ಅನುದಾನವಿಲ್ಲದೆ ಬಿಜೆಪಿ ಶಾಸಕರು ಹತಾಶರಾಗಿದ್ದಾರೆ: BY Vijayendra

Salary delay for NHM employees: BY Vijayendra slams

ಬೆಂಗಳೂರು: ಮುಡಾ ಹಗರಣ ಮಹತ್ತರ ತಿರುವು ಪಡೆದುಕೊಂಡಿದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಡಿ 300 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.

ಇದರರ್ಥ ಸಿಎಂ ಅವರು ಕುಟುಂಬಕ್ಕೆ14 ಸೈಟು ಪಡೆದುಕೊಂಡಿದ್ದಾರೆ, ಮುಡಾಗೆ ಕೋಟಿ ಕೋಟಿ ನಷ್ಟ ಆಗಿದೆ ಅಕ್ರಮವಾಗಿ ಮುಡಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ, ಇದರಿಂದಲೂ ಭಾರೀ‌ ನಷ್ಟ ಆಗಿದೆ ಅಂತ ಹೇಳಿದರು.

ಸ್ನೇಹಮಯಿ ಕೃಷ್ಣಾಗೆ ಅಭಿನಂದನೆ

ಆರ್ ಟಿ ಐ ಕಾರ್ಯಕರ್ತ ಹಾಗು ಮೂಡ ಅಕ್ರಮದ ವಿರುದ್ದ ಹೋರಾಟ ಮಾಡುತ್ತಿರುವ ಸ್ನೇಹಮಹಿ‌ ಕೃಷ್ಣ ಅವರಿಗೆ ಅಭಿನಂದನೆ‌ ಸಲ್ಲಿಸಿದ‌ ವಿಜಯೇಂದ್ರ ಅವರು, ಸ್ನೇಹಮಯಿ ಕೃಷ್ಣಾ ಅವರ ಮೇಲೆಯೇ ಸರ್ಕಾರ ‌ಆರೋಪ‌ ಮಾಡಿ ಅವರನ್ನು ಬಂಧಿಸಲು ಹೋಗಿತ್ತು.

ಇಡಿ ಮುಟ್ಟುಗೋಲು ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಆರೋಪಿ ಸ್ಥಾನದಲ್ಲಿ ಮತ್ತೆ ನಿಲ್ಲುವಂತಾಗಿದೆ. ತತಕ್ಷಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಅಂತ ಹೇಳಿದರು.

ಅನುದಾನವಿಲ್ಲದೆ ಬಿಜೆಪಿ ಶಾಸಕರು ಹತಾಶರಾಗಿದ್ದಾರೆ

ಬಿಜೆಪಿಯವ್ರು ಅನುದಾನ ವಾಪಸ್ ಕೊಡಲಿ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ನಮಗೇನು ಉಪಕಾರ ಮಾಡ್ತಿದ್ದಾರಾ? ಅಂತ ಪ್ರಶ್ನೆ‌ ಮಾಡಿದ ಅವರು ಸರ್ಕಾರ ಬಂದು ಎರಡು ವರ್ಷ ಆದರೂ ಅನುದಾನ ಇಲ್ಲ.

ನೂತನವಾಗಿ ಗೆದ್ದ, ಎರಡನೇ ಬಾರಿಗೆ ಗೆದ್ದ ನಮ್ಮ(ಬಿಜೆಪಿ) ಶಾಸಕರು ಹತಾಶರಾಗಿದ್ದಾರೆ.. ಎರಡು ವರ್ಷ ಆದರೂ ಅನುದಾನ ಕೊಟ್ಟಿಲ್ಲ, ಇವರ ಯೋಗ್ಯತೆಗೆ ಯಾವ ರೀತಿ ಸರ್ಕಾರ ನಡೆಸ್ತಿದ್ದಾರೆ ನಮಗೇನು ಅನುದಾನ ಕೊಟ್ಟು ಉಪಕಾರ ಮಾಡ್ತಿದ್ದಾರಾ?

ಕ್ಷೇತ್ರಗಳಿಗೆ ಹಣ ಕೊಡೋದು ಕರ್ತವ್ಯ, ಉಪಕಾರ ಅಲ್ಲ, ಅನುದಾನವನ್ನು ತಕ್ಷಣ ಬಿಡುಗಡೆ ಮಾಡಲಿ ಅಂತ ಹೇಳಿದರು.

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

ನಮ್ಮದು ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆಯಿರುವ ಪಕ್ಷ ನಮಗೆ ಪಕ್ಷದ ಹಿರಿಯರು, ವರಿಷ್ಠರು ರಾಜ್ಯಾಧ್ಯಕ್ಷ ಆಗಿ ಮಾಡಿದ್ರು ನಾನು ಆಗಿನಿಂದಲೂ ಸರ್ಕಾರದ ವಿರುದ್ಧ ಸತತ ಹೋರಾಟ ಮಾಡ್ತಿದ್ದೇನೆ.

