Tableau of Karnataka in Delhi Republic Day

ದೆಹಲಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರ; ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ Video

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲು ಸ್ತಬ್ಧಚಿತ್ರವು (tableau) ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ Video.

ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‍ಪಥ್) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ.

ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ.

ನಮ್ಮ ರಾಜ್ಯವು ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಲು ಹೊರಟಿದೆ ಎಂದು ಇಂದು ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್, ಐಪಿಎಸ್ ಅವರು ನುಡಿದರು.

ಕರ್ನಾಟಕಕ್ಕೆ ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರವು ಅತ್ಯಂತ ಸ್ಮರಣೀಯವಾದುದು. ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುವ ನಮ್ಮ ರಾಜ್ಯದಲ್ಲಿ ಎಲ್ಲಾ ಧರ್ಮಗಳ ದೇವಾಲಯಗಳಿವೆ.

ಈ ಪೈಕಿ ಐತಿಹಾಸಿಕ ಪಟ್ಟಣವಾದ ಗದಗದ ಲಕ್ಕುಂಡಿಯು ಒಂದಾಗಿದೆ. ಅಹಿಂಸಾವಾದಿಯ ನೆಲೆಬೀಡು. ಶಿಲ್ಪಕಲೆಯ ತೊಟ್ಟಿಲಾದ ಲಕ್ಕುಂಡಿಯಲ್ಲಿ ಶೈವ, ಜೈನ ಮತ್ತು ವೈಷ್ಣವ ದೇವಾಲಯಗಳಿವೆ.

ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಈ ಬಾರಿಯ ಸ್ತಬ್ಧಚಿತ್ರದಲ್ಲಿ ಅವುಗಳ ಪಡಿಯಚ್ಚಿನಂತೆ ಮೂಡಿಬಂದಿವೆ. ಜೊತೆಗೆ, ದೇವಾಲಯವೇ ಮರುಜೀವ ತಳೆದಂತಿದೆ.

ರಾಜ್ಯವು ಪ್ರಸ್ತುತ ಪಡಿಸುತ್ತಿರುವ ಈ ಸ್ತಬ್ಧಚಿತ್ರವು ಇದೇ ಜನವರಿ 26 ರಂದು ಎಲ್ಲರ ಮನಸೂರೆಗೊಳ್ಳಲಿದೆ ಎನ್ನುವ ವಿಶ್ವಾಸ ಹೊಂದಿರುವುದಾಗಿ ವಾರ್ತಾ ಇಲಾಖೆಯ ಆಯುಕ್ತರು ತಿಳಿಸಿದರು.

ದೆಹಲಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರದ ವಿಷಯದ ಆಯ್ಕೆ, ವಿನ್ಯಾಸ, ಕೇಂದ್ರ ಸರ್ಕಾರ ರಕ್ಷಣಾ ಇಲಾಖೆಯಲ್ಲಿ ಅದರ ಅನುಮೋದನೆ, ನಿರ್ಮಾಣ, ಪಾಲ್ಗೊಳ್ಳುವಿಕೆ ಹೀಗೆ ಎಲ್ಲಾ ಹಂತಗಳಲ್ಲೂ ‘ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೇ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ.

ಇಲಾಖೆಯು ಕಳೆದ 15 ವರ್ಷಗಳಿಂದ ನಿರಂತರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಪ್ರದರ್ಶನದಲ್ಲಿ ಪಾಲ್ಗೊಳ್ಳುತ್ತಿದೆ. ಇದು ಕನ್ನಡಿಗರೆಲ್ಲರೂ ಹೆಮ್ಮೆ ಪಡುವ ಸಂಗತಿ ಎಂದು ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್, ಅವರು ತಮ್ಮ ಸಂತಸವನ್ನು ಹಂಚಿಕೊಂಡರು.

2025ರ ಜನವರಿ 26ರಂದು ನಡೆಯುವ ದಹೆಲಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸುವ ಸ್ತಬ್ಧಚಿತ್ರಕ್ಕಾಗಿ ಇಲಾಖೆಯು

  1. ಲಕ್ಕುಂಡಿ : ಶಿಲ್ಪಕಲೆಯ ತೊಟ್ಟಿಲು (The Cradle of Stone Craft)
  2. ಮೆಕ್ಕೆಕಟ್ಟು : ಮರಕೆತ್ತನೆಯ ದೈವ ನಿಧಿ
  3. ಕರ್ನಾಟಕದ ಸಮೃದ್ದಿಯ ಆಚರಣೆಗಳು ಮತ್ತು
  4. ಕರ್ನಾಟಕ ಒಂದು ರಾಜ್ಯ ಹಲವು ಜಗತ್ತು (“Wood Carved Treasures of Divinity) ಎಂಬ ನಾಲ್ಕು ವಿಷಯಗಳನ್ನು ಆಯ್ಕೆ ಮಾಡಿಕಳುಹಿಸಿತ್ತು.

