Mahatma Gandhi statue unveiled at Suvarna Vidhana Soudha premises

ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮಾ ಗಾಂಧೀಜಿ ಬೃಹತ್ ಪುತ್ಥಳಿ ಅನಾವರಣ

ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ (Mahatma Gandhi) ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ‌ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮಾ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು ಚರಕವನ್ಮು ತಿರುಗಿಸುವ ಮೂಲಕ ಮಂಗಳವಾರ (ಜ.21) ಅನಾವರಣಗೊಳಿಸಿದರು.

ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಮಲ್ಲಿಕಾರ್ಜುನ‌ ಖರ್ಗೆ ಅವರು, ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಗಾಂಧೀಜಿಯವರ ಪುತ್ಥಳಿಯ ಸ್ಥಾಪನೆಯಿಂದ ಈ ಭಾಗಕ್ಕೆ ಮಾತ್ರವಲ್ಲ; ಇಡೀ‌ ಕರ್ನಾಟಕಕ್ಕೆ‌ ಗೌರವ ತಂದಿದೆ ಎಂದು ಅಭಿಪ್ರಾಯಪಟ್ಟರು.

ಸಂವಿಧಾನ ಹಾಗೂ ಪ್ರಜಾತಂತ್ರ ಇಲ್ಲದಿದ್ದರೆ‌ ದೇಶದಲ್ಲಿ ಅರಾಜಕತೆ ಉಂಟಾಗುತ್ತಿತ್ತು. ಗಾಂಧೀಜಿವರು ದೇಶಕ್ಕೆ ನೀಡಿದ ಕೊಡುಗೆಯನ್ನು‌ ಈಗ ಎಲ್ಲರೂ ಸ್ಮರಿಸುತ್ತಿದ್ದಾರೆ.

ಗಾಂಧೀಜಿಯವರು ತಮ್ಮ ಅಧ್ಯಕ್ಷತೆಯಲ್ಲಿ 1924 ರಲ್ಲಿ‌ ಜರುಗಿದ‌ ಅಧಿವೇಶನದಲ್ಲಿ ಅಸ್ಪೃಶ್ಯತೆ‌ ನಿವಾರಣೆಗೆ ಕರೆ‌ ನೀಡಿದರು. ಆದ್ದರಿಂದ ಈ‌ ನೆಲ‌ವು ಐತಿಹಾಸಿಕ‌ ಮಹತ್ವವನ್ನು ಹೊಂದಿದೆ.

1924 ರಲ್ಲಿ ಕಾಂಗ್ರೆಸ್ ಅಧಿವೇಶನ‌ ನಡೆದ ಸ್ಥಳದಲ್ಲಿಯೇ ನೂರು ವರ್ಷದ ಬಳಿಕ ಪಕ್ಷದ ಕಾರ್ಯಕಾರಿಣಿ ಸಭೆ‌‌ ನಡೆಸಿರುವುದು ಅತ್ಯಂತ‌ ಮಹತ್ವದ್ದಾಗಿದೆ ಎಂದರು.

ಗುಲ್ಬರ್ಗದಲ್ಲೂ ಕೂಡ‌ ಮಹಾತ್ಮಾ‌ಗಾಂಧೀಜಿಯವರ ವಿಶೇಷ ಪುತ್ಥಳಿಯನ್ನು ಸ್ಥಾಪಿಸಲಾಗುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಗಾಂಧಿ ಬಗ್ಗೆ ತಪ್ಪು ಮಾಹಿತಿ ಹರಡಲಾಗುತ್ತಿದೆ

ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಗಾಂಧೀಜಿಯವರು 1924 ರಲ್ಲಿ‌ ಕಾಂಗ್ರೆಸ್‌ ನ ಐತಿಹಾಸಿಕ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು. ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕದಲ್ಲಿ ಅದರಲ್ಲೂ ಬೆಳಗಾವಿಯಲ್ಲಿ ನಡೆದಿರುವುದು ನಮಗೆಲ್ಲ ಹೆಮ್ಮೆಯ‌ ಸಂಗತಿ ಎಂದರು.

