Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

The doctor removed the knife from Saif Ali Khan's body..!

ಮುಂಬೈ: ಗುರುವಾರ ಬೆಳಗ್ಗಿನ ಜಾವ ಬಾಲಿವುಡ್ ಸ್ಟಾರ್ ನಟ ಸೈಫ್ ಅಲಿ ಖಾನ್ (Saif Ali Khan) ಅವರ ನಿವಾಸಕ್ಕೆ ನುಗ್ಗಿ ಚಾಕು ಇರಿದು ಪರಾರಿಯಾಗಿದ್ದ ಆರೋಪಿಗಳ ಪೈಕಿ ಓರ್ವನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮುಂಬೈನ ಬಾಂದ್ರಾ ರೈಲು ನಿಲ್ದಾಣದ ಸಿಸಿಟಿವಿಯಲ್ಲಿ ಪತ್ತೆಯಾದ ಚಲನವಲನಗಳು ಆದರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಬಳಿಕ ಮತ್ತಷ್ಟು ಮಾಹಿತಿ ಹೊರಬೀಳುವ ನಿರೀಕ್ಷೆಯಿದೆ.

ಗುರುವಾರ ಸೈಫ್ ಅಲಿ ಖಾನ್ ನಿವಾಸದಲ್ಲಿ ಹಲ್ಲೆ ನಡೆಸಿದ್ದ ಆರೋಪಿ, ಆರು ಬಾರಿ ಸೈಫ್ ಗೆ ಚಾಕುವಿನಿಂದ ಇರಿದಿದ್ದ ಬಳಿಕ ಒಂದು ಕೋಟಿ ರೂ. ಹಣಕ್ಕೂ ಸಹ ಬೇಡಿಕೆಯಿಟ್ಟಿದ್ದ ಎಂದು ಆರೋಪಿಸಲಾಗಿದೆ.

ದೇಹದಲ್ಲಿದ್ದ ಚಾಕು

ಇರಿತಕ್ಕೊಳಗಾದ ಸೈಫ್ ಅಲಿ ಖಾನ್ ದೇಹದಿಂದ ವೈದ್ಯರು ಎರಡೂವರೆ ಇಂಚಿನ ಚಾಕುವನ್ನು ಹೊರತೆಗೆದಿದ್ದಾರೆ. ಈ ಚಾಕುವಿನ ಫೋಟೋ ಹೊರಬಿದ್ದಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಫೋಟೊದಲ್ಲಿ ಕಂಡುಬರುವ ತುಂಡಾದ ಚಾಕುವಿನಲ್ಲಿ ರಕ್ತವಿದೆ ಮತ್ತು ಅದು ತುಂಬಾ ಅಪಾಯಕಾರಿಯಾಗಿದೆ. ಒಂದು ವೇಳೆ ಚಾಕು ಆಳಕ್ಕೆ ತೂರಿಕೊಂಡಿದ್ದರೆ ನಟನ ಸ್ಥಿತಿ ಗಂಭೀರವಾಗುತ್ತಿತ್ತು ಎಂದು ವೈದ್ಯರು ಹೇಳಿದ್ದಾರೆ.

ಸೈಫ್ ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ಅವರನ್ನು ಐಸಿಯುನಿಂದ ವಿಶೇಷ ವಾರ್ಡ್‌ ಕಳುಹಿಸಲಾಗುತ್ತಿದೆ. ಸೈಫ್ ವೇಗವಾಗಿ ಚೇತರಿಸಿಕೊಳ್ಳುತ್ತಿದ್ದಾರೆ.

ಅವರಿಗೆ ನಡೆಯಲು ಯಾವುದೇ ತೊಂದರೆ ಇಲ್ಲ ಮತ್ತು ಅವರು ಅದೃಷ್ಟವಂತರು. ನಟನಿಗೆ ಬೆನ್ನುಮೂಳೆಯಲ್ಲಿ ಗಾಯವಾಗಿದೆ. ಹೀಗಾಗಿ ನಟನಿಗೆ ಒಂದು ವಾರ ಬೆಡ್ ರೆಸ್ಟ್ ಅಗತ್ಯವಾಗಿದ್ದು, ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ.

ಇನ್ನು 2ರಿಂದ 3 ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಸದ್ಯ ಪೊಲೀಸರು ಸೈಫ್ ಅಲಿ ಖಾನ್ ಅವರ ದೇಹದಿಂದ ಹೊರತೆಗೆದ ಚಾಕುವನ್ನು ಸಾಕ್ಷ್ಯವಾಗಿ ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ರಾಜಕೀಯ

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಇನ್ನು ಮುಂದೆ ರಾಜಕೀಯ ವಿಚಾರವಾಗಿ ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="121399"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ

[ccc_my_favorite_select_button post_id="121396"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]