Those who distorted DK Shivakumar's statement face legal trouble

KPCC ಅಧ್ಯಕ್ಷ ಸ್ಥಾನ ಮೀಡಿಯಾಗಳು ಕೊಡ್ತಾರ..?: ಡಿಸಿಎಂ ಡಿಕೆ ಶಿವಕುಮಾರ್ ಕೌಂಟರ್ Video ನೋಡಿ

ಬೆಂಗಳೂರು: “ಕೆಪಿಸಿಸಿ (KPCC) ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivarajkumar) ಅವರು ಖಾರವಾಗಿ ಪ್ರತಿಕ್ರಿಯಿಸಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.

ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಚರ್ಚೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾವು ಮಾಡುವ ಕೆಲಸ, ಶ್ರಮವನ್ನು ಪಕ್ಷದ ನಾಯಕರು ಗುರುತಿಸಿ ಅದಕ್ಕೆ ಸೂಕ್ತವಾಗಿ ಹುದ್ದೆ ನೀಡುತ್ತಾರೆ.

ಮಾಧ್ಯಮಗಳ ಮುಖಾಂತರ ಯಾರಾದರೂ ಹುದ್ದೆ ಕೇಳುತ್ತಾರೆಯೇ? ಇದನ್ನೆಲ್ಲಾ ಹೊಸದಾಗಿ ಕೇಳುತ್ತಿರುವೆ” ಎಂದರು.

“ಪಕ್ಷದ ವಿಚಾರದ ವಿಚಾರವಾಗಿ ಯಾವುದೇ ಬೆಳವಣಿಗೆ ಇದ್ದರೂ ನಾನೇ ಮಾಧ್ಯಮಗೋಷ್ಠಿ ಕರೆದು ಮಾಹಿತಿ ನೀಡುತ್ತೇನೆ. ಈಗ ನಮ್ಮ ಪಕ್ಷ ಸಂಘಟನೆ ಮಾಡಿ, ಪಕ್ಷ ಉಳಿಸಿ, ಬೆಳೆಸುವ ಕೆಲಸ ಮಾಡಬೇಕು.

ಪಕ್ಷದಲ್ಲಿ ಎಲ್ಲರೂ ಶಿಸ್ತು ಕಾಪಾಡಬೇಕು ಎಂದು ನಮ್ಮ ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಬುದ್ಧಿವಾದ ಹೇಳಿದ್ದಾರೆ. ಯಾವುದೇ ವಿಚಾರವಾಗಿ ಬಹಿರಂಗವಾಗಿ ಚರ್ಚೆ ಮಾಡದಂತೆ ಸೂಚಿಸಿದ್ದಾರೆ” ಎಂದು ತಿಳಿಸಿದರು.

ಮಾಧ್ಯಮಗಳ ಮುಂದೆ ಹೇಳಿಕೆಯಿಂದ ಪ್ರಯೋಜನವಿಲ್ಲ

“ಪಕ್ಷದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತಹದಲ್ಲ. ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಥವಾ ನನ್ನ ಬಳಿ ಬಂದು ಮಾತನಾಡಲಿ.

ಇದು ಕೇವಲ ಕಾಂಗ್ರೆಸ್ ಮಾತ್ರವಲ್ಲ. ಬಿಜೆಪಿ, ಜೆಡಿಎಸ್, ರೈತ ಸಂಘ ಸೇರಿದಂತೆ ಯಾವುದೇ ಪಕ್ಷವಾದರೂ ಪಕ್ಷದ ವಿಚಾರವನ್ನು ಆಂತರಿಕವಾಗಿ ಚರ್ಚೆ ಮಾಡಬೇಕು ಎಂದು ಹೇಳುತ್ತೇನೆ.

ನಾನು ಯಾವುದಾದರೂ ಹುದ್ದೆ ಬಯಸಿದರೆ ನೀವು (ಮಾಧ್ಯಮಗಳು) ಆ ಸ್ಥಾನ ನನಗೆ ಕೊಡಿಸುತ್ತೀರಾ? ಅಥವಾ ಈ ಹುದ್ದೆಗಳು ಅಂಗಡಿಯಲ್ಲಿ ಸಿಗುತ್ತದೆಯೇ? ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ. ಬದಲಿಗೆ ಇದರಿಂದ ವ್ಯತಿರಿಕ್ತ ಪರಿಣಾಮ ಬೀರುತ್ತದೆ” ಎಂದು ಕೇಳಿದರು.