ಮಹಾತ್ಮಾ ಗಾಂಧೀಜಿಯವರು ಅಂದು ಅಸ್ಪೃಶ್ಯತೆ ನಿವಾರಣೆ, ಸಮಾನತೆ, ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣ ಕುರಿತು ಪ್ರತಿಪಾದನೆ ಮಾಡಿದ್ದರು.

ಗಾಂಧೀಜಿಯವರು ಸದಾ‌ ಶ್ರೀರಾಮನ ಸ್ಮರಣೆ‌‌ಮಾಡುತ್ತಿದ್ದರು. ಅವರು‌ ಅಪ್ಪಟ‌ ಹಿಂದೂ ಎಂಬುದಕ್ಕೆ‌ ಇದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ.

ಅವರು ಎಂದೂ ಹಿಂದೂ ವಿರೋಧಿಯಾಗಿರಲಿಲ್ಲ; ಆದರೆ ಹಿಂದೂ‌ ಧರ್ಮದಲ್ಲಿ ಸಮಾನತೆ‌ ಮತ್ತು‌ ಸಹೋದರತೆಯನ್ನು ಬಯಸಿದ್ದರು.
“ಹೇ ರಾಮ್‌” ಎನ್ನುತ್ತಲೇ ಕೊನೆಯುಸಿರೆಳೆದರು. ಅಂತಹ ಮಹಾನ್ ವ್ಯಕ್ತಿಯ ಬಗ್ಗೆ ತಪ್ಪು ಮಾಹಿತಿ ಹರಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೂಡ ಮಹಾತ್ಮಾ‌ ಗಾಂಧೀಜಿಯವರ ತತ್ವಗಳನ್ನು ಸಂವಿಧಾನದಲ್ಲಿ ಅಳವಡಿಸಿದ್ದಾರೆ.

ಸಂವಿಧಾನ‌ ದುರ್ಬಲಗೊಳಿಸುವ ಪ್ರಯತ್ನ ನಿರಂತರವಾಗಿ‌ ನಡೆದಿದೆ. ಅದಕ್ಕೆ‌ ನಾವು ಆಸ್ಪದ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆ ನೀಡಿದರು.

ಇಂದಿನ ಯುವಜನತೆಗೆ ಹಾಗೂ ಮುಂದಿನ ಪೀಳಿಗೆಗೆ ಗಾಂಧೀಜಿಯವರ ವಿಚಾರಧಾರೆಯನ್ನು ತಲುಪಿಸುವ ಉದ್ಧೇಶದಿಂದ ಪುತ್ಥಳಿಯನ್ನು ಸ್ಥಾಪಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್, “ಇದೊಂದು‌ ಐತಿಹಾಸಿಕ‌ ಕಾರ್ಯಕ್ರಮ; ಇದು ಕೇವಲ ಪುತ್ಥಳಿ ಅನಾವರಣ ಕಾರ್ಯಕ್ರಮ ಮಾತ್ರವಲ್ಲ. ಸ್ವಾತಂತ್ರ್ಯ ಯೋಧರಿಗೆ ಗೌರವಿಸುವ ಮತ್ತು ಸಂವಿಧಾನದ ಘನತೆ ಎತ್ತಿ ಹಿಡಿಯುವ ಪವಿತ್ರ ಕಾರ್ಯಕ್ರಮವಾಗಿದೆ” ಎಂದು ಅಭಿಪ್ರಾಯಪಟ್ಟರು.

ಏಕೀಕರಣ ಕೂಡ‌ ಗಾಂಧಿಜಿಯವರ ಪ್ರೇರಣೆ ದೊರೆತಿದೆ. ಏಕತೆ, ಸಮಾನತೆ‌ಕಾಪಾಡಿಕೊಂಡು ಗಾಂಧೀಜಿಯವರ ತತ್ವಾದರ್ಶಗಳನ್ನು ಪುನರ್ ಮನನ ಮಾಡಲು ಇದು ಸ್ಫೂರ್ತಿದಾಯಕವಾಗಿದೆ.

