ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ಗಳ ವಿತರಣೆಗಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನ| Applications invited

Selection for hostel admission

ಬೆಂಂಗಳೂರು ಗ್ರಾಮಾಂತರ ಜಿಲ್ಲೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ಗಳನ್ನು ವಿತರಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ವಿಕಲಚೇತನರು ಯೋಜನೆಯ ಸೌಲಭ್ಯ ಪಡೆಯಲು ಆನ್ ಲೈನ್ ಮೂಲಕ ಸೇವಾ ಸಿಂಧು (https://seva sindhu.Karnataka. gov.in/) ಪೊರ್ಟಲ್ ನಲ್ಲಿ ಜನವರಿ 21 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿಕಲಚೇತನರು ಭಾರತದ ಪ್ರಜೆಯಾಗಿದ್ದು, ಕರ್ನಾಟಕದಲ್ಲಿ ಕನಿಷ್ಟ 10ವರ್ಷಗಳು ವಾಸವಾಗಿರಬೇಕು. ಈ ಯೋಜನೆ ಸೌಲಭ್ಯ ಪಡೆಯಲು ಕುಟುಂಬ ವಾರ್ಷಿಕ ಆದಾಯ ರೂ 2.00 ಲಕ್ಷಗಳಿಗಿಂತ ಕಡಿಮೆ ಇರಬೇಕು.

ವಿಕಲಚೇತನರ ಅಧಿನಿಯಮದಲ್ಲಿ ಸೂಚಿಸಿರುವ ಹಾಗೂ ವೈದ್ಯಕೀಯ ಪ್ರಾಧಿಕಾರದಿಂದ ನೀಡಿರುವ ಗುರುತಿನ ಚೀಟಿಯೊಂದಿಗೆ ದೃಢೀಕೃತ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು. ಇತರೆ ಇಲಾಖೆಗಳು ಅಥವಾ ಸಂಘ ಸಂಸ್ಥೆಗಳಿಂದ ಬ್ಯಾಟರಿ ಚಾಲಿತ ವೀಲ್ ಚೇರ್ ಪಡೆದಿದ್ದಲ್ಲಿ ಅಂತಹವರು ಅರ್ಹರಾಗಿರುವುದಿಲ್ಲ.

ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಶೇ75% ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲಚೇತನರಾಗಿದ್ದು ಯಂತ್ರಚಾಲಿತ ದ್ವಿಚಕ್ರ ಮೋಟಾರು ವಾಹನವನ್ನು ಚಾಲನೆ ಮಾಡಲು ಸಾಮಾರ್ಥ್ಯ ಹೊಂದಿರದ ಹಾಗೂ ಕನಿಷ್ಟ ಒಂದು ಕೈ ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿಚಾಲಿತ ವ್ಹೀಲ್ ಚೇರ್ ಚಲಾಯಿಸಲು ಇತರೇ ಎಲ್ಲಾ ರೀತಿಯಲ್ಲಿ ಸದೃಢವಾಗಿರುವ ವಿಕಲಚೇತನರಾಗಿರಬೇಕು.

ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಸರ್ಕಾರದಿಂದ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆದಿರಬಾರದು.

ಬ್ಯಾಟರಿ ಚಾಲಿತ ವ್ಹೀಲ್ ಚೇರ್‌ನ್ನು ಅವರ ಜೀವತಾವದಿಯಲ್ಲಿ ಯಾವುದೇ ಕಾರಣಕ್ಕೂ ಪರಭಾರೆ ಮಾಡಬಾರದು ಮಾಡಿದ್ದು ಕಂಡು ಬಂದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರ ದೂರವಾಣಿ ಸಂಖ್ಯೆ-080-29787441 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]