ಮೊದಲ ಸಭೆಯಲ್ಲಿಯೇ ಲಕ್ಕುಂಡಿ

ಶಿಲ್ಪಕಲೆಯ ತೊಟ್ಟಿಲು ಎಂಬ ವಿಷಯವನ್ನು ಪರಿಣತರ ಸಮಿತಿಯು ಒಮ್ಮತದಿಂದ ಅಂತಿಮಗೊಳಿಸಿತ್ತು.

ಅದಕ್ಕನುಗಣವಾಗಿ ಈ ಬಾರಿಯ ಸ್ತಬ್ಧಚಿತ್ರದಲ್ಲಿ ಲಕ್ಕುಂಡಿಯ ದೇವಾಲಯಗಳು ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತಿವೆ ಎಂದು ನಿಂಬಾಳ್ಕರ್ ಅವರು ತಿಳಿಸಿದರು.

ಸವಾಲು

ವಿಷಯ ಆಯ್ಕೆಯ ಬಳಿಕ ಲಕ್ಕುಂಡಿಯ ಶಿಲ್ಪಕಲೆಯ ವೈಭವವನ್ನು ಅದರ ಪ್ರತಿರೂಪದಂತೆ ಕೆತ್ತುವ ಬೃಹತ್ ಸವಾಲು ಎದುರಾಗಿತ್ತು.

ಕರ್ನಾಟಕದ ಬಗೆಗಿನ ಅಭಿಮಾನ, ನಾಡಿನ ಹಿರಿಮೆ ಹಾಗೂ ಸಂಸ್ಕೃತಿಯ ಮಹತ್ವವನ್ನು ಎತ್ತಿಹಿಡಿಯುವ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರೋತ್ಸಾಹದ ನುಡಿಗಳೇ ಈ ಸವಾಲಿನ ಕೆಲಸಕ್ಕೆ ಮುನ್ನುಡಿ ಬರೆದಿತ್ತು.

ಪ್ರವಾಸೋದ್ಯಮ ಮತ್ತು ಗದುಗಿನ ಉಸ್ತುವಾರಿ ಸಚಿವ ಹೆಚ್.ಕೆ. ಪಾಟೀಲ್ ಅವರ ಮಾರ್ಗದರ್ಶನ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆಯ ಕಾರ್ಯದರ್ಶಿ ಬಿ.ಬಿ. ಕಾವೇರಿ ಅವರ ಸಲಹೆ ಸೂಚನೆಗಳು ಸ್ತಬ್ಧಚಿತ್ರದ ಕೆಲಸವನ್ನು ಸುಗಮವಾಗಿಸಿತ್ತು ಎಂದು ವಾರ್ತಾ ಇಲಾಖೆಯು ಆಯುಕ್ತರು ಹೇಳಿದರು.

ಗದಗದ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಡಾ. ಶರಣು ಗೋಗೇರಿ ಅವರು ಒದಗಿಸಿದ ಛಾಯಾಚಿತ್ರಗಳು ಮತ್ತು ಮಾಹಿತಿ ಸೇರಿದಂತೆ ವಿಷಯ ಪರಿಣತರು – ತಜ್ಞರು, ಕಲಾನಿರ್ದೇಶಕರು ಮತ್ತು ಕಲಾವಿದರೊಂದಿಗೆ ಪರಾಮರ್ಶಿಸಿಕೊಂಡು ಇಲಾಖೆಯು ಈ ಕೆಲಸವನ್ನು ಕೈಗೆತ್ತಿಕೊಂಡಿತ್ತು.

ಹಾಕಿಕೊಂಡ ಕಾರ್ಯತಂತ್ರದ ರೂಪು ರೇಷೆಗಳಂತೆ ಈ ಸ್ತಬ್ಧಚಿತ್ರ ದಿನಗಳ ಲೆಕ್ಕದಲ್ಲಿ ಮೈದಳೆದಿದೆ. ಕಡಿಮೆ ಅವಧಿಯಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಸ್ತಬ್ಧಚಿತ್ರ ಕಣ್ಣಿಗೆ ಕಟ್ಟುವ ರೀತಿಯಲ್ಲಿ ಮೂಡಿ ಬಂದಿದೆ.

