Bad news every day, crime booming: HD Kumaraswamy worries

ಪ್ರತಿದಿನವೂ ಕೆಟ್ಟ ಸುದ್ದಿಗಳು, ಅಪರಾಧಗಳು ವಿಜೃಂಭಿಸುತ್ತಿವೆ: ಹೆಚ್.ಡಿ.ಕುಮಾರಸ್ವಾಮಿ ಕಳವಳ

ಬೆಂಗಳೂರು: ಸಮಾಜದಲ್ಲಿ ಮಾನವೀಯ ಮೌಲ್ಯಗಳು ನಶಿಸುತ್ತಿದ್ದು ಸಂತರು ಮತ್ತು ಶರಣರ ಮಾರ್ಗದರ್ಶನದಲ್ಲಿ ಅವೆಲ್ಲವೂ ಪುನರುದ್ಧಾರ ಆಗಬೇಕಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಪ್ರತಿಪಾದಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಶ್ರೀ ಗುರು ಸಿದ್ಧರಾಮೇಶ್ವರರ 852ನೇ ಜಯಂತಿ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರತಿದಿನವೂ ಕೆಟ್ಟ ಸುದ್ದಿಗಳು, ಅಪರಾಧಗಳು ವಿಜೃಂಭಿಸುತ್ತಿವೆ. ಅವೆಲ್ಲವನ್ನೂ ಮಾಧ್ಯಮಗಳಲ್ಲಿ ಕಂಡರೆ ಕಳವಳವಾಗುತ್ತಿದೆ. ಸಮಾಜದ ಸ್ವಾಸ್ಥ್ಯ ಕಾಪಾಡಲು ಸಂತರು, ಶರಣರೇ ದಾರಿ ತೋರಬೇಕು ಎಂದರು.

ವಿಶ್ವದ ಮುಂದುವರೆದ ರಾಷ್ಟ್ರಗಳಿಗೆ ಸರಿಸಮನಾಗಿ ನಮ್ಮ ದೇಶ ಮುಂದುವರಿಯುತ್ತಿದೆ. ದೇಶದಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಪಡೆದಿದ್ದೇವೆ. ಹಳ್ಳಿಗಳಿಗೆ ರಸ್ತೆ, ವಿದ್ಯುತ್ ಎಲ್ಲವೂ ಬಂದಿದೆ. ಇಂಥ ಯಾವ ಅನುಕೂಲಗಳು ಇಲ್ಲದೇ ಇದ್ದಾಗ ಅನ್ಯೋನ್ಯವಾಗಿ, ನೆಮ್ಮದಿಯಾಗಿ ಇದ್ದೆವು. ಎಲ್ಲವೂ ಬಂದ ಮೇಲೆ ಇದ್ದ ಎಲ್ಲವನ್ನೂ ಕಳೆದುಕೊಳ್ಳುತ್ತಿದ್ದೇವೆ. ಇದು ಬಹಳ ದುಃಖಕರ ಎಂದು ಸಚಿವರು ಹೇಳಿದರು.

ಉತ್ತರ ಕರ್ನಾಟಕದಲ್ಲಿ ನಾಲ್ಕು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗನೇ ತಂದೆಯನ್ನು ಕೊಳ್ಳುವಂತ ಪರಿಸ್ಥಿತಿ. ಆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರೆ ಅವರ ಪರಿಸ್ಥಿತಿ ಎಲ್ಲಿಗೆ ಬಂದಿರಬಹುದು? ಸಮಾಜದ ಒಳಿತಿಗಾಗಿ ಅಕ್ಕಮಹಾದೇವಿ, ಬಸವಣ್ಣನವರ ಹೇಳಿದ ಜೀವನದ ಆದರ್ಶಗಳನ್ನು ನಾವೆಲ್ಲಾ ಮುಂದುವರೆಸಿಕೊಂಡು ಹೋಗಬೇಕಿದೆ ಎಂದು ಸಚಿವರು ಪ್ರತಿಪಾದಿಸಿದರು.

12ನೇ ಶತಮಾನದಲ್ಲಿ ಶರಣರು ಕಾಯಕದ ಸಂದೇಶ ಕೊಟ್ಟಿದ್ದಾರೆ. ಸಮಾಜದ ಒಗ್ಗೂಡುವಿಕೆಯನ್ನು ಸರಿಪಡಿಸುವ ಬಗ್ಗೆ ಬಸವಣ್ಣನವರ ಆದರ್ಶಗಳ ಬಗ್ಗೆ ಶರಣರು ಹೇಳಿರುವ ಸಂದೇಶ ಇಂದಿಗೂ ಎಂದೆಂದಿಗೂ ಪ್ರಸ್ತುತ ಎಂದು ಸಚಿವರು ಒತ್ತಿ ಹೇಳಿದರು.

ನಾವ್ಯಾರು ನಡೆ ನುಡಿಗಳಲ್ಲಿ ಪರಿಶುದ್ಧವಾಗಿದ್ದೇವೆ ಎನ್ನುವ ಬಗ್ಗೆ ಆಲೋಚನೆ ಮಾಡಬೇಕು. ಶರಣರ ನುಡಿಯಲ್ಲಿ ನಾವು ಸ್ವಲ್ಪವಾದರೂ ಅಳವಡಿಸಿಕೊಂಡರೆ ಶರಣರಿಗೆ ಗೌರವ ಕೊಟ್ಟಂತಾಗುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕೆರಗೋಡು-ರಂಗಾಪುರ ಸುಕ್ಷೇತ್ರಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಗುರುಪರದೇಶಿಕೇಂದ್ರ ಸ್ವಾಮಿಗಳು, ಸಾಣೇಹಳ್ಳಿಯ ಶ್ರೀ ತರಳಬಾಳು ಶಾಖಾಮಠದ ಪರಮಪೂಜ್ಯ ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ಕುಪ್ಪೂರು – ತಮ್ಮಡಿಹಳ್ಳಿಯ ವಿರಕ್ತಮಠದ ಅಧ್ಯಕ್ಷರಾದ ಪರಮಪೂಜ್ಯ ಡಾ. ಶ್ರೀ ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಚಿವ ಈಶ್ವರ ಖಂಡ್ರೆ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಕೆ.ಗೋಪಾಲಯ್ಯ, ಶಾಸಕ ಜ್ಯೋತಿ ಗಣೇಶ್, ಮಾಜಿ ಶಾಸಕ ಲಿಂಗೇಶ್ ಸೇರಿದಂತೆ ಅನೇಕ ಗಣ್ಯರು ಹಾಗೂ ನೊಳಂಬ ಲಿಂಗಾಯಿತ ಸಂಘದ ಎಲ್ಲಾ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!