ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು ಅರಾಜಕತೆ ಸೃಷ್ಟಿ: ವಿಜಯೇಂದ್ರ ವಾಗ್ದಾಳಿ| BY Vijayendra

CM, DCM wearing masks Running situation: B.Y. Vijayendra

ಬೆಂಗಳೂರು: ರಾಜ್ಯದ ಗಡಿ ಜಿಲ್ಲೆಗಳನ್ನೇ ಗುರಿಯಾಗಿಸಿಕೊಂಡು ಜಾಲವೊಂದು ವ್ಯವಸ್ಥಿತವಾಗಿ ಬೀದರ್ ಬಳಿಕ ದಕ್ಷಿಣ ಕನ್ನಡದ ಉಲ್ಲಾಳದಲ್ಲೂ ಹಾಡು ಹಗಲೇ ಬಂದೂಕು ತೋರಿಸಿ ಕೋಟ್ಯಂತರ ರೂಪಾಯಿ ಹಣ ಹಾಗೂ ಚಿನ್ನ ಲೂಟಿಮಾಡಿರುವ ಘಟನೆ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು ಅರಾಜಕತೆ ಉಂಟಾಗಿರುವುದನ್ನು ಸಾಕ್ಷೀಕರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಕಿಡಿಕಾರಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಕರ್ನಾಟಕವೆಂದರೆ ಮಾಫಿಯಾಗಳು, ಅತ್ಯಾಚಾರಿಗಳು, ಡಕಾಯಿತರು ಹಾಗೂ ಭಯೋತ್ಪಾದಕರಿಗೆ ಸುರಕ್ಷಿತ ತಾಣ ಎಂಬ ಸಂದೇಶ ರವಾನೆಯಾಗುತ್ತಿರುವುದು ಕಾಂಗ್ರೆಸ್ ಸರ್ಕಾರದ ಆಡಳಿತದ ಕೆಟ್ಟ ವೈಫಲ್ಯದ ಫಲವಾಗಿದೆ.

‘ಸಿರಿನಾಡು ಕರ್ನಾಟಕ ಇರಿಯುವ ರಕ್ಕಸರ ತವರೂರಾಗುತ್ತಿದೆ, ಕ್ರಿಮಿನಲ್ ಕರ್ನಾಟಕ ಎಂಬ ಅಪಕೀರ್ತಿ ಪಡೆದುಕೊಳ್ಳುತ್ತಿದೆ’ ಎಂಬ ಆತಂಕ ಜನರನ್ನು ಕಾಡುತ್ತಿದೆ. ಒಂದರಮೇಲೊಂದು ಕ್ರಿಮಿನಲ್ ಪ್ರಕರಣಗಳು ದಾಖಲಾಗುತ್ತಿವೆ.

ಅತ್ಯಾಚಾರ, ಗುಂಡಾಗಿರಿ, ಕೊಲೆ, ದರೋಡೆ ಮೊದಲಾದ ಚಟುವಟಿಕೆಗಳು ನಿರಂತರ ನಡೆಯುತ್ತಿದ್ದರೂ ರಾಜ್ಯದ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಆಡಳಿತದಲ್ಲಿ ಜನತೆ ಆತಂಕದಿಂದ ಬದುಕುವಂತಾಗಿದೆ. ತಮ್ಮ ಹಣ ಚಿನ್ನ ಹಾಗೂ ಇತರ ಆಸ್ತಿಗಳಿಗೆ ಬ್ಯಾಂಕ್ ಸುರಕ್ಷಿತ ಎಂಬ ಭಾವನೆ ಕುಸಿಯುತ್ತಿದೆ.

ಬ್ಯಾಂಕುಗಳಿಗೇ ರಕ್ಷಣೆ ನೀಡಲಾಗದ ಸರ್ಕಾರ ಜನಸಾಮಾನ್ಯರ ಪ್ರಾಣ ಹಾಗೂ ಆಸ್ತಿಗೆ ರಕ್ಷಣೆ ನೀಡಲು ಸಾಧ್ಯವೇ ? ಎಂದು ನಾಗರೀಕರು ಪ್ರಶ್ನಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಈ ಕೂಡಲೇ ಗೃಹ ಇಲಾಖೆಯ ಮೇಲೆ ನಿಯಂತ್ರಣ ಸಾಧಿಸಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡು ಜನರಲ್ಲಿ ರಕ್ಷಣೆಯ ಅಭಯ ನೀಡುವ ಹೆಜ್ಜೆಗಳನ್ನಿಡಲೇಬೇಕಿದೆ.

ಈ ನಿಟ್ಟಿನಲ್ಲಿ ತಮ್ಮ ನಿಷ್ಕ್ರಿಯತೆ ಹಾಗೂ ಉದಾಸೀನತೆಯನ್ನು ಮುಂದುವರೆಸಿದರೆ ಜನತೆ ತಮ್ಮನ್ನು ರಕ್ಷಿಸಿಕೊಳ್ಳಲು ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಹೋರಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]