cmsiddaramaiah-lesson-for-journalists-in-the-39th-state-conference

39ನೇ ರಾಜ್ಯ ಸಮ್ಮೇಳನದಲ್ಲಿ ಪತ್ರಕರ್ತರಿಗೆ Cmsiddaramaiah ಪಾಠ..!

ತುಮಕೂರು: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ ವೃತ್ತಿ ಇದ್ದಾಗ ಸಮಾಜಕ್ಕೆ ಅನುಕೂಲ. ಸಮಾಜದಲ್ಲಿರುವ ಮೇಲು, ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಕರೆ ನೀಡಿದರು.

ನಿಮ್ಮ ವಿಶೇಷ ಸಂಚಿಕೆ ನೀವೂ ಓದಿ

ಈಗ ವೇದಿಕೆಯಲ್ಲಿ ಬಿಡುಗಡೆಯಾದ ನಿಮ್ಮದೇ ವಿಶೇಷ ಸಂಚಿಕೆ ನೀವೂ ಓದಿ. ಪತ್ರಕರ್ತರ ಕರ್ತವ್ಯ, ಸವಾಲುಗಳ ಪಟ್ಟಿ ಇದೆ. ಅದನ್ನು ಓದಿ, ಪಾಲಿಸಿ ಎಂದರು,

ಜನ ಪತ್ರಕರ್ತರ ಮೇಲೆ ನಂಬಿಕೆ ಇಟ್ಟಿದ್ದಾರೆ. ಮೌಡ್ಯದ ಸುದ್ದಿಗಳನ್ನು , ಚರ್ಚೆಗಳನ್ನು ನಡೆಸಿ ನೋಡುಗರ, ಓದುಗರ ದಾರಿ ತಪ್ಪಿಸಬೇಡಿ ಎಂದರು.

ವಿಜ್ಞಾನ, ತಂತ್ರಜ್ಞಾನದ ವೇಗದಲ್ಲೇ ಪತ್ರಿಕೋದ್ಯಮ ಬೆಳೆಯುತ್ತಿದೆ. ಇದು ಅವಕಾಶ, ಸವಾಲು ಎರಡೂ ಆಗಿದೆ ಎಂದರು.

ದೇಶದ ಪ್ರತಿಯೊಬ್ಬರೂ ಸಂವಿಧಾನ ಓದಬೇಕು. ಆಗ ಹಕ್ಕು-ಕರ್ತವ್ಯ ಎರಡೂ ಗೊತ್ತಾಗುತ್ತದೆ. ನಿಮ್ಮದು ಶಕ್ತಿಯುತ ಮಾಧ್ಯಮ. ಜನ ನಿಮ್ಮ ಕಡೆ ನೋಡ್ತಾ ಇದ್ದಾರೆ. ಈ ಎಚ್ಛರಿಕೆ ಸದಾ ಇರಲಿ ಎಂದರು.

ಕೆಲವೇ ದಿನದಲ್ಲಿ ಬಸ್ ಪಾಸ್

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ, ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಪತ್ರಕರ್ತರ ಮಾಸಾಶನವನ್ನೂ 3 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು.

ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್, ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರುಗಳು ಹಾಗೂ ಹಲವು ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

ಮೊದಲಿಗೆ ಸಮ್ಮೇಳನದ ಆವರಣದಲ್ಲಿ ಆಯೋಜಿಸಿದ್ದ ಸ್ಟಾಲ್ ಗಳನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು ಮಹಿಳಾ ಸ್ವ ಸಹಾಯ ಸಂಘಗಳು ಸಿದ್ದಪಡಿಸಿದ ತಿಂಡಿ ಸವಿದರು.

ಕೆ.ವಿ.ಪ್ರಭಾಕರ್ ಅವರಿಗೆ ಅಭಿನಂಧಿಸಿದ ಸಮ್ಮೇಳನ

ರಾಜ್ಯದ ಪತ್ರಕರ್ತ ಸಮುದಾಯದ ವೃತ್ತಿಪರ ಸಮಸ್ಯೆಗಳಿಗೆ ಅತ್ಯಂತ ಸಹೃದಯತೆಯಿಂದ ಸ್ಪಂದಿಸಿ, ಪರಿಹಾರ ಒದಗಿಸಿಕೊಡುತ್ತಿರುವುದರ ಜೊತೆಗೆ ಸಮ್ಮೇಳನದ ಯಶಸ್ಸಿಗೆ ಸಕಲ ರೀತಿಯಲ್ಲಿ ಸಂಪೂರ್ಣ ಸಹಕಾರ ನೀಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಸಮ್ಮೇಳನ ವಿಶೇಷ ಅಭಿನಂದನೆ ಸಲ್ಲಿಸಿತು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!