R Ashoka's eyes on the post of BJP state president..?

R Ashoka| ಸೋನಿಯಾ, ರಾಹುಲ್, ಪ್ರಿಯಾಂಕ ನಕಲಿ ಗಾಂಧಿಗಳು: ಆರ್.ಅಶೋಕ ಲೇವಡಿ

ಬೆಂಗಳೂರು: ದೇಶಕ್ಕೆ ಸ್ವಾತ್ರಂತ್ಯ ತಂದುಕೊಟ್ಟವರು ಮಹಾತ್ಮ ಗಾಂಧಿ. ಅವರೇ ನಿಜವಾದ ಗಾಂಧಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಇವರೆಲ್ಲಾ ನಕಲಿ ಗಾಂಧಿಗಳು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R Ashoka) ಲೇವಡಿ ಮಾಡಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆ ಮಾಸುವ ಮುನ್ನವೇ, ಹೊನ್ನಾವರದಲ್ಲಿ ಕೂಡ ಗರ್ಭಿಣಿ ಹಸುವನ್ನು ಭೀಕರವಾಗಿ ಕೊಲ್ಲಲಾಗಿದೆ. ಕರ್ನಾಟಕದಲ್ಲಿ ಗೋವುಗಳಿಗೆ ರಕ್ಷಣೆ ಇಲ್ಲ ಎಂಬುದು ಇದರಿಂದ ಸಾಬೀತಾಗಿದೆ.

ಇದು ಕಿವುಡು ಸರ್ಕಾರ. ರಾಜ್ಯದ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದರೂ, ಸರ್ಕಾರ ಸಮಾವೇಶ ಮಾಡುತ್ತಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಇವರೆಲ್ಲಾ ಸ್ವಾತಂತ್ರ್ಯ ಹೋರಾಟ ಮಾಡಿದ್ದಾರಾ? ಇವರೆಲ್ಲಾ ಡೂಪ್ಲಿಕೇಟ್ ಗಾಂಧಿಗಳು ಎಂದರು.

ಕಾರ್ಮಿಕರಿಗೆ ಥಳಿತ

ರಾಜ್ಯದಲ್ಲಿ ಗೃಹ ಸಚಿವರು ಯಾರು ಎನ್ನುವುದೇ ಗೊತ್ತಾಗುತ್ತಿಲ್ಲ. ಎಲ್ಲ ಸಚಿವರು ಗೃಹ ಇಲಾಖೆಯಲ್ಲಿ ಕೈಯಾಡಿಸುತ್ತಿದ್ದಾರೆ. ಭ್ರಷ್ಟಾಚಾರ ಹಾಗೂ ಲಂಚಾವತಾರ ಮಿತಿ ಮೀರಿದೆ.

ಶೇ.60 ರಷ್ಟು ಕಮಿಷನ್ ಕೊಟ್ಟರೆ ಮಾತ್ರ ಈ ಸರ್ಕಾರದಲ್ಲಿ ಫೈಲ್ ಮೂವ್ ಆಗುತ್ತದೆ. ವಿಜಯಪುರಲ್ಲಿ ಕಾರ್ಮಿಕರನ್ನು ನಡು ರಸ್ತೆಯಲ್ಲಿಯೇ ಥಳಿಸುತ್ತಿರುವ ಹೃದಯವಿದ್ರಾವಕ ಘಟನೆಯನ್ನು ಮಾಧ್ಯಮದಲ್ಲಿ ನೋಡಿದೆ.

ಬೀದಿಯಲ್ಲೇ ನಿಂತು ರಾಜಾರೋಷವಾಗಿ ಹೊಡೆಯುತ್ತಿದ್ದಾರೆ ಎಂದರೆ ರಾಜ್ಯದಲ್ಲಿರುವ ದರೋಡೆಕೋರರಿಗೆ, ರೌಡಿಗಳಿಗೆ ಪೊಲೀಸರ ಬಗ್ಗೆ ಏನು ಸಂದೇಶ ಹೋಗುತ್ತಿದೆ? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ ಎಂಬುದಕ್ಕೆ ಇದು ಉದಾಹರಣೆ.

ಹಾಡಹಗಲೇ ಬ್ಯಾಂಕ್ ದರೋಡೆ ನಡೆಯುತ್ತಿದೆ. ಇಷ್ಟೆಲ್ಲಾ ಆದರೂ ರಾಜ್ಯ ಸರ್ಕಾರ ಸುಮ್ಮನೆ ಕುಳಿತಿದೆ. ಇದೊಂದು ಕುಂಭಕರ್ಣ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಆಡಳಿತದ 20 ತಿಂಗಳಲ್ಲಿ 20 ಹಗರಣಗಳು ನಡೆದಿವೆ. ಬೆಳಗಾವಿ ಅಧಿವೇಶನದಲ್ಲಿ ಸಿಟಿ ರವಿ ಅವರ ಮೇಲಿನ ಹಲ್ಲೆ ಪ್ರಕರಣವನ್ನು ಯಾರು ನಿರ್ವಹಣೆ ಮಾಡುತ್ತಿದ್ದಾರೆ? ಜಿಲ್ಲಾ ಉಸ್ತುವಾರಿ ಸಚಿವರು ತಾವು ನಿರ್ವಹಿಸುತ್ತಿಲ್ಲ ಎನ್ನುತ್ತಿದ್ದಾರೆ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಾನು ಹ್ಯಾಂಡಲ್ ಮಾಡುತ್ತಿಲ್ಲ ಎನ್ನುತ್ತಿದ್ದಾರೆ.

ಸಚಿವ ಪರಮೇಶ್ವರ್ ನನಗೆ ವಿಷಯ ಗೊತ್ತಿಲ್ಲ ಎಂದಿದ್ದಾರೆ. ಗೃಹ ಇಲಾಖೆಯನ್ನು ಯಾರು ಹ್ಯಾಂಡಲ್ ಮಾಡುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದರು.

ಕಾಂಗ್ರೆಸ್ ಎಂದರೆ 60% ಕಮಿಷನ್ ಸರ್ಕಾರ. ಎಲ್ಲ ಇಲಾಖೆಗಳಲ್ಲೂ 60% ಕಮಿಷನ್ ಪಡೆಯುತ್ತಿದ್ದಾರೆ. ಮುಡಾದಲ್ಲಿ 3 ಸಾವಿರ ಕೋಟಿ ರೂ.ಗೂ ಹೆಚ್ಚು ಹಾಗೂ ವಾಲ್ಮೀಕಿ ನಿಗಮದಲ್ಲಿ 197 ಕೋಟಿ ರೂ. ಹಗರಣ ಆಗಿದೆ.

ಈ ಎಲ್ಲ ಹಣ ಈಗ ಬೆಳಗಾವಿಯ ಕಾಂಗ್ರೆಸ್ ಸಮಾವೇಶಕ್ಕೆ ಬಳಕೆಯಾಗಿದೆ. ಕಾಂಗ್ರೆಸ್ ನವರು ಕರ್ನಾಟಕವನ್ನು ಲೂಟಿ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅನುದಾನ ನೀಡುತ್ತಿಲ್ಲವೆಂದು ಸಚಿವ ಸಂಪುಟ ಸಭೆಯಲ್ಲಿ ಗಲಾಟೆಯಾಗಿದೆ. ಕಾಂಗ್ರೆಸ್ ಶಾಸಕರು ಪಕ್ಷ ಬಿಡಲು ಸಿದ್ಧರಾಗಿದ್ದಾರೆ.

ಎರಡು ವರ್ಷಗಳ ಹಿಂದೆ 15 ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದರು. ಈಗಲೂ ಅದೇ ಪರಿಸ್ಥಿತಿಯಿದೆ. ಮೊದಲು ಅವರ ಪಕ್ಷದಲ್ಲಿರುವ ಸಮಸ್ಯೆ ಬಗೆಹರಿಸಿಕೊಳ್ಳಲಿ ಎಂದರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!