ದೊಡ್ಡಬಳ್ಳಾಪುರ, (Doddaballapura): ಕ್ಷೇತ್ರದ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು ಮತ್ತು ಸಿಬ್ಬಂದಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಚೆಕ್ ವಿತರಣೆ, ಸಂಘದ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭವನ್ನು ನಾಳೆ (ಜ.19)ರಂದು ನಗರದ ಶಿಬಿರ ಕಚೇರಿಯಲ್ಲಿ ಬೆಳಗ್ಗೆ 10ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬಮುಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು ಬೆಂಗಳೂರು ಸಹಕಾರ ಹಾಲು ಒಕ್ಕೂಟ, ಬಮುಲ್ ಟ್ರಸ್ಟ್, ದೊಡ್ಡಬಳ್ಳಾಪುರ ಶಿಬಿರ ಕಚೇರಿಯಿಂದ ಈ ಕಾರ್ಯಕ್ರಮ. ಆಯೋಜಿಸಲಾಗಿದೆ ಎಂದಿದ್ದಾರೆ.
ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಚಾಲನೆ ನೀಡಲಿದ್ದು, ಸಂಸದ ಡಾ.ಕೆ ಸುಧಾಕರ್, ಶಾಸಕ ಧೀರಜ್ ಮುನಿರಾಜು.
ಹಾಫ್ ಕಾಮ್ಸ್ ಮಾಜಿ ಅಧ್ಯಕ್ಷ ಬಿ.ಮುನೇಗೌಡ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಬಮೂಲ್ ಅಧ್ಯಕ್ಷ ರಾಜ್ಕುಮಾರ್ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆಂದು ಬಿಸಿ ಆನಂದ್ ಅವರು ತಿಳಿಸಿದ್ದಾರೆ.