BJP; ಬಿಜೆಪಿಯಲ್ಲಿ ತಾರಕಕ್ಕೇರಿದ ಬಣ ಬಡಿದಾಟ.. ನಾಳೆ ಹೈವೋಲ್ಟೇಜ್ ಸಭೆ: ವಿಜಯೇಂದ್ರ ಹೇಳಿದ್ದಿಷ್ಟು| Video

Faction clash in BJP.. High voltage meeting tomorrow

ಬೆಂಗಳೂರು: ಹೊನ್ನವಾರದಲ್ಲಿ ಗೋವಿನ ರುಂಡ ಕತ್ತರಿಸಿ, ಅಮಾನುಷವಾಗಿ ನಡೆದುಕೊಂಡಿದ್ದಾರೆ. ಸರ್ಕಾರದ ಮೇಲೆ ಜನ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಗೋವಿನ ಕೆಚ್ಚಲು ಕೂಯ್ದಿದ್ದಾರೆ. ಪ್ರತಿಯೊಬ್ಬರೂ ತಲೆ ತಗ್ಗಿಸೋ ಘಟನೆ ಇಷ್ಟೊಂದು ನಡೆದರು ಕಾನೂನು ಸುವ್ಯವಸ್ಥೆ ಸರಿಯಾಗಿದೆ ಅಂತ ಬಿಂಬಿಸೋ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ.

ಹಿಂದೂ ವಿರೋಧಿ ಶಕ್ತಿ ರಾಜ್ಯದಲ್ಲಿ ತಾಂಡವ ಆಡ್ತಿದೆ. ಇವರೆಲ್ಲರಿಗೆ ಕಾನೂನಿನ‌ ಬಗ್ಗೆಯಾಗಲಿ ಪೋಲೀಸರ ಬಗ್ಗೆಯಾಗಲಿ ಭಯನೆ ಇಲ್ಲ. ಗೃಹಸಚಿವರು, ಸಿಎಂ ಎಚ್ಚೆತ್ತುಕೊಳ್ಳಬೇಕು.

ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸಂಪೂರ್ಣವಾಗಿ ಹದಗೆಟ್ಟೆದೆ ಅಂತ ಹೇಳಿದರು.

ವಿಜಯೇಂದ್ರ ವಿರುದ್ಧ ಯತ್ನಾಳ್ ಆಂಡ್ ಟೀಮ್ ವಾಗ್ದಾಳಿ ವಿಚಾರ

ಟಾರ್ಗೆಟ್ ಮಾಡೋರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ. ಯತ್ನಾಳ್ ಇರಲಿ, ಯಾರೇ ಆಗಲಿ ನಾನು ತಲೆ‌ಕೆಡಿಸಿಕೊಳ್ಳಲ್ಲ. ನಾನು ಕೆಲಸ ಮಾಡಲು ಬಂದಿದ್ದೇನೆ, ಕೆಲಸ ಮಾಡಿಕೊಂಡು ಹೋಗುತ್ತೇನೆ. ಕೆಲಸ ಇಲ್ಲದವರ ಬಗ್ಗೆ ನಾನು ಮಾತನಾಡುವುದಕ್ಕೆ ಹೋಗುವುದಿಲ್ಲ ಅಂತ ಹೇಳಿದರು

ನಾಳೆ ಬಿಜೆಪಿ ಕಚೇರಿಯಲ್ಲಿ ಸರಣಿ ಸಭೆ

ನಾಳೆ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್, ಪೊನ್ನು ರಾಧಾ ಕೃಷ್ಣ, ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಬರುತ್ತಿದ್ದಾರೆ. ಬಿಜೆಪಿ ಕಚೇರಿಯಲ್ಲಿ 3 ಗಂಟೆಗೆ ಚುನಾಯಿತ ಸದಸ್ಯರು, ಸಂಸದರು, ಶಾಸಕರ ಜೊತೆ ಸಭೆ ಕರೆದಿದ್ದಾರೆ.

ಅಲ್ಲಿ ಎಲ್ಲರ ಅಭಿಪ್ರಾಯ ಪಡೆಯುತ್ತಾರೆ. 4 ಗಂಟೆಗೆ ಸಂಘಟನಾ ಪರ್ವ, ಜಿಲ್ಲಾ ಅಧ್ಯಕ್ಷರ ಚುನಾವಣೆ ಬಗ್ಗೆ ಸಭೆ ಇದೆ.. ರಾಜ್ಯಾಧ್ಯಕ್ಷರ ಚುನಾವಣೆ ಚರ್ಚೆ ಆಗುತ್ತೆ. ಚುನಾವಣೆ ಆಫೀಸರ್ ಸಭೆ ಕೂಡ ನಡೆಯುತ್ತೆ ತದನಂತರ 7 ಗಂಟೆಗೆ ಕೋರ್ ಕಮಿಟಿ ಸಭೆ ನಡೆಯುತ್ತೆ.