ನನ್ನ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡ್ತಿರುವ ಬಗ್ಗೆ ಕಾರ್ಯಕರ್ತರಲ್ಲಿ ಸಮಾಧಾನ ಇದೆ ಆದರೆ ನಮ್ಮ ಪಕ್ಷದ ಕೆಲ ಹಿರಿಯ ಮುಖಂಡರು ಅಲ್ಲೊಂದು ಇಲ್ಲೊಂದು ಹೇಳಿಕೆ ಕೊಡ್ತಿದ್ದಾರೆ, ಇದನ್ನು ನಾನು ಇಲ್ಲ ಅಂತ ಹೇಳುವುದಿಲ್ಲ . ಮುಂದಿನ ರಾಜ್ಯಾಧ್ಯಕ್ಷ‌ ಚುನಾವಣೆಗೆ ಶಿವರಾಜ್ ಸಿಂಗ್ ಚೌಹಾಣ್ ಅವರೇ ಉಸ್ತುವಾರಿ ಆಗಿದ್ದಾರೆ.

ಅತೀ ಶೀಘ್ರದಲ್ಲೇ ಯಾರನ್ನು ಅಧ್ಯಕ್ಷ ಮಾಡಬೇಕು ಅಂತ ಚೌಹಾಣ್ ಅವರು ಎಲ್ಲ ಹಿರಿಯರ ಜತೆ ಚರ್ಚಿಸಿ ಉತ್ತಮ ತೀರ್ಮಾನ ಕೈಗೊಳ್ಳಲಿದ್ದಾರೆ ಅಂತವಹೇಳಿದರು

ನನ್ನನ್ನೇ ಮುಂದುವರೆಸುವ ವಿಶ್ವಾಸ

ನನ್ನ ಒಂದು ವರ್ಷದ ಪರಿಶ್ರಮದ ಪರಿಣಾಮವಾಗಿ ವರಿಷ್ಟರು ನನ್ನನ್ನೇ ರಾಜ್ಯಾಧ್ಯಕ್ಷರಾಗಿ ಮುಂದುವರೆಸುತ್ತಾರೆ ಅನ್ನೋ ದೃಡ ವಿಶ್ವಾಸ ನನಗೆ ಸಂಪೂರ್ಣ ನನ್ನಲ್ಲಿ ಇದೆ ಅಂತ ಹೇಳಿದರು ತಾವೇ ಅಧ್ಯಕ್ಷ ಸ್ಥಾನದಲ್ಲಿ‌ ಮುಂದುವರೆಯುವ ಬಗ್ಗೆ ಮತ್ತೆ ವಿಶ್ವಾಸ ವ್ಯಕ್ತಪಡಿಸಿದರು

ಭ್ರಷ್ಟಾಚಾರ ಮರೆಮಾಚಲು ಜಾತಿಗಣತಿ ಮುನ್ನಲೆಗೆ

ಭ್ರಷ್ಟಾಚಾರ ಮರೆಮಾಚಲು ಜಾತಿಗಣತಿಯನ್ನು ಮುನ್ನಲೆಗೆ ತಂದಿದ್ದಾರೆ ಅಂತ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ವಾಲ್ಮೀಕಿ ನಿಗಮದಲ್ಲಿ, ಮುಡಾದಲ್ಲಿ ಹಗರಣ ಆಗಿದೆ.

ಕಿಯೋನಿಕ್ಸ್ ನಲ್ಲಿ ಗುತ್ತಿಗೆದಾರರು ದಯಾಮರಣ ಕೋರಿದ್ದಾರೆ. ಇನ್ನೊಂದು ಕಡೆ ಆತ್ಮಹತ್ಯೆಗಳು ಆಗುತ್ತಿವೆ.

ಜಾತಿ ಗಣತಿ ಹಿಂದೆ ಒಳ್ಳೇ ಉದ್ದೇಶ ಇದೆಯೋ, ದುರುದ್ದೇಶ ಇದೆಯೋ ಅಂತ ಜನ ಪ್ರಶ್ನೆ ಮಾಡ್ತಿದ್ದಾರೆ. ಸಿದ್ದರಾಮಯ್ಯನವರು ನಿಜವಾಗಿಯೂ ಪ್ರಾಮಾಣಿಕರಾಗಿದ್ದರೆ 2016 ರಲ್ಲೇ ವರದಿ ಕೈಸೇರಿದ್ದಾಗಲೇ ಜಾರಿ ಮಾಡಬೇಕಿತ್ತು.

ಇಷ್ಟು ವರ್ಷ ಕಾರಣ‌ಗಳನ್ನು ಮುಂದೊಡ್ಡಿದ್ರು. ಇದು ರಾಜಕೀಯ ಷಢ್ಯಂತ್ರ, ಜಾತಿ ಜನಗಣತಿಯನ್ನು ರಾಜಕೀಯ ಚದುರಂಗ ಅನ್ಕೊಂಡಿದ್ದಾರೆ.

ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜಾತಿ ಜನಗಣತಿ ಅಸ್ತ್ರ ಬಿಟ್ಟು ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತುತ್ತಿರೋದು ಅಕ್ಷಮ್ಯ ಅಪರಾಧ ಅಂತ ಹೇಳಿದರು

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!