ಯಾರೇ ಇರಲಿ, ಹೋಗಲಿ ಪಕ್ಷ ಇರುತ್ತದೆ

“ಈ ಪಕ್ಷವನ್ನು ಕೇವಲ ಡಿಕೆ ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿಲ್ಲ. ಕಾರ್ಯಕರ್ತರು, ಮತದಾರರು ನಮ್ಮ ಮೇಲೆ ಅಪಾರವಾದ ವಿಶ್ವಾಸ ಇಟ್ಟು ನಮಗೆ ಅಧಿಕಾರ ನೀಡಿದ್ದಾರೆ.

ಇದನ್ನು ನಾವು ಉಳಿಸಿಕೊಳ್ಳಬೇಕು, ಉಳಿಸಿಕೊಳ್ಳುತ್ತೇವೆ. ಇದು ಕಾರ್ಯಕರ್ತರ ಹಾಗೂ ಮತದಾರರ ಪಕ್ಷ. ಇದಕ್ಕೆ ತನ್ನದೇ ಆದ ದೊಡ್ಡ ಇತಿಹಾಸವಿದೆ. ಯಾರೇ ಇರಲಿ, ಹೋಗಲಿ ತನ್ನನ್ನು ತಾನು ಉಳಿಸಿಕೊಳ್ಳುವ ಶಕ್ತಿ ಈ ಪಕ್ಷಕ್ಕೆ ಇದೆ. ಮಹಾತ್ಮಾ ಗಾಂಧೀಜಿ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಅಧಿಕಾರವನ್ನು ತ್ಯಾಗ ಮಾಡಿದ್ದಾರೆ.

ಅಂಬೇಡ್ಕರ್ ಅವರು ಸಂವಿಧಾನ ಕೊಟ್ಟರು ಅವರು ಯಾವ ಅಧಿಕಾರ ಪಡೆದಿದ್ದಾರೆ? ನಾವು ಅವರನ್ನೆಲ್ಲ ಸ್ಮರಿಸಬೇಕು. ಹೀಗಾಗಿ ಮಾಧ್ಯಮಗಳ ಮುಂದೆ ಮಾತನಾಡುವುದಕ್ಕಿಂತ ಪಕ್ಷ ಬಹಳ ಮುಖ್ಯ ಎಂದು ನಾನು ಬಹಳ ನಮ್ರತೆಯಿಂದ ಮನವಿ ಮಾಡುತ್ತೇನೆ.

ಯಾರಿಗಾದರೂ ಏನೇ ಸಮಸ್ಯೆ ಇದ್ದರೂ ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಿ. ಸಧ್ಯಕ್ಕೆ ನಾವು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತೆಯಲ್ಲಿದ್ದು, ಇದರ ಪರಿಶೀಲನೆಗೆ ಸುರ್ಜೆವಾಲ ಅವರು ಶುಕ್ರವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ನಿಮ್ಮ ಪ್ರಶ್ನೆಗಳು ಏನೇ ಇದ್ದರೂ ಅವರನ್ನು ಕೇಳಿ” ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಶ್ನೆ ಮಾಡುವುದು ಸರಿಯಲ್ಲ

ಪಕ್ಷದ ಸಂಘಟನೆ ಕುಂಠಿತವಾಗಿದೆ, ಪಕ್ಷಕ್ಕೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿ ಎಂದು ಕೇಳಿದಾಗ, “ಈ ಬಗ್ಗೆ ಸ್ಪಷ್ಟನೆ ನೀಡಬೇಕಿರುವುದು ನಾನಲ್ಲ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು.

ಈ ವಿಚಾರವಾಗಿ ಅವರ ಬಳಿ ಕೇಳಿ. ಅವರ ನಿರ್ಧಾರವನ್ನು ಪ್ರಶ್ನೆ ಮಾಡಲಾಗುತ್ತಿದೆ. ಈ ರೀತಿ ಮಾಡಬಾರದು” ಎಂದು ತಿಳಿಸಿದರು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!