ನಾಳೆಯ ಸಭೆಯಲ್ಲಿ ರಾಜ್ಯದ ಪರಿಸ್ಥಿತಿ ಬಗ್ಗೆ, ರಾಜ್ಯಾಧ್ಯಕ್ಷ ಬಗ್ಗೆ ಚರ್ಚೆ ನಡೆಯುತ್ತದೆ ಅಂತ ಮಾಹಿತಿ ನೀಡಿದರು

ಯತ್ನಾಳ್ ವಿರುದ್ದ ಕ್ರಮ

ಯಾರು ಕ್ರಮ ಕೈಗೊಳ್ಳಬೇಕೋ ಅವರು ತೆಗೆದುಕೊಳ್ಳುತ್ತಾರೆ.. ಫೆಬ್ರವರಿ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ಇದೆ. ಪಕ್ಷದ ಇವತ್ತಿನ ಬೆಳವಣಿಗೆಗಳ ಬಗ್ಗೆ ನಿಮ್ಮ (ಖಾಸಗಿ ಚಾನಲ್) ಹಾಗೂ ಕಾರ್ಯಕರ್ತರ ನೋವು ಇದೆ.

ಅ ನೋವು ಏನು ಅಂತ ಅರ್ಥ ಆಗುತ್ತೆ. ಇದೆಲ್ಲದಕ್ಕೂ ಶೀಘ್ರದಲ್ಲೇ ಇತೀಶ್ರೀ ಹಾಡೋ ಕೆಲಸ ಹೈಕಮಾಂಡ್ ಮಾಡುತ್ತದೆ ಅಂತ ಹೇಳಿದರು

ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ

ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಈ ರೀತಿ ಘಟನೆಗಳು ನಡೆಯುತ್ತಿವೆ. ವಿಜಯಪುರದಲ್ಲಿ ಯಾವ ರೀತಿ ತಳಿಸಿದ್ದಾರೆ ಅಂತ ನೋಡುತ್ತಿದ್ದೇವೆ ರಾಜ್ಯ ಸರ್ಕಾರ ಯಾವ ರೀತಿ ವರ್ತಿಸುತ್ತಿದೆ ಈ ರೀತಿ ನಡೆದುಕೊಂಡವರನ್ನು ಕೂಡಲೇ ಬಂಧನ ಮಾಡಬೇಕು ಅಂತ ಆಗ್ರಹಿಸಿದರು.

ಮುಡಾ ವಿಚಾರದಲ್ಲಿ ನಡೆದ ಘಟನೆ ಬಳಿಕ. ಕಾಂಗ್ರೆಸ್ ನಲ್ಲೇ ಸಿಎಂ ಆಗೋಕೆ ನಡೆಯುತ್ತಿರೋ ಗುದ್ದಾಟ ನಾವು ನೋಡ್ತಿದ್ದೇವೆ. ಇದರ ನಡುವೆ ಬಿಜೆಪಿ, ಜೆಡಿಎಸ್ ಪಕ್ಷದ ಶಾಸಕರನ್ನ ಅವರ ಪಕ್ಷಕ್ಕೆ ಸೇರಿಸಿಕೊಂಡು ಏನು ಮಾಡುತ್ತಾರೆ ಅಂತ ಪ್ರಶ್ನೆ ಮಾಡಿದರು

ಮೊದಲು ಅಭಿವೃದ್ಧಿ ಮಾಡಲಿ. ಕಾನೂನು ಸುವ್ಯವಸ್ಥೆ ಸರಿಪಡಿಸಲಿ. ಅವರಲ್ಲಿ ಇರೋ ಶಾಸಕರನ್ನ ಮೊದಲು ಉಳಿಸಿಕೊಳ್ಳಲಿ. ಬಿಜೆಪಿ, ಜೆಡಿಎಸ್ ಪಕ್ಷದವರನ್ನ ಆಮೇಲೆ ಕರೆದುಕೊಳ್ಳಲಿ ಅಂತ ಹೇಳಿದರು

ರಾಜಕೀಯ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

"ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ (IPL) ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ" ಎಂದು‌ ಡಿಸಿಎಂ ಡಿ.ಕೆ.

[ccc_my_favorite_select_button post_id="121800"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]