ಪ್ರೀತಿ ಕೊಂದ ಕೊಲೆಗಾತಿಗೆ.. ಮರಣದಂಡನೆ..!

Murderer who killed love.. Death sentences

ತಿರುವನಂತಪುರಂ: ಕನ್ನಡದಲ್ಲಿ ಖ್ಯಾತ ನಟ ರವಿಚಂದ್ರನ್ ಮತ್ತು ಕಾಮಿನಿ ನಟನೆಯ ಯುಗಪುರುಷ ಸಿನಿಮಾ ಬಹುತೇಕರಿಗೆ ನೆನಪಿದೆ.

ಆ ಚಿತ್ರದಲ್ಲಿ ನಟಿ ಕಾಮಿನಿ ಆಕೆಯ ಪ್ರೀತಿಸಿ ಮದುವೆಯಾದ ರಾಮಕೃಷ್ಣ ಅವರನ್ನು ಆಸ್ತಿಯ ಆಸೆಗೆ ಹತ್ಯೆ ಮಾಡಿದಂತೆ, ಸೇನಾಧಿಕಾರಿಯೊಂದಿಗೆ ಮದುವೆಯಾಗಲು ಮನಸಾರೆ ಪ್ರೀತಿಸಿದ ಯುವಕನ ವಿಷ ಉಣಿಸಿ ಕೊಂದ ಪ್ರೇಯಸಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ.

ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆ ರಾಮವರ್ಮಂಚಿರದ ಗ್ರೀಷ್ಮಾಗೆ (24 ವರ್ಷ) ಪ್ರೇಮಿ ಶರೋನ್ ರಾಜ್‌ ಗೆ ವಿಷ ಕುಡಿಸಿ ಹತ್ಯೆ ಮಾಡಿದ ಆರೋಪದಡಿ ನೆಯ್ಯಟ್ಟಿಂಕರ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಸೋಮವಾರ ಮರಣದಂಡನೆ ಶಿಕ್ಷೆ ವಿಧಿಸಿದೆ.

ನ್ಯಾಯಾಧೀಶರಾದ ಎ.ಎಂ. ಬಶೀರ್ ಅವರು, ಇದು ಅಪರೂಪದ ಪ್ರಕರಣವಾಗಿದೆ. ಪೂರ್ವನಿಯೋಜಿತ ಸಂಚು ನಡೆಸಿ ಕೊಲೆ ಮಾಡಲಾಗಿದೆ. ಅಪರಾಧಿ ಯಾವುದೇ ವಿನಾಯಿತಿಗೆ ಅರ್ಹಳಲ್ಲ. ಅಪರಾಧಿಯ ವಯಸ್ಸು-ಶೈಕ್ಷಣಿಕ ಅರ್ಹತೆ ಯಾವುದನ್ನೂ ಶಿಕ್ಷೆ ವಿಧಿಸುವ ವಿಚಾರದಲ್ಲಿ ಪರಿಗಣಿಸಲಾಗದು.

ಯುವತಿ ಪ್ರೀತಿಯ ಪಾವಿತ್ರ್ಯವನ್ನು ಹಾಳುಗೆಡವಿದ್ದಾಳೆ. ಆಕೆ ನಡೆಸಿದ ಅಪರಾಧ ಕೃತ್ಯ ಸಮಾಜಕ್ಕೆ ತಪ್ಪು ಸಂದೇಶ ರವಾನಿಸುವಂತದ್ದಾಗಿದೆ. ಹಾಗಾಗಿ ಅಪರಾಧಿಗೆ ಮರಣದಂಡನೆಯೇ ಸರಿಯಾದ ಶಿಕ್ಷೆಯಾಗಿದೆ ಎಂದು ತೀರ್ಪು ಪ್ರಕಟಿಸಿದರು.

ತೀರ್ಪು ಆಲಿಸಲು ಶರೋನ್ ಪೋಷಕರನ್ನೂ ನ್ಯಾಯಾಲಯ ಕರೆಸಿತ್ತು. ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಪೋಷಕರು ಕಣ್ಣೀರಾದರು.

