ದೊಡ್ಡಬಳ್ಳಾಪುರ Police: ಕಳೆದ ವಾರ ಬೀದರ್ ಹಾಗೂ ಮಂಗಳೂರಿನಲ್ಲಿ ಸಿನಿಮಾ ರೀತಿಯಲ್ಲಿ ದರೋಡೆಕೋರರು ಬ್ಯಾಂಕ್‌ನಲಿದ್ದ ಹಣ, ಚಿನ್ನ ದೋಚಿ ಪರಾರಿಯಾಗಿದ್ದಾರೆ.
ಇದರ ಬೆನ್ನಲ್ಲೆ ಎಚ್ಚೆತ್ತ ದೊಡ್ಡಬೆಳವಂಗಲ ಪೊಲೀಸ್ ಇನ್ಸ್ಪೆಕ್ಟರ್ ಕಲ್ಲಪ್ಪ ಎಸ್ ಖರಾತ್ ಹಾಗೂ ಸಿಬ್ಬಂದಿಗಳು, ಠಾಣೆ ವ್ಯಾಪ್ತಿಯಲ್ಲಿನ ವಿವಿಧ ಬ್ಯಾಂಕುಗಳಿಗೆ ಭೇಟಿ ನೀಡಿ ಸುರಕ್ಷತಾ ಕ್ರಮಗಳನ್ನು ಪರಿಶೀಲನೆ ನಡೆಸಿದರು.
ಬೀದರ್, ಮಂಗಳೂರಿನಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಬೆನ್ನಲ್ಲೇ ದೊಡ್ಡಬೆಳವಂಗಲ ಪೊಲೀಸರು ಅಲರ್ಟ್ ಆಗಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಇನ್ಸ್ಪೆಕ್ಟರ್ ಕಲ್ಲಪ್ಪ ಎಸ್ ಖರಾತ್ ಹಾಗೂ ಸಿಬ್ಬಂದಿಗಳು, ಮಧುರೆ, ಸಾಸಲು, ದೊಡ್ಡಬೆಳವಂಗಲ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ಗಳಿಗೆ ತೆರಳಿ, ಭದ್ರತೆ ಪರಿಶೀಲನೆ ನಡೆಸಿದ್ದಲ್ಲದೆ ಸಿಬ್ಬಂದಿಗಳ ಸಭೆ ನಡೆಸಿ, ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.

ಎರಡು ಜಿಲ್ಲೆಗಳಲ್ಲಿ ನಡೆದ ದರೋಡೆ ಪ್ರಕರಣಗಳು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿವೆ. ದೊಡ್ಡಬೆಳವಂಗಲ ವ್ಯಾಪ್ತಿಯಲ್ಲಿ ಅಂತಹ ಯಾವುದೇ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ.
ಬ್ಯಾಂಕ್ ಮತ್ತು ಎಟಿಎಂಗಳ ಬಳಿ ಎಷ್ಟು ಜನ ಸೆಕ್ಯುರಿಟಿ ಇರುತ್ತಾರೆ, ರಾತ್ರಿ ಹಾಗೂ ಬೆಳಗಿನ ಪಾಳಿಯಲ್ಲಿ ಎಷ್ಟು ಮಂದಿ ಇರುತ್ತಾರೆ ಹಾಗೂ ಬ್ಯಾಂಕ್, ಎಟಿಎಂಗಳ ಬಳಿ ಸಿಸಿಟಿವಿ ಕ್ಯಾಮರಾ ಸರಿ ಇದೆಯಾ ಎನ್ನುವ ಎಂಬ ಬಗ್ಗೆ ಮಾಹಿತಿ ಪಡೆಯಲು ಕಲ್ಲಪ್ಪ ಎಸ್ ಖರಾತ್ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
