Give justice to the candidates in the case of KAS Prelims Reexamination

KAS ಪೂರ್ವಭಾವಿ ಮರುಪರೀಕ್ಷೆ ವಿಚಾರದಲ್ಲಿ ಅಭ್ಯರ್ಥಿಗಳಿಗೆ ನ್ಯಾಯ ನೀಡಿ: ಆರ್‌.ಅಶೋಕ ಆಗ್ರಹ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದೋಷಪೂರಿತ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.

ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

2023-24ನೇ ಸಾಲಿನ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆ ಮತ್ತೊಂದು ಬಾರಿ ಡಿಸೆಂಬರ್ 29 ರಂದು ನಡೆದಿದೆ. ಇದರಲ್ಲಿ ಮತ್ತೊಮ್ಮೆ ಲೋಪದೋಷಗಳು ಕಂಡು ಬಂದಿದ್ದರಿಂದ ವಿಚಲಿತರಾಗಿರುವ ಅಭ್ಯರ್ಥಿಗಳು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.

ಮರುಪರೀಕ್ಷೆಯಲ್ಲಿ ಕಂಡು ಬಂದ ಲೋಪದೋಷಗಳ ಬಗ್ಗೆ ಅಭ್ಯರ್ಥಿಗಳು ಪದೇ ಪದೆ ಅಳಲು ತೋಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೂ ಸಹ ಈ ಕುರಿತು ವರದಿ ಮಾಡಿವೆ. ಆದರೆ ಮರುಪರೀಕ್ಷೆ ನಡೆದು ಹದಿನೈದು ದಿನ ಕಳೆದರೂ ಈವರೆಗೆ ಸರ್ಕಾರವಾಗಲೀ, ಆಯೋಗವಾಗಲೀ, ಅಭ್ಯರ್ಥಿಗಳ ಆಕ್ಷೇಪಣೆಗಳಿಗೆ ಉತ್ತರ ನೀಡಿಲ್ಲ. ಲಕ್ಷಾಂತರ ಯುವ ಅಭ್ಯರ್ಥಿಗಳ ಭವಿಷ್ಯ ಡೋಲಾಯಮಾನವಾಗಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಅವರು ದೂರಿದ್ದಾರೆ.

ಕೆಪಿಎಸ್ಸಿ ಪರೀಕ್ಷೆಯಲ್ಲಾಗಿರುವ ಎಡವಟ್ಟುಗಳು, ಅದರಲ್ಲೂ ಮುಖ್ಯವಾಗಿ ಭಾಷಾಂತರದಲ್ಲಿ ಆಗಿರುವ ಲೋಪದೋಷಗಳ ದುಷ್ಪರಿಣಾಮವನ್ನು ಗ್ರಾಮೀಣ ಭಾಗದ ಯುವಕ ಯುವತಿಯರು ಎದುರಿಸಬೇಕಾಗಿದೆ.

ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಕನ್ನಡ ಮಾಧ್ಯಮದಲ್ಲಿ ಶಾಲಾ, ಕಾಲೇಜು ವಿದ್ಯಾಭ್ಯಾಸ ಮಾಡಿರುವ ಸಾವಿರಾರು ಗ್ರಾಮೀಣ ಅಭ್ಯರ್ಥಿಗಳ ಕನಸು ನುಚ್ಚು ನೂರಾಗಿದೆ.

