ದೊಡ್ಡಬಳ್ಳಾಪುರದಲ್ಲಿ ನಕಲಿ Grama one ಹಾವಳಿ ವರದಿ.‌. ಫೀಲ್ಡಿಗಿಳಿದ ಅಧಿಕಾರಿಗಳು

Fake grama one plague report in Doddaballapur.. Officers in the field

ದೊಡ್ಡಬಳ್ಳಾಪುರ: ನಕಲಿ Grama one ಹಾವಳಿ ಹಿನ್ನೆಲೆಯಲ್ಲಿ ಗ್ರಾಮ ಒನ್ ಅಧಿಕಾರಿಗಳು ಬೆಳ್ಳಂಬೆಳಗ್ಗೆಯೇ ದೊಡ್ಡಬಳ್ಳಾಪುರಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Grama one ಜಿಲ್ಲಾ ವ್ಯವಸ್ಥಾಪಕ ಪ್ರೇಮ್ ಕುಮಾರ್ ಹಾಗೂ ಕೋ ಆರ್ಡಿನೇಟರ್ ಸ್ವಾಮಿ ನೇತೃತ್ವದ ತಂಡ ನಕಲಿ ಗ್ರಾಮ ಒನ್ ಕೇಂದ್ರಗಳ ಪರಿಶೀಲನೆ ಕಾರ್ಯ ನಡೆಸಿದರು.

ತಹಶೀಲ್ದಾರ್ ಅನುಮತಿ ಪಡೆದು, ನಗರದ ಪ್ರಮುಖ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಕಾರ್ಯ ಆರಂಭಿಸಿದರು, ಐಡಿ ದುರುಪಯೋಗ, Grama one ಅಲ್ಲದಿದ್ದರು ಗ್ರಾಮ ಒನ್ ಹೆಸರಲ್ಲಿ ಕೇಂದ್ರ ಸ್ಥಾಪನೆ, ಬೇರೆ ತಾಲೂಕಿನ ಐಡಿ ದುರ್ಬಳಕೆ ಮುಂತಾದ ಆರೋಪಗಳ ಕುರಿತು ತನಿಖೆ ನಡೆಸಿದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ Grama one ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕ ಪ್ರೇಮ್ ಕುಮಾರ್, ಗ್ರಾಮ ಒನ್ ಹೆಸರಲ್ಲಿ ನಕಲಿ ಕೇಂದ್ರಗಳಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಯಿತು.

ಸಾರ್ವಜನಿಕರಿಂದ ಹೆಚ್ಚುವರಿ ಹಣ ವಸೂಲಿ ಮುಂತಾದ ಯಾವುದೇ ದೂರುಗಳಿದ್ದರೆ ಸಾರ್ವಜನಿಕರು ನೇರವಾಗಿ ದೂರು ನೀಡಬಹುದಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಕಲಿ Grama one ಕೇಂದ್ರಕ್ಕೆ ಅವಕಾಶವಿಲ್ಲ. ಆ ರೀತಿ ಕಂಡುಬಂದಲ್ಲಿ ನೇರವಾಗಿ ದೂರು ನೀಡಬಹುದಾಗಿದ್ದು, ಕೂಡಲೇ ಕಾನೂನು ಕ್ರಮಕೈಗೊಳ್ಳಲಾಗುವುದು.

ಅಲ್ಲದೆ ಗ್ರಾಮ ಒನ್ ಕೇಂದ್ರಗಳಿಗೆ ತೊಂದರೆಯಾಗದಂತೆ ಮತ್ತೊಂದು ಕೇಂದ್ರ ತೆರೆಯಲು ನಿರ್ದಿಷ್ಟ ದೂರವನ್ನು ಪಾಲಿಸುವುದು ಕಡ್ಡಾಯವಾಗಿದೆ.

ಇಂದು ನಡೆಸಲಾದ ಪರಿಶೀಲನೆಯಲ್ಲಿ ಯಾವುದೇ ಐಡಿ ಬದಲಾವಣೆ ಕುರಿತು ಕಂಡು ಬಂದಿಲ್ಲ.. ಆದಾಗ್ಯೂ ಹಲವು ಕೇಂದ್ರಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಪ್ರೇಮ್ ಕುಮಾರ್ ತಿಳಿಸಿದ್ದಾರೆ.