ವಿಷವುಣಿಸಿ ಹತ್ಯೆ, ಬಳಿಕ ಸಾಕ್ಷ್ಯ ನಾಶ ಸೇರಿ ಎಲ್ಲಾ ಆರೋಪಗಳಲ್ಲಿಯೂ ಗ್ರೀಷ್ಮಾ ತಪ್ಪಿತಸ್ಥಳು ಎಂದು ನ್ಯಾಯಾಲಯ ಈ ಮೊದಲೇ ಘೋಷಿಸಿತ್ತು. ಸಾಕ್ಷ್ಯ ನಾಶ ಮಾಡಿದ್ದಕ್ಕಾಗಿ ಗ್ರೀಷ್ಮಾಳ ಚಿಕ್ಕಪ್ಪ ನಿರ್ಮಲಕುಮಾರನ್ ನಾಯರ್‌ಗೂ 3 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಸಾಕ್ಷ್ಯಾಧಾರ ಕೊರತೆ ಕಾರಣ ಗ್ರೀಷ್ಮಾ ತಾಯಿ ಸಿಂಧುವನ್ನು ಈ ಹಿಂದೆಯೇ ಆರೋಪ ಮುಕ್ತಗೊಳಿಸಲಾಗಿದೆ.

ಸಿಂಧು ಖುಲಾಸೆಗೊಂಡಿರುವುದಕ್ಕೆ ಅಸಮಾಧಾನಗೊಂಡಿರುವ ಶರೋನ್ ಪೋಷಕರು, ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.

2022ರ ಶರೋನ್ ರಾಜ್ ಹತ್ಯೆ ಪ್ರಕರಣ

ಬಿಎಸ್‌ಸಿ ರೇಡಿಯಾಲಜಿ ವಿದ್ಯಾರ್ಥಿ ಶರೋನ್ ರಾಜ್ (23) ಮತ್ತು ಗ್ರೀಷ್ಮಾ ಮಧ್ಯೆ 2021ರಲ್ಲಿ ಪ್ರೀತಿಯಾಗಿತ್ತು.

ಬಳಿಕ ನಾಗರಕೋಯಿಲ್‌ ಸೇನಾಧಿಕಾರಿ ಜತೆ ಮದುವೆ ಪ್ರಸ್ತಾಪ ಬಂದಾಗ ಗ್ರೀಷ್ಮಾ, ಆವರೆಗೂ ಪ್ರೀತಿಸಿದ್ದ ಶರೋನನ್ನು ದೂರ ಮಾಡಿಕೊಳ್ಳಲು ಸಂಚು ರೂಪಿಸಿದಳು.

ಪ್ರೀತಿ ಕೊಂದ ಕೊಲೆಗಾತಿಗೆ.. ಮರಣದಂಡನೆ..!

ಆನಾರೋಗ್ಯದಿಂದ 2022ರ ಅ.14ರಂದು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ ಶರೋನ್‌ಗೆ ಗ್ರೀಷ್ಠಾ, ಆಯುರ್ವೇದ ಔಷಧಕ್ಕೆ ಕಳೆನಾಶಕ ಪ್ಯಾರಾಕ್ವಾಟ್ ಡೈಕ್ಲೋರೈಡ್ ಮಿಶ್ರಣ ಮಾಡಿ ಕುಡಿಸಿ ಸಾವಿಗೆ ಕಾರಣಳಾಗಿದ್ದಳು ಎಂದು ವರದಿಯಾಗಿದೆ.

ರಾಜಕೀಯ

ಸಿಎಂ ಬದಲಾವಣೆ ವರಿಷ್ಠರ ತೀರ್ಮಾನಕ್ಕೆ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿಎಂ ಬದಲಾವಣೆ ವರಿಷ್ಠರ ತೀರ್ಮಾನಕ್ಕೆ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು, ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ತಿಳಿಸಿದರು.

[ccc_my_favorite_select_button post_id="121818"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]