ಗಾಂಧೀಜಿಯವರ ತತ್ವಗಳನ್ನು ಬದಿಗಿಟ್ಟು ಸದೃಢ ಭಾರತ ನಿರ್ಮಾಣ ಅಸಾಧ್ಯ. ಆದ್ದರಿಂದ ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಎಲ್ಲರೂ ಒಗ್ಗೂಡಿಕೊಂಡು ಮುನ್ನಡೆಯಬೇಕಿದೆ.
ರಾಮರಾಜ್ಯ‌ ಮತ್ತು ಗ್ರಾಮರಾಜ್ಯ ಮಹಾತ್ಮಾ ಗಾಂಧೀಜಿಯವರ ಕನಸಾಗಿತ್ತು. ಪರಸ್ಪರ ಸಹೋದರತೆ, ತ್ಯಾಗ, ಪತ್ನಿಯ ತ್ಯಾಗವು ರಾಮರಾಜ್ಯದ‌ ನೈಜ ಪರಿಕಲ್ಪನೆಯಾಗಿದೆ ಎಂದು ಸಭಾಧ್ಯಕ್ಷರಾದ ಯು.ಟಿ.ಖಾದರ್ ಹೇಳಿದರು.

ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ಕಾನೂನು, ಸಂಸದೀಯ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ, ಮಹಾತ್ಮಾ ಗಾಂಧೀಜಿಯ ಪ್ರತಿಮೆ‌ ಅನಾವರಣ ಒಂದು ಅವಿಸ್ಮರಣೀಯ ಗಳಿಗೆಯಾಗಿದೆ.

ವಿಗ್ರಹವಲ್ಲ ಚೈತನ್ಯದ ಹರವು ಎಂದು ಬಣ್ಣಿಸಿದ ಅವರು, ಪ್ರತಿಮೆಯು ಗಾಂಧೀಜಿ ಅನುಯಾಯಿಗಳಿಗೆ ಪ್ರೇರಣೆಯಾಗಲಿದೆ. ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆ ವಹಿಸಿದ್ದ 1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವು ಗಾಂಧಿ ಭಾರತಕ್ಕೆ ದಾರಿದೀಪವಾಗಲಿದೆ ಎಂದರು.

ಕರ್ನಾಟಕ ವಿಧಾನಪರಿಷತ್ತಿನ ಸಭಾಪತಿಯವರಾದ ಬಸವರಾಜ ಹೊರಟ್ಟಿ, ಸಂಸದೆ ಪ್ರಿಯಾಂಕ ಗಾಂಧಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಕಾಂಗ್ರೆಸ್ ಪಕ್ಷದ ಮುಖಂಡರಾದ ಕೆ.ಸಿ. ವೇಣುಗೋಪಾಲ್, ರಂದೀಪ್ ಸಿಂಗ್ ಸುರ್ಜೇವಾಲಾ, ಜೈರಾಮ್ ರಮೇಶ್ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ರಾಜಕೀಯ

ದೆಹಲಿ ತೀರ್ಪು: ಸೋತ ಕೇಜ್ರಿವಾಲ್, ಕಾಂಗ್ರೆಸ್ಗೆ ಮುಖಭಂಗ.. BJP ಅಧಿಕಾರಕ್ಕೆ

ದೆಹಲಿ ತೀರ್ಪು: ಸೋತ ಕೇಜ್ರಿವಾಲ್, ಕಾಂಗ್ರೆಸ್ಗೆ ಮುಖಭಂಗ.. BJP ಅಧಿಕಾರಕ್ಕೆ

ಇದರೊಂದಿಗೆ ಕಳೆದ ಹತ್ತು ವರ್ಷಗಳ ಹಿಂದೆ ಕ್ಲೀನ್ ಇಮೇಜ್ ನೊಂದಿಗೆ ಸತತ ಎರಡು ಬಾರಿ ದೆಹಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್​ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿದೆ. AAP

[ccc_my_favorite_select_button post_id="102437"]
ಬಾಶೆಟ್ಟಿಹಳ್ಳಿ ಕೆರೆ ಗೋಡೆಯ ಮೇಲೆ ಬಣ್ಣಬಣ್ಣದ ಚಿತ್ತಾರ..!:  WWF ಇಂಡಿಯಾ ಸಂಸ್ಥೆಯಿಂದ ಪರಿಸರ ಮಾಹಿತಿ..

