Students are suffering due to problems in KPSC exam

KPSC ಪರೀಕ್ಷೆಯಲ್ಲಿ ಆಗುತ್ತಿರುವ ಸಮಸ್ಯೆಗಳಿಂದ ವಿದ್ಯಾರ್ಥಿಗಳಿಗೆ ಸಂಕಷ್ಟ; ಬಿವೈ ವಿಜಯೇಂದ್ರ ಆಕ್ರೋಶ

ಬೆಂಗಳೂರು; ಇತ್ತೀಚಿನ ದಿನಗಳಲ್ಲಿ ಕೆಪಿಎಸ್ಸಿ‌ (KPSC) ಪರೀಕ್ಷೆಯಲ್ಲಿ ಆಗುತ್ತಿರುವ ತೊಂದರೆಗಳಿಂದ ವಿದ್ಯಾರ್ಥಿಗಳು ಪದೇ ಪದೇ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

ಅವರು ಇಂದು ಪ್ರೀಡಮ್ ಪಾರ್ಕ್ ನಲ್ಲಿ ‌ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡು‌ ಮಾತನಾಡಿದರು.

ವಿದ್ಯಾರ್ಥಿಗಳು ಓದುವುದನ್ನು‌ ಬಿಟ್ಟು ಬೀದಿಗೆ ಇಳಿದು ಹೋರಾಟ‌ ಮಾಡುವ ಹಾಗೆ ರಾಜ್ಯ ಸರ್ಕಾರ ಮಾಡ್ತಿದೆ. ಈ ಹೋರಾಟಕ್ಕೆ ನಾನು ರಾಜ್ಯಾಧ್ಯಕ್ಷನಾಗಿ, ಶಾಸಕನಾಗಿ ಬಂದಿಲ್ಲ ಬದಲಾಗಿ ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ತಮ್ಮ‌ ಹೋರಾಟಕ್ಕೆ ಧ್ವನಿ ಯಾಗಲು ಬಂದಿದ್ದೇನೆ ಅಂತ ಹೇಳಿದರು.

ಕೆಪಿಎಸ್ ರಾಜ್ಯದ ಯುವಕರ ಭವಿಷ್ಯ ರೂಪಿಸಬೇಕಿತ್ತು ಲಕ್ಷಾಂತರ ಯುವಕರು ಹಗಲು ರಾತ್ರಿ ಪರಿಶ್ರಮ ಹಾಕಿ ತಮ್ಮ ಜೀವನ ರೂಪಿಸಿಕೊಳ್ಳುಲು ಶ್ರಮ ಹಾಕುತ್ತಿದ್ದೀರ ನಿಮ್ಮ ತಪಸ್ಸಿಗೆ ಕೊಳ್ಳಿ ಇಡುವ ಕೆಲಸವನ್ನು ರಾಜ್ಯ ಸರ್ಕಾರ ಮತ್ತು ಕೆಪಿಎಸ್ ಸಿ ಮಾಡುತ್ತಿದೆ.

ಸರ್ಕಾರ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಡ ಆಡುತ್ತಿದೆ ಕೆಪಿಎಸ್ ಸಿ ಅವಾಂತರಗಳು ನೆನ್ನೆ ಮೊನ್ನೆಯದಲ್ಲ ನಮ್ಮ ಸರ್ಕಾರದ ಅವಧಿಯಲ್ಲೂ ಕೆಪಿಎಸ್ ಸಿ ಅಧಿಕಾರಿಗಳು ಹುಡುಗಾಟ ಆಡಿದ್ರು ಇದರಿಂದ ಪರೀಕ್ಷೆಗಳು ಪದೇ ಪದೇ ಮುಂದೂಡುತ್ತಿದೆ.

ಪರೀಕ್ಷೆ ಬರೆದ ಮೇಲೆ ರಿಸಲ್ಟ್ ಘೋಷಣೆ ಮಾಡೋಕೆ ಒಂದು ವರ್ಷ ತೆಗೆದುಕೊಳ್ಳುತ್ತಾರೆ. ವಯಸ್ಸಿನ ಮಿತಿ ಮೀರಿ‌ ವಿದ್ಯಾರ್ಥಿಗಳು ಕಳವಳ ಆಗುವಂತೆ ಮಾಡುತ್ತಾರೆ.

ಹೋರಾಟ ಮಾದ್ಯಮಕ್ಕೆ ಸೀಮಿತವಾಗಬಾರದು

ಇವತ್ತಿನ ಹೋರಾಟ ಮಾಧ್ಯಮಗಳಲ್ಲಿ ಬರುತ್ತೆ ನಮಗೆ ಜಯ ಸಿಗುತ್ತೆ ಅನ್ನೋ ನಂಬಿಕೆ ಬದಿಗಿಟ್ಟು ಹೋರಾಟ ‌ಮಾಡಬೇಕು ಆಗ ಮಾತ್ರ ನಮಗೆ ಜಯ ಸಿಗುತ್ತೆ.

ಕೆಪಿಎಸ್ ಸಿ ಅಧಿಕಾರಿಗಳು ಮನುಷ್ಯತ್ವದಿಂದ ಎಲ್ಲಿಯವರೆಗು ತಮ್ಮ ತಪ್ಪನ್ನು ತಿದ್ದಿಕೊಳ್ಳುವುದಿಲ್ಲವೋ ಅಲ್ಲಿವರೆಗು ನಿಮ್ಮ ಹೋರಾಟ ನಿಲ್ಲಿಸಬೇಡಿ ಅಂತ ಕರೆ ನೀಡಿದರು

ಬಿಜೆಪಿ ‌ಪಕ್ಷ ನಿಮ್ಮ ಪರವಾಗಿ

ಅನೇಕ ವಿದ್ಯಾರ್ಥಿಗಳು ವಯಸ್ಸಿನ ಮಿತಿಯಿಂದ ಅರ್ಹತೆ ಕಳೆದುಕೊಳ್ಳುತ್ತಿದ್ದಾರೆ. ನಾನು ಮತ್ರು ನಮ್ಮ ಪಕ್ಷ ನಿಮಗೆ ನ್ಯಾಯ ಸಿಗೋವರೆಗು ನಿಮ್ಮ‌ ಜೊತೆ ಇರುತ್ತೆ ಎದಗೊಂದದೆ ಹೋರಾಟ‌ ಮಾಡಿ‌ ಅಂತ ಹೇಳಿದರು

ರಾಜಕೀಯ

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ. ಸುರೇಶ್

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ. ಸುರೇಶ್

"ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ (ಡಿ.ಕೆ. ಶಿವಕುಮಾರ್) ಸಿಎಂ ಆಗುತ್ತಾರೆ. ಹಣೆಬರಹ ಇಲ್ಲ ಎಂದರೆ ಯಾರೂ ಏನೂ ಮಾಡಲು ಆಗುವುದಿಲ್ಲ" ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ (D.K. Suresh) ಅವರು ತಿಳಿಸಿದರು.

[ccc_my_favorite_select_button post_id="119818"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!