ಇದಕ್ಕಾಗಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕೈಜೋಡಿಸಿದ ಎಲ್ಲರನ್ನೂ ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ.

ಆರಂಭದಲ್ಲಿ ದೆಹಲಿಯಲ್ಲಿ ಕವಿದಿದ್ದ ದಟ್ಟ ಮಂಜು, ಹೊಂಜು ಮತ್ತು ಮಳೆ ಎಲ್ಲವೂ ಸವಾಲುಗಳು ಕಂಡಿದ್ದವು. ಇಂದು ಅವುಗಳೆಲ್ಲವೂ ಈ ನಮ್ಮ ಸ್ತಬ್ಧಚಿತ್ರದಲ್ಲಿ ಕರಗಿ ಹೋಗಿವೆ.

ಜೀವಕಳೆಯಿಂದ ಕೂಡಿರುವ ಸ್ತಬ್ಧಚಿತ್ರವನ್ನು ರಾಜ್ಯದ ಪರವಾಗಿ ಪ್ರದರ್ಶಿಸಿಸುತ್ತಿರುವುದಕ್ಕೆ ಹೆಮ್ಮೆ ಎನಿಸುತ್ತದೆ ಎಂದು ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ತಮ್ಮ ಸಂತಸವನ್ನು ಹಂಚಿಕೊಂಡರು.

ವಿಷಯ ಆಯ್ಕೆಯ ಬಳಿಕ, ಸ್ತಬ್ಧಚಿತ್ರದ ಮಾದರಿ (ಕೀ ಮಾಡಲ್) ಮತ್ತು ಸಂಗೀತದ ಹಂತವನ್ನು ದಾಟಬೇಕಾಗಿತ್ತು.

ಅಂತರರಾಷ್ಟ್ರೀಯ ಖ್ಯಾತಿಯ ಕಲಾನಿರ್ದೇಶಕ ಶಶಿಧರ ಅಡಪ ಅವರು ವಿನ್ಯಾಸ ಮಾಡಿಕೊಟ್ಟ ಮಾದರಿಗೆ ಆಯ್ಕೆ ಸಮಿತಿ ಮೊದಲ ಹಂತದಲ್ಲೇ ಅನುಮೋದನೆ ನೀಡಿತ್ತು.

ಸಂಗೀತ

ಸಂಗೀತ ನಿರ್ದೇಶಕ ಪ್ರವೀಣ್ ಡಿ. ರಾವ್ ಅವರ ಕನ್ನಡ ಸಂಗೀತವನ್ನು ಹಾಗೆಯೇ ಉಳಿಸಿಕೊಂಡಿದೆ. ಮೈಸೂರು, ಬೆಂಗಳೂರು, ಗದಗ ಮತ್ತು ಧಾರವಾಡದ ಕಲಾವಿದರಿಂದ ಕೂಡಿರುವ 18 ಮಂದಿ ತಂಡವನ್ನು ಜಗ್ಗಲಿಗೆ ಕಲಾವಿದರಾದ ಲಿಂಗಯ್ಯ ಅವರು ಮುನ್ನಡೆಸುತ್ತಾರೆ.

ಸ್ತಬ್ಧಚಿತ್ರದ ಇಕ್ಕೆಲಗಳಲ್ಲಿ ತಲಾ ನಾಲ್ಕು ಮಂದಿ ಮಹಿಳೆಯರು ಮತ್ತು ಪುರುಷರು ಜಗ್ಗಲಿಗೆ ಬಾರಿಸುತ್ತಾ ಮುನ್ನಡೆಯಲಿದ್ದಾರೆ.

ಇನ್ನುಳಿದ 10 ಮಂದಿ ಸ್ತಬ್ಧಚಿತ್ರದ ಮೇಲುಭಾಗದಲ್ಲಿ ಪ್ರವಾಸಿಗರಾಗಿ ಕಾಣಿಸಿಕೊಳ್ಳಲಿದ್ದಾರೆ.

