ಬೆಂಗಳೂರು: ಒಂದೆಡೆ ತನ್ನದೇ ಪಕ್ಷದ (BJP) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Yatnal) ಅವರಿಗೆ ಕರ್ನಾಟಕ ಕಾಂಗ್ರೆಸ್ ಶಾಕ್ ನೀಡಿದೆ.
ಮಾಜಿ ಪ್ರಧಾನಿ ಜವಾಹರ ಲಾಲ್ ನೆಹರೂ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆಂದು ಆರೋಪಿಸಿ ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ.
ಮುಂಚೂಣಿ ಸ್ವಾತಂತ್ರ್ಯ ಹೋರಾಟಗಾರ, ಹಿರಿಯ ಕಾಂಗ್ರೆಸ್ ನಾಯಕ, ದೇಶದ ಮೊದಲ ಪ್ರಧಾನಿಗಳಾದ ಜವಾಹರ ಲಾಲ್ ನೆಹರು ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ‘ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ’ ಅವರನ್ನು ಕೊಲ್ಲಿಸಿದ್ದು ನೆಹರೂ ಎನ್ನುವ ಮೂಲಕ ಯತ್ನಾಳ್ ಅಕ್ಷಮ್ಯ ಹೇಳಿಕೆ ನೀಡಿದ್ದಾರೆ.
ಇವರ ಆಧಾರ ರಹಿತ ಹೇಳಿಕೆ ದೇಶ ಹಾಗೂ ರಾಜ್ಯದ ಜನರಲ್ಲಿ ತಪ್ಪು ಕಲ್ಪನೆ ಉಂಟಾಗುತ್ತದೆ.
ಯತ್ನಾಳ್ ಅವರನ್ನು ಈ ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.