ಬಾಶೆಟ್ಟಿಹಳ್ಳಿ ಕೆರೆ ಗೋಡೆಯ ಮೇಲೆ ಬಣ್ಣಬಣ್ಣದ ಚಿತ್ತಾರ..!: WWF ಇಂಡಿಯಾ ಸಂಸ್ಥೆಯಿಂದ ಪರಿಸರ

ಕೆರೆಗೆ ಬರುವವರಿಗೆ ಮತ್ತು ಹಾದು ಹೋಗುವವರಿಗೆ ಕೆರೆಯ ಸಂರಕ್ಷಣಾ ಮಹತ್ವ ತಿಳಿಸುವ ಉದ್ದೇಶದಿಂದ, ಕೆರೆಯ ಜೀವವೈವಿದ್ಯತೆ, ಕೆರೆಗಳ ಮಹತ್ವ, ಕೆರೆಗಳಿಗೆ ಇರುವ ತೊಂದರೆಗಳು ಮತ್ತು ಚಿಟ್ಟೆಗಳ ಬಗ್ಗೆ WWF

[ccc_my_favorite_select_button post_id="102448"]
ಭಾರತೀಯರಿಗೆ ಅವಮಾನ: ಯುಎಸ್ ಪ್ರವಾಸ ರದ್ದುಗೊಳಿಸಿ.. ಮೋದಿಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಭಾರತೀಯರಿಗೆ ಅವಮಾನ: ಯುಎಸ್ ಪ್ರವಾಸ ರದ್ದುಗೊಳಿಸಿ.. ಮೋದಿಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಅಲ್ಲದೆ ಬಿಜೆಪಿಯ ಐಟಿ ಸೆಲ್ ಭಾರತೀಯರ ಕೈಕೋಳ ಮತ್ತು ಸರಪಳಿಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಅದಾನಿಯನ್ನು ಬಹುಪಾಲುಗಳಿಂದ ರಕ್ಷಿಸಲು ಮೋದಿಗೆ ಸಹಾಯ ಮಾಡಿದರೆ ಅದು ಸಹ ಭಾರತೀಯರನ್ನು ಅಪಹಾಸ್ಯ ಮಾಡುತ್ತದೆ ಎಂದಿರುವ ಟ್ವಿಟ್ಗೆ ಉತ್ತರ ನೀಡಿ,

[ccc_my_favorite_select_button post_id="102440"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
Doddaballapura: ಅಣ್ಣ ಸಾವನಪ್ಪಿದ್ದ ಮರದ ಬಳಿಯಲ್ಲೇ ತಮ್ಮ ಆತ್ಮಹತ್ಯೆ..!

Doddaballapura: ಅಣ್ಣ ಸಾವನಪ್ಪಿದ್ದ ಮರದ ಬಳಿಯಲ್ಲೇ ತಮ್ಮ ಆತ್ಮಹತ್ಯೆ..!

ಆತ್ಮಹತ್ಯೆಗೂ ಮುನ್ನಾ ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. Suicide

[ccc_my_favorite_select_button post_id="102462"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಸೆಲೆಬ್ರಿಟಿಗಳಿಗೆ ಕ್ಷಮೆ ಕೋರಿದ ದರ್ಶನ್.. ಕಾರಣವೇನು..? video ನೋಡಿ

ಸೆಲೆಬ್ರಿಟಿಗಳಿಗೆ ಕ್ಷಮೆ ಕೋರಿದ ದರ್ಶನ್.. ಕಾರಣವೇನು..? video ನೋಡಿ

ಜನ್ಮದಿನದ ಹಿನ್ನೆಲೆಯಲ್ಲಿ ವಿಡಿಯೋ ಮೂಲಕ ಸೆಲೆಬ್ರಿಟಿಗಳಿಗೆ ದರ್ಶನ್ ಸಂದೇಶ ನೀಡಿದ್ದಾರೆ. ಇದೇ ವೇಳೆ ಹಲವ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. Darshan

[ccc_my_favorite_select_button post_id="102428"]
error: Content is protected !!