ಸ್ತಬ್ಥಚಿತ್ರದಲ್ಲಿ ಏನಿರಲಿದೆ: ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಅದರ ಅದ್ಭುತ ಕಲ್ಲಿನ ವಾಸ್ತುಶಿಲ್ಪಕ್ಕಾಗಿ ಶಿಲ್ಪಕಲೆಯ ತೊಟ್ಟಿಲು ಎಂದು ಕರೆಯಲಾಗುತ್ತದೆ.

ಇಲ್ಲಿನ ಸುಂದರವಾದ ದೇವಾಲಯಗಳು, ಮೆಟ್ಟಿಲು ಬಾವಿಗಳು ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ. ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರ ಜೊತೆಗೆ, 10 ರಿಂದ 12 ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು.

ಈ ನಗರವು ಹಲವಾರು ರಾಜವಂಶಗಳಿಂದ ಆಳಲ್ಪಟ್ಟಿತ್ತಾದರೂ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಚಾಲುಕ್ಯರ ರಾಜವಂಶ.

ಲಕ್ಕುಂಡಿಯು ಪ್ರಾಚೀನಾನ್ವೇಷಕರು ಮತ್ತು ವಾಸ್ತುಶಿಲ್ಪ ಪ್ರಿಯರ ಸ್ವರ್ಗವಾಗಿದೆ. ಇದು 50 ದೇವಾಲಯಗಳನ್ನು ಹೊಂದಿದ್ದು, ಅವುಗಳಲ್ಲಿ ಹೆಚ್ಚಿನವು ಶಿವನಿಗೆ ಸಮರ್ಪಿತವಾಗಿವೆ.

101 ಮೆಟ್ಟಿಲು ಬಾವಿಗಳು (ಕಲ್ಯಾಣಿ, ಪುಷ್ಕರಣಿ); ಮತ್ತು 29 ಶಾಸನಗಳು ಇಲ್ಲಿವೆ. ಇವುಗಳು ಕಲ್ಯಾಣಿ ಚಾಲುಕ್ಯರ ಕಲೆ, ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಯ ಸಂಕೇತವಾಗಿದೆ.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಿರ್ವಹಿಸುತ್ತಿರುವ ವಸ್ತುಸಂಗ್ರಹಾಲಯವು ಲಕ್ಕುಂಡಿಯ ಶ್ರೀಮಂತ ಶಿಲ್ಪಕಲೆಯನ್ನು ಪ್ರದರ್ಶಿಸುತ್ತಿದೆ.

ಸ್ತಬ್ಧಚಿತ್ರದ ಮುಂಭಾಗವು ಬ್ರಹ್ಮ ಜಿನಾಲಯ ದೇವಸ್ಥಾನದ ಬ್ರಹ್ಮನ ಪ್ರತಿಮೆಯನ್ನು ಹೊಂದಿದೆ. ಇದು ಲಕ್ಕುಂಡಿಯಲ್ಲಿರುವ ಅತ್ಯಂತ ಹಳೆಯ ಜೈನ ದೇವಾಲಯವಾಗಿದ್ದು ಭಗವಾನ್ ಮಹಾವೀರನಿಗೆ ಸಮರ್ಪಿತವಾಗಿದೆ.

ಅದರ ನಂತರ ಬ್ರಹ್ಮ ಜಿನಾಲಯ ದೇವಸ್ಥಾನದ ತೆರೆದ ಕಂಬದ ಮಂಟಪವಿದೆ.

ಸ್ತಬ್ಧಚಿತ್ರದ ಮುಖ್ಯ ವಿಭಾಗವು ಭವ್ಯವಾದ ಮತ್ತು ಅಲಂಕೃತವಾದ ಕಾಶಿ ವಿಶ್ವೇಶ್ವರ ದೇವಸ್ಥಾನ ಮತ್ತು ಶಿವನಿಗೆ ಸಮರ್ಪಿತವಾದ ನನ್ನೇಶ್ವರ ದೇವಸ್ಥಾನವನ್ನು ಪ್ರದರ್ಶಿಸುತ್ತದೆ.

ತೀವ್ರ ಪೈಪೋಟಿ

ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಸ್ತಬ್ಧಚಿತ್ರದೊಂದಿಗೆ ಭಾಗವಹಿಸುವುದು ಪ್ರತಿ ರಾಜ್ಯಕ್ಕೂ ಹೆಮ್ಮೆಯ ಮತ್ತು ಪ್ರತಿಷ್ಠೆಯ ಸಂಕೇತ.

