಸಿ ಕೊಡಲಿದೆ ಎಂದು ಅವರು ಮಾಹಿತಿ ನೀಡಿದರು.

ಸದ್ಯಕ್ಕೆ ಐಬಿಸಿ ಕಂಪನಿಯು ದಕ್ಷಿಣ ಕೊರಿಯಾದಲ್ಲಿ ಸೆಲ್ಸ್ ಉತ್ಪಾದಿಸಿ, ಅವುಗಳನ್ನು ಇಲ್ಲಿಗೆ ತಂದು ಪೂರ್ಣ ಪ್ರಮಾಣದ ಬ್ಯಾಟರಿಗಳನ್ನು ತಯಾರಿಸುತ್ತಿದೆ.

ಈ ಘಟಕ ಕಾರ್ಯಾರಂಭ ಆದ ನಂತರ ಇಲ್ಲೇ ಸೆಲ್ ಗಳ ಉತ್ಪಾದನೆ ಕೂಡ ಆಗಲಿದೆ. ಇದು ದೇಶದಲ್ಲೇ ಮೊದಲ ಸೆಲ್ ಉತ್ಪಾದನಾ ಘಟಕವಾಗಲಿದೆ. ಮುಂಬರುವ ದಿನಗಳಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳ ಜತೆಗೆ ಉಳಿದ ವಾಹನಗಳಿಗೂ ಇದು ಬ್ಯಾಟರಿ ಪೂರೈಸಲಿದೆ ಎಂದು ಅವರು ವಿವರಿಸಿದರು.

ಭಾರತದಲ್ಲಿ ಶಿಕ್ಷಣ ಹಾಗೂ ಅಮೆರಿಕದ ಸಿಲಿಕಾನ್ ವ್ಯಾಲಿಯಲ್ಲಿ ತರಬೇತಿ ಪಡೆದ ಯುವ ಉದ್ಯಮಿಗಳು ಐಬಿಸಿ ಕಂಪನಿ ಸ್ಥಾಪಿಸಿ, ಬ್ಯಾಟರಿಗಳ ವಿನ್ಯಾಸ, ಉತ್ಪಾದನೆಗೆ ಆದ್ಯತೆ ಕೊಟ್ಟಿದ್ದಾರೆ. ಹಾಗೆಯೇ ಭಾರತದ ಅಗತ್ಯಕ್ಕೆ ಹೊಂದುವ ಹಾಗೆ ವಿನ್ಯಾಸ ಮಾಡಿರುವುದು ಮೆಚ್ಚುವಂತಹದ್ದು ಎಂದು ಸಚಿವರು ಶ್ಲಾಘಿಸಿದರು

ಇದು ಭಾರತದಲ್ಲಿ ಇಂತಹ ಪ್ರಪ್ರಥಮ ಯೋಜನೆಯಾಗಿದೆ. ಇಲ್ಲಿ ರೆಟ್ರೋಫಿಟ್ ಬ್ಯಾಟರಿಗಳನ್ನು ಕೂಡ ತಯಾರಿಸಲಾಗುವುದು. ಇದರಿಂದ ರಾಜ್ಯದ ಆರ್ಥಿಕತೆಗೆ ಹೊಸ ಬಲ ಬರಲಿದ್ದು, ಚೀನಾದ ಮೇಲಿನ ಅವಲಂಬನೆ ಕಡಿಮೆಯಾಗಲಿದೆ ಎಂದು ಅವರು ವಿವರಿಸಿದ್ದಾರೆ.

ನಾವು ಸುಸ್ಥಿರ, ತಂತ್ರಜ್ಞಾನಾಧಾರಿತ ಮತ್ತು ಎಲ್ಲರನ್ನೂ ಒಳಗೊಳ್ಳುವಂತಹ ಆರ್ಥಿಕತೆಯನ್ನು ಕಟ್ಟುವ ಗುರಿ ಇಟ್ಟುಕೊಂಡಿದ್ದೇವೆ. ಇನ್ನೊಂದೆಡೆಯಲ್ಲಿ, ಹಸಿರು ಇಂಧನ ಬಳಕೆಗೆ ಉತ್ತೇಜನ ಕೊಡುತ್ತಿದ್ದೇವೆ. ಐಬಿಸಿ ಗಿಗಾ ಫ್ಯಾಕ್ಟರಿಯು ಈ ಪರಿವರ್ತನೆಯ ಮೈಲುಗಲ್ಲಾಗಿದೆ. ಇದರಿಂದಾಗಿ ರಾಜ್ಯವು ಇಂಧನ ಕ್ಷೇತ್ರದ ಸಂಶೋಧನೆಯಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಐಬಿಸಿ ಸಿಇಒ ಪ್ರಿಯದರ್ಶಿ ಪಾಂಡಾ, ಸಿಎಸ್ಒ ಸುಂದರ್ ರಾಮಮೂರ್ತಿ, ಕುನಾಲ್ ಜೈನ್, ಜಾಸ್ ಟೆಕ್ ಅಧ್ಯಕ್ಷ ಜೇಸನ್ ಚುಂಗ್, ಉಪಾಧ್ಯಕ್ಷ ಡ್ಯಾನಿ ಚುಂಗ್, ಮಹಾನಗರ್ ಗ್ಯಾಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಆಶು ಸಿಂಘಾಲ್, ಡೆಪ್ಯುಟಿ ಎಂಡಿ ಸಂಜಯ್ ಶೇಂದೆ ಉಪಸ್ಥಿತರಿದ್ದರು.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!