Deputy Lokayukta B.Veerappa speed officials are distracted..!

ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಸ್ಪೀಡ್ ಗೆ ಅಧಿಕಾರಿಗಳು ತಬ್ಬಿಬ್ಬು..! ಫೋಟೋಗಳನ್ನು ನೋಡಿ| B Veerappa

ಬಳ್ಳಾರಿ: ಜಿಲ್ಲಾ ಪ್ರವಾಸದಲ್ಲಿದ್ದ ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಬಳ್ಳಾರಿ ನಗರದ ಮಯೂರ ಹೋಟೆಲ್ ಹಿಂಭಾಗದ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಸತಿ ನಿಲಯಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ-02 ಗೆ ಭೇಟಿ ನೀಡಿದ ಉಪ ಲೋಕಾಯುಕ್ತರು ಅಡುಗೆ ಕೋಣೆ, ಆಹಾರ ದಾಸ್ತಾನು ಕೋಣೆ, ವಿದ್ಯಾರ್ಥಿಗಳ ವಸತಿ ಗೃಹ ಪರಿಶೀಲಿಸಿದರು.

ಅಧಿಕಾರಿಗಳು, ವಾರ್ಡನ್, ಅಡುಗೆದಾರರು ಮತ್ತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.

ಆಹಾರದಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸಮರ್ಪಕ ವ್ಯವಸ್ಥೆ ಮಾಡಬೇಕು. ಕಾಲಕಾಲಕ್ಕೆ ವಸತಿ ನಿಲಯಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.

ಸರ್ಕಾರಿ ಮೆಟ್ರಿಕ್‌ಪೂರ್ವ ವಸತಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಮಕ್ಕಳ ಜೊತೆ ಸಂವಾದ ನಡೆಸಿ, ಗುಣಮಟ್ಟದ ಹಾಲು ವಿತರಣೆ ಮಾಡುತ್ತಾರೆಯೇ, ಊಟ ಚೆನ್ನಾಗಿರುತ್ತದೆಯೇ, ಸ್ನಾನ ಹಾಗೂ ಶೌಚಾಲಯದ ಕೊಠಡಿಗಳು ಸ್ವಚ್ಛವಾಗಿವೆಯೇ, ಬಿಸಿ ನೀರು ಬರುತ್ತಿದೆಯೇ, ರಾತ್ರಿ ವೇಳೆ ಸೊಳ್ಳೆಗಳ ಕಾಟವಿದೆಯೇ ಎಂದೆಲ್ಲ ವಿಚಾರಿಸಿ ಮಾಹಿತಿ ಪಡೆದುಕೊಂಡರು.

ವಸತಿ ನಿಲಯಗಳಲ್ಲಿ ದೇಶದ ಮಹಾನುಭಾವರ ಕೈನಿಂದ ಬಿಡಿಸಿದ ಚಿತ್ರಗಳನ್ನು ವಿರೂಪಗೊಳಿಸುವಂತಿಲ್ಲ. ಅವರಿಗೆ ಅವಮಾನ ಮಾಡಿದಂತಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ನಿಲಯದ ಪಾಲಕರಿಗೆ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳು, ನಮಗೆ ಮಲಗಲು ಬೆಡ್ ವ್ಯವಸ್ಥೆ ಇಲ್ಲ. ಸ್ನಾನಕ್ಕೆ ಬಿಸಿ ನೀರು ಇಲ್ಲ. ಸಾರು ನೀರಿನಂತಿರುತ್ತದೆ, ವೇಳಾಪಟ್ಟಿಯಂತೆ ಅಡುಗೆ ಮಾಡುವುದಿಲ್ಲ, ರಾತ್ರಿಯಾದರೆ ಅನಧೀಕೃತ ವ್ಯಕ್ತಿಗಳು ಬರುತ್ತಾರೆ, ಗಲಾಟೆ ಮಾಡುತ್ತಾರೆ, ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ.