ಹಿಂದೆ ಎಲ್ಲಾ ರಾಜ್ಯಗಳಿಗೂ ಪಥಸಂಚಲನದಲ್ಲಿ ಭಾಗವಹಿಸಲು ಅವಕಾಶವಿತ್ತು. ಭದ್ರತೆ ಮತ್ತು ಗಣರಾಜ್ಯೋತ್ಸವದ ಅವಧಿಯಲ್ಲಿ ಮಾಡಿದ ಇಳಿಕೆ, ಪ್ರಾತಿನಿಧ್ಯತೆಯಿಂದಾಗಿ ಸ್ತಬ್ಧಚಿತ್ರಕ್ಕಾಗಿ ಪ್ರತಿನಿಧಿಸುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಂಖ್ಯೆಯನ್ನು ರಕ್ಷಣಾ ಸಚಿವಾಲಯ 15ಕ್ಕೆ ಇಳಿಸಿದೆ.

ಇದು ತೀವ್ರ ಪೈಪೋಟಿಗೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಗುಣಮಟ್ಟಕ್ಕೆ, ವಿನ್ಯಾಸಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಸ್ತಬ್ಧಚಿತ್ರಕ್ಕಾಗಿ ಪ್ರಶಸ್ತಿ ಪಡೆದುಕೊಳ್ಳುವುದಕ್ಕಿಂತಲೂ ಪಥಸಂಚಲನದಲ್ಲಿ ಭಾಗವಹಿಸುವುದೇ ಪ್ರತಿಷ್ಠೆಯ ಸಂಕೇತವಾಗಿದೆ. ಇಂತಹ ಕಠಿಣ ಪರೀಕ್ಷೆಯಲ್ಲಿ ಕರ್ನಾಟಕವು 15 ಬಾರಿ ಭಾಗವಹಿಸಿ, ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.

ಪ್ರಶಸ್ತಿಗಳ ಸರಮಾಲೆ

2022ರ ಇಲಾಖೆಯು ಪ್ರದರ್ಶಿಸಿದ್ದ ಸಾಂಪ್ರದಾಯಿಕ ಕಸೂತಿ ತೊಟ್ಟಿಲುಗೆ ದ್ವಿತೀಯ ಪ್ರಶಸ್ತಿ, 2015ರಲ್ಲಿ ರಾಜ್ಯವು ಚನ್ನಪಟ್ಟದ ಗೊಂಬೆಗಳಿಗೆ ತೃತೀಯ, 2012ರಲ್ಲಿ ದಕ್ಷಿಣ ಕನ್ನಡ ಭೂತಾರಾಧನೆಗೆ ತೃತೀಯ, 2011ರಲ್ಲಿ ಬೀದರ್‍ನ ಪಾರಂಪರಿಕ ಕಲೆಯಾದ ಬಿದರಿ ಸ್ತಬ್ಧಚಿತ್ರಕ್ಕೆ ದ್ವಿತೀಯ ಮತ್ತು 2008ರಲ್ಲಿ ಹೋಯ್ಸಳ ವಾಸ್ತುಶಿಲ್ಪಕ್ಕೆ ದ್ವಿತೀಯ ಪ್ರಶಸ್ತಿ ಸಂದಿತ್ತು.

2005ರಲ್ಲಿ ವೈರಾಗ್ಯ ಮೂರ್ತಿ ಬಾಹುಬಲಿಯ ಮಹಾಮಸ್ತಕಾಭಿಷೇಕದ ಸ್ತಬ್ಧಚಿತ್ರಕ್ಕೆ ಪ್ರಥಮ ಪ್ರಶಸ್ತಿ ದೊರೆತಿತ್ತು.

2008ರಲ್ಲಿ ಹೊಯ್ಸಳ ಕಲೆಯ ಸ್ತಬ್ಧಚಿತ್ರವು ದ್ವಿತೀಯ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ನಿರೂಪಣೆ ಮತ್ತು ಅತ್ಯುತ್ತಮ ಫ್ಯಾಬ್ರಿಕೇಷನ್ಗಾ ಗಿ ಪ್ರಶಸ್ತಿ ಲಭಿಸಿತ್ತು.

ಒಂದೇ ಸ್ತಬ್ಧಚಿತ್ರಕ್ಕಾಗಿ ಮೂರು ಪ್ರಶಸ್ತಿಗಳನ್ನು ಪಡೆದಂತಹ ಅಪರೂಪದ ಸಾಧನೆಯನ್ನು ನಮ್ಮ ರಾಜ್ಯವು ಮಾಡಿದೆ