ಸರ್ಕಾರಿ ಅಧಿಕಾರಿಗಳಾಗಿ ಗ್ರಾಮೀಣ ಭಾಗದ ಜನರ ಸೇವೆ ಮಾಡಬೇಕು ಎಂಬ ಕನಸು ಕಟ್ಟಿಕೊಂಡು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ವರ್ಷಗಟ್ಟಲೆ ಹಗಲಿರುಳು ಶ್ರಮಪಟ್ಟು ಪರೀಕ್ಷೆಗೆ ತಯಾರಿ ನಡೆಸಿದ ಅಭ್ಯರ್ಥಿಗಳ ಭವಿಷ್ಯ, ಕಾಂಗ್ರೆಸ್ ಸರ್ಕಾರದ ಎಡವಟ್ಟಿನಿಂದ ಕತ್ತಲೆಯಾಗಿದೆ.
ಇಂತಹ ಪರಿಸ್ಥಿತಿಯಲ್ಲಿ ಅಭ್ಯರ್ಥಿಗಳು ಬೇರೆ ದಾರಿ ಇಲ್ಲದೆ ಹೋರಾಟದ ಹಾದಿ ಹಿಡಿದಿದ್ದಾರೆ.

ಸರ್ಕಾರ ಮತ್ತೊಮ್ಮೆ ದೋಷರಹಿತವಾಗಿ ಮರುಪರೀಕ್ಷೆ ನಡೆಸಬೇಕು ಅಥವಾ ಮುಖ್ಯಪರೀಕ್ಷೆಗೆ ಹಾಲಿ ಇರುವ 1:15 ಅನುಪಾತದ ಬದಲು 1:50 ಅನುಪಾತದಲ್ಲಿ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಸರ್ಕಾರ ಅಭ್ಯರ್ಥಿಗಳನ್ನು ಕರೆಸಿ ಮಾತನಾಡಬೇಕಿತ್ತು. ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕಿತ್ತು.

ಅಭ್ಯರ್ಥಿಗಳ ಹಿತಾಸಕ್ತಿ ಕಾಪಾಡುತ್ತೇವೆ, ಪ್ರಾಮಾಣಿಕ ಅಭ್ಯರ್ಥಿಗಳನ್ನು ಕೈ ಬಿಡುವುದಿಲ್ಲ ಎಂದು ಆಶ್ವಾಸನೆ ಕೊಟ್ಟು ಮನವೊಲಿಸಬೇಕಾಗಿತ್ತು. ಆದರೆ ಸರ್ಕಾರ ಇವ್ಯಾವುದನ್ನೂ ಮಾಡಿಲ್ಲ. ಎರಡೆರಡು ಬಾರಿ ಎಡವಟ್ಟು ಮಾಡಿದ್ದರೂ ತಪ್ಪೇ ನಡೆದಿಲ್ಲ ಎನ್ನುವ ಧೋರಣೆಯನ್ನು ಕಾಂಗ್ರೆಸ್ ಸರ್ಕಾರ ತೋರಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಣೆಗಾರಿಕೆಯ ಪ್ರಶ್ನೆ

ಒಂದು ಕಡೆ ಅಭ್ಯರ್ಥಿಗಳ ಭವಿಷ್ಯದ ಪ್ರಶ್ನೆಯಾದರೆ ಮತ್ತೊಂದು ಹೊಣೆಗಾರಿಕೆಯ ಪ್ರಶ್ನೆ. ಎರಡೆರಡು ಬಾರಿ ಪರೀಕ್ಷೆ ನಡೆಸಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ 25 ಕೋಟಿ ರೂಪಾಯಿಗೂ ಹೆಚ್ಚು ಹಣ ವೆಚ್ಚವಾಗಿದೆ. ಆದರೂ ಪರೀಕ್ಷೆ ದೋಷಮುಕ್ತವಾಗಿಲ್ಲವೆಂದರೆ ಇದಕ್ಕೆ ಯಾರು ಹೊಣೆ? ಇದಕ್ಕೆ ಹೊಣೆಯಾದವರ ವಿರುದ್ಧ ಸರ್ಕಾರ ಶಿಸ್ತು ಕ್ರಮ ಜರುಗಿಸಬೇಕಿತ್ತಲ್ಲವೇ? ಇದಕ್ಕೆ ಪ್ರಮುಖ ಕಾರಣರಾದ ಪರೀಕ್ಷಾ ನಿಯಂತ್ರಕರನ್ನು ಮುಂದುವರಿಸಲಾಗಿದೆ.

ಮೊದಲ ಬಾರಿ ಎಡವಟ್ಟಾದ ನಂತರ ಅಕ್ಟೋಬರ್‌ 23 ರಂದು ಅವರಿಗಿಂತ ಹಿರಿಯರಾದ ಅಧಿಕಾರಿಯನ್ನು ಜಂಟಿ ಪರೀಕ್ಷಾ ನಿಯಂತ್ರಕ ಹುದ್ದೆಗೆ ನೇಮಿಸಲಾಗಿತ್ತು. ಅವರು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲಿಲ್ಲ. ನಿನ್ನೆ ಮತ್ತೊಬ್ಬ ಅಧಿಕಾರಿಯನ್ನು ನೇಮಿಸಲಾಗಿದೆ. ಇದು ಸರ್ಕಾರಕ್ಕೆ ಕೆಪಿಎಸ್ಸಿ ನೇಮಕಾತಿ ಬಗ್ಗೆ ಇರುವ ಕಾಳಜಿ ಎಂದು ಆರ್‌.ಅಶೋಕ ಕಿಡಿಕಾರಿದ್ದಾರೆ.

ಒಟ್ಟು 384 ಹುದ್ದೆಗಳ ಪೈಕಿ 40 ಎಸಿ ಹುದ್ದೆ ಇದೆ. ಇದು ಇದುವರೆಗಿನ ಅತಿ ಹೆಚ್ಚು ಎಂಬ ದಾಖಲೆಯಿದೆ. ಆಡಳಿತದ ಆಯಕಟ್ಟಿನ ಸ್ಥಳಗಳಲ್ಲಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದ ಪ್ರಕ್ರಿಯೆಯಲ್ಲಿ ಇರಬೇಕಾದ ಗಂಭೀರತೆಯಾಗಲೀ, ಜವಾಬ್ದಾರಿಯಾಗಲೀ, ಈ ಸರ್ಕಾರಕ್ಕೆ ಇದ್ದಂತೆ ಕಾಣುತ್ತಿಲ್ಲ.

ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯ ಒಟ್ಟಾರೆ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿರಬೇಕು, ನ್ಯಾಯ ಸಮ್ಮತವಾಗಿರಬೇಕು ಮತ್ತು ಅರ್ಹರಿಗೆ ಮಾತ್ರ ಅವಕಾಶ ಸಿಗುವಂತಿರಬೇಕು ಎನ್ನುವುದು ನಮ್ಮ ಆಗ್ರಹ.

ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಮಧ್ಯಪ್ರವೇಶ ಮಾಡಿ ಅಭ್ಯರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜಕೀಯ

ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ಚುನಾವಣೆ: ಮುರಿದುಬಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ..!

ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ಚುನಾವಣೆ: ಮುರಿದುಬಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ..!

ಡಿ. 21 ರಂದು ನಡೆಯಲಿರುವ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ (Bashettihalli Town Panchayat Election) ನಾಮಪತ್ರಗಳನ್ನು ಹಿಂಪಡೆಯಲು ಶುಕ್ರವಾರ ಕಡೆಯ ದಿನವಾಗಿದ್ದು, 10 ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂತೆಗೆದುಕೊಂಡಿದ್ದು, 64 ಅಭ್ಯರ್ಥಿಗಳು ಅಂತಿಮ

[ccc_my_favorite_select_button post_id="117290"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ ಆರೋಪ

ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ

ಕಾಲೇಜ್ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಶವ ಪತ್ತೆಯಾಗಿರುವ (Student's body found hanging in college hostel) ಘಟನೆ *** ಜಿಲ್ಲೆ *** ಪಟ್ಟಣದಲ್ಲಿ ನಡೆದಿದೆ.

[ccc_my_favorite_select_button post_id="117263"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]