ವಾರ್ಡನ್ ವಿದ್ಯಾರ್ಥಿ ನಿಲಯಕ್ಕೆ ವಾರದಲ್ಲಿ ಒಮ್ಮೆ ಬರುತ್ತಾರೆ. ಬಟ್ಟೆ ತೊಳೆಯುವ ಸ್ಥಳದಲ್ಲಿ ಗಲೀಜು ತುಂಬುತ್ತದೆ. ಕೆಲವು ಸೌಲಭ್ಯಗಳನ್ನು ಸಮರ್ಪಕವಾಗಿ ನೀಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಸಮಸ್ಯೆಗಳ ಪಟ್ಟಿಯನ್ನು ತೆರೆದಿಟ್ಟರು.

ಅಲ್ಲಿನ ವಸತಿ ನಿಲಯಗಳ ಕೋಣೆ, ಆಹಾರ ದಾಸ್ತಾನು ಗಮನಿಸಿ ಅಸಮಧಾನ ವ್ಯಕ್ತಪಡಿಸಿದ ಉಪ ಲೋಕಾಯುಕ್ತರು, ರಾಜ್ಯ ಸರ್ಕಾರವು ವಸತಿ ನಿಲಯದ ವಿದ್ಯಾರ್ಥಿಗಳಿಗಾಗಿಯೇ ಲಕ್ಷಾಂತರ ರೂ. ಖರ್ಚು ಮಾಡುತ್ತಿದೆ.

ಮಕ್ಕಳಿಗೆ ಊಟ, ವಸತಿ, ರಕ್ಷಣೆ ಸೇರಿದಂತೆ ಮೂಲಭೂತ ಸೌಕರ್ಯಗಳು ಒದಗಿಸಲು ಏನು ಸಮಸ್ಯೆಯಾಗುತ್ತಿದೆ ಎಂದು ನಿಲಯದ ನಿಲಯಪಾಲಕರ ಅಮಾನತ್ತಿಗೆ ಸೂಚಿಸಿದರು.

ಈ ವೇಳೆ ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಕೆ.ಎಂ.ರಾಜಶೇಖರ್, ಸಹಾಯಕ ನಿಬಂಧಕರಾದ ಶುಭವೀರ್ ಜೈನ್.ಬಿ., ಉಪ ನಿಬಂಧಕರಾದ ಅರವಿಂದ.ಎನ್.ವಿ., ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ., ಡಿವೈಎಸ್ಪಿ ವಸಂತ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಸೇರಿದಂತೆ ಮುಂತಾದ ಅಧಿಕಾರಿಗಳು ಇದ್ದರು.

ರಾಜಕೀಯ

ಅಧಿಕಾರಕ್ಕೆ ಬರುವುದು ಬಿಜೆಪಿಯವರ ಹಣೆಯಲ್ಲಿ ಬರೆದಿಲ್ಲ; ಡಿ.ಕೆ. ಶಿವಕುಮಾರ್

ಅಧಿಕಾರಕ್ಕೆ ಬರುವುದು ಬಿಜೆಪಿಯವರ ಹಣೆಯಲ್ಲಿ ಬರೆದಿಲ್ಲ; ಡಿ.ಕೆ. ಶಿವಕುಮಾರ್

ಬಿಜೆಪಿ ಅಧಿಕಾರಿಕ್ಕೆ ಬಂದರೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರದ್ದು ಮಾಡುವುದಾಗಿ ಹೇಳುತ್ತಿದೆ ಎಂದಾಗ, ಅವರು ಅಧಿಕಾರಕ್ಕೆ ಬಂದಾಗ, ಏನು ಬೇಕಾದರೂ ಮಾಡಲಿ. ಅಧಿಕಾರಕ್ಕೆ ಬರುವುದು, ಜಿಬಿಎ ರದ್ದುಗೊಳಿಸುವುದು ಅವರ ಹಣೆಯಲ್ಲಿ ಬರೆದಿಲ್ಲ. D.K Shivakumar

[ccc_my_favorite_select_button post_id="115320"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!