ಹರಿತಲೇಖನಿ ವರದಿ

ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗ್ರಾಮ್ ಒನ್ (Grama one) ಅಗಿದ್ದು, ಸರ್ಕಾರದ ಎಲ್ಲಾ ಸೇವೆಗಳು ಒಂದೇ ಸೂರಿನಡಿ ಸಾರ್ವಜನಿಕರಿಗೆ ತಲುಪಿಸುವ ದೇಸೆಯಲ್ಲಿ ಗ್ರಾಮೀಣ ಭಾಗದಲ್ಲಿ ಗ್ರಾಮ್ ಒನ್ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ.

ಈ ಕೇಂದ್ರಗಳ ಮೂಲಕ ಗ್ರಾಮ ಮಟ್ಟದಲ್ಲಿ ನಾಗರಿಕರು / ಹಿರಿಯ ನಾಗರಿಕರು / ಮಹಿಳೆಯರು, ವಿಶೇಷಚೇತನರು ತಮ್ಮ ಗ್ರಾಮದಲ್ಲಿಯೇ ಸರ್ಕಾರದ ನಾಗರಿಕ ಸೇವೆಗಳನ್ನು ಪಡೆಯಬಹುದು.

ಆದರೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಕಲಿ ಗ್ರಾಮ ಒನ್ ಹಾವಳಿ ಆರಂಭವಾಗಿದ್ದು, ಲಕ್ಷಾಂತರ ರೂ ಬಂಡವಾಳ ಹೂಡಿ ಗ್ರಾಮ ಒನ್ ಕೇಂದ್ರ ತೆರೆದಿರುವ ಯುವಕ, ಯುವತಿಯರನ್ನು ಸಂಕಷ್ಟಕ್ಕೆ ದೂಡಿದೆ ಎಂಬದು ಆರೋಪವಾಗಿತ್ತು.

ದೊಡ್ಡಬಳ್ಳಾಪುರ ತಾಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಕೆಲ ಸೈಬರ್ ಸೆಂಟರ್ ಗಳು, ಹಳದಿ ಬಣ್ಣ ಬಳೆದುಕೊಂಡು ಗ್ರಾಮ ಒನ್ ಹೆಸರಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಿ ಗ್ರಾಹಕರನ್ನು ವಂಚಿಸುತ್ತಿವೆ ಎಂಬ ಆಕ್ರೋಶ ವ್ಯಕ್ತವಾಗಿತ್ತು.

ಈ ಕೇಂದ್ರಗಳಲ್ಲಿ ಐಕೆವೈಸಿ ಹೊರತು ಪಡಿಸಿ ಇತರೆ ಎಲ್ಲಾ ಗ್ರಾಮ ಒನ್ ಸೌಲಭ್ಯ ನೀಡಲಾಗುತ್ತಿದೆ. ಅಲ್ಲದೆ ಇತರೆ ತಾಲೂಕಿನ ಗ್ರಾಮ ಒನ್ ಐಡಿ ಬಳಸುವ ಮೂಲಕ, ಉಚಿತ ಸೌಲಭ್ಯಕ್ಕೂ ಸಾರ್ವಜನಿಕರಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ.

ಇದರಿಂದಾಗಿ ಲಕ್ಷಾಂತರ ರೂ ಹಣ ಹೂಡಿಕೆ ಮಾಡಿರುವ ನಿರುದ್ಯೋಗಿ ಯುವಕರು ಗ್ರಾಮ ಒನ್ ಕೇಂದ್ರಗಳನ್ನು ಮುಚ್ಚಬೇಕಾದ ಅನಿವಾರ್ಯತೆ ಎದುರಾಗಿದೆ.

ಕೂಡಲೇ ಅಧಿಕಾರಿಗಳು ಹೆಚ್ಚೆತ್ತು, ಸಾರ್ವಜನಿಕರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ನಕಲಿ ಗ್ರಾಮ ಒನ್ ಕೇಂದ್ರಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]