Coconut Growers Convention in the State

ರಾಜ್ಯದಲ್ಲಿ ತೆಂಗು ಬೆಳೆಗಾರ ಸಮಾವೇಶ; ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ & ಶಿವರಾಜ್ ಸಿಂಗ್ ಚೌಹಾಣ್ ಚರ್ಚೆ

ನವದೆಹಲಿ: ರಾಜ್ಯದ ಕೊಬ್ಬರಿ ಮತ್ತು ಅಡಿಕೆ ಬೆಳೆಗಾರರು ಸೇರಿದಂತೆ ಕೃಷಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ (HDK) ಅವರು ಮಹತ್ವದ ಮಾತುಕತೆ ನಡೆಸಿದರು.

Guarantee scheme
ಎನ್ ವಿಶ್ವನಾಥ್

ತಮ್ಮ ಪುತ್ರರಿಬ್ಬರ ವಿವಾಹಕ್ಕೆ ತಮ್ಮ ಧರ್ಮಪತ್ನಿ ಶ್ರೀಮತಿ ಚೌಹಾಣ್ ಅವರೊಂದಿಗೆ ಮಂಗಳವಾರ ಬೆಳಗ್ಗೆ ಬೃಹತ್ ಕೈಗಾರಿಕೆ ಸಚಿವಾಲಯಕ್ಕೆ ಆಗಮಿಸಿ ಸಚಿವ ಕುಮಾರಸ್ವಾಮಿ ಅವರಿಗೆ ಆಮಂತ್ರಣ ನೀಡಿದರು ಕೃಷಿ ಸಚಿವರು.

ಇದೇ ವೇಳೆ ಸಚಿವರಿಬ್ಬರು ಕರ್ನಾಟಕ ಸೇರಿದಂತೆ ರಾಷ್ಟ್ರದ ಕೃಷಿ ಕ್ಷೇತ್ರದ ಆಗುಹೋಗುಗಳು, ರೈತರ ಕುಂದುಕೊರತೆಗಳ ಬಗ್ಗೆ ಮಾತುಕತೆ ನಡೆಸಿದರು.

ಕುಮಾರಸ್ವಾಮಿ ಅಭಿನಂದನೆ

ಅಡಿಕೆಗೆ ಬರುತ್ತಿರುವ ರೋಗಗಳ ಪರಿಹಾರಕ್ಕೆ ₹67 ಕೋಟಿಗಳನ್ನು ಮುಂದಿನ ಬಜೆಟ್ ನಲ್ಲಿ ಘೋಷಣೆ ಮಾಡಲಾಗುವುದು ಎಂದು ಚೌಹಾಣ್ ಅವರು ಘೋಷಣೆ ಮಾಡಿದ್ದು, ಆ ಬಗ್ಗೆ ಕುಮಾರಸ್ವಾಮಿ ಕೃಷಿ ಸಚಿವರಿಗೆ ಅಭಿನಂದನೆಗಳನ್ನು ತಿಳಿಸಿದರು.

ಅಗತ್ಯ ಮಾರುಕಟ್ಟೆ ಸೌಲಭ್ಯದ ಕೊರತೆ ಹಾಗೂ ಬೆಳೆ ತೆಗೆಯುವ ಬಗ್ಗೆ ಸವಾಲು ಎದುರಿಸುವ ರೈತರಿಗೆ ಸಹಾಯ ಹಸ್ತದ ಬೇಕಿದೆ. ಈ ನಿಟ್ಟಿನಲ್ಲಿ ತಾವು ನೀಡಿರುವ ಭರವಸೆ ರೈತರಲ್ಲಿ ಹರ್ಷ ಮೂಡಿಸಿದೆ ಎಂದು ಕುಮಾರಸ್ವಾಮಿ ಅವರು ಚೌಹಾಣ್ ಅವರಿಗೆ ಹೇಳಿದರು.

ಕರ್ನಾಟಕದ ತೆಂಗು ಬೆಳೆಗಾರರು ಎದುರಿಸುತ್ತಿರುವ ಕಠಿಣ ಸವಾಲುಗಳ ಬಗ್ಗೆ ಕೃಷಿ ಸಚಿವರ ಗಮನ ಸೆಳೆದ ಕುಮಾರಸ್ವಾಮಿ ಅವರು, ತೆಂಗು ಬೆಳೆಗಾರರ ಸಂಕಷ್ಟ ಪರಿಹಾರ ಮಾಡುವ ನಿಟ್ಟಿನಲ್ಲಿ ತಮ್ಮ ಕಡೆಯಿಂದ ದೊಡ್ಡ ಉಪ ಕ್ರಮ ಆಗಬೇಕಿದೆ. ಈ ನಿಟ್ಟಿನಲ್ಲಿ ತಾವು ರಾಜ್ಯದಲ್ಲಿ ತೆಂಗು ಬೆಳೆಗಾರರ ಸಮಾವೇಶ ನಡೆಸಿ ಅವರ ಸಂಕಷ್ಟಗಳಿಗೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

ಸಮಾವೇಶ ನಡೆಸುವ ಕುಮಾರಸ್ವಾಮಿ ಅವರ ಸಲಹೆಗೆ ತಕ್ಷಣವೇ ಸ್ಪಂದಿಸಿದ ಸಚಿವರು; ಇದು ಬಹಳ ಒಳ್ಳೆಯ ಆಲೋಚನೆ. ಬೆಳೆಗಾರರು ತಮ್ಮೆಲ್ಲ ಸಮಸ್ಯೆಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಿ. ಅನಂತರ ಪರಿಹಾರೋಪಾಯಗಳನ್ನು ಕಂಡುಕೊಳ್ಳೋಣ ಎಂದು ಚೌಹಾಣ್ ಅವರು ಉಕ್ಕು ಸಚಿವರಿಗೆ ಹೇಳಿದರು.

ದುಬಾರಿಗೆ ಸಾಗಾಣಿಕೆ ವೆಚ್ಚವೇ ತೆಂಗು ಬೆಳೆಗಾರರಿಗೆ ದೊಡ್ಡ ಸಮಸ್ಯೆ ಆಗಿದೆ. ರೈತನ ಬಹುತೇಕ ಆದಾಯ ಸಾಗಾಣಿಕೆಗೆ ವ್ಯಯವಾಗುತ್ತಿದೆ. ಅವರಿಗೆ ನ್ಯಾಯಯುತ ಬೆಲೆ ಧಕ್ಕಿಸಿಕೊಡುವುದರ ಜೊತೆಗೆ ಸಾಗಾಣಿಕೆ ವ್ಯವಸ್ಥೆಯನ್ನು ರೈತರ ಕೈಗೆಟುಕುವಂತೆ ಮಾಡುವುದು ಅತ್ಯಗತ್ಯವಾಗಿದೆ. ಇದಕ್ಕೆ ಕೃಷಿ ಸಚಿವಾಲಯದ ನೆರವು ಅಗತ್ಯವಿದೆ ಕುಮಾರಸ್ವಾಮಿ ಅವರು ಕೃಷಿ ಸಚಿವರನ್ನು ಕೋರಿದರು. ಈ ಮನವಿಗೂ ಕೃಷಿ ಸಚಿವರು ಸ್ಪಂದಿಸಿದರು.

ಕೃಷಿ ಉತ್ಪನ್ನಗಳ ಸರಪಳಿಯಿಂದ ಮಧ್ಯವರ್ತಿಗಳನ್ನು ಸಂಪೂರ್ಣವಾಗಿ ತೊಡೆದುಹಾಕುವ ಅಗತ್ಯತೆಯ ಬಗ್ಗೆಯೂ ಇಬ್ಬರೂ ಸಚಿವರು ಚರ್ಚೆ ನಡೆಸಿದರು.

ಕೃಷಿ ಉತ್ಪನ್ನಗಳ ಮಾರಾಟದಲ್ಲಿ ದಲ್ಲಾಳಿಗಳ ಉಪಟಳ ಮೆರೆ ಮೀರಿದೆ. ಕೇಂದ್ರ ಸರ್ಕಾರದಿಂದ ಎಷ್ಟೇ ಅನುಕೂಲರ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ರೈತರ ಸಂಕಷ್ಟ ಬಗೆಹರಿದಿಲ್ಲ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಉತ್ತಮ ಬೆಲೆ ಖಾತರಿ ಜತೆಗೆ, ಬೆಳೆಗಳ ಅತ್ಯುತ್ತಮ ದಾಸ್ತಾನು ಖಾತರಿಯನ್ನು ರೈತರಿಗೆ ಕೊಡಬೇಕಿದೆ ಎಂಬ ಬಗ್ಗೆ ಸಚಿವರಿಬ್ಬರೂ ಚರ್ಚಿಸಿದರು.

ಫಲಾನುಭವಿಗಳಿಗೆ ಹಣ ನೇರ ವರ್ಗಾವಣೆ (ಡಿಬಿಟಿ) ಮೂಲಕ ರಸಗೊಬ್ಬರ ಸಬ್ಸಿಡಿಯನ್ನು ಸಕಾಲಕ್ಕೆ ತಲುಪಿಸುವ ಮಹತ್ವವನ್ನು ಕುಮಾರಸ್ವಾಮಿ ಅವರು ಕೃಷಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಅಲ್ಲದೆ; ವಿಳಂಬವಿಲ್ಲದೆ ಇತರೆ ಸಹಾಯಧನವನ್ನು ನೇರವಾಗಿ ರೈತರಿಗೆ ತಲುಪಿಸುವುದು, ಅಧಿಕಾರಶಾಹಿಯ ಅನಗತ್ಯ ಹಸ್ತಕ್ಷೇಪದಿಂದ ಅವರನ್ನು ರಕ್ಷಿಸುವುದು ಸೇರಿದಂತೆ ಹಲವಾರು ಪ್ರಮುಖ ಅಂಶಗಳ ಬಗ್ಗೆ ಕುಮಾರಸ್ವಾಮಿ ಅವರು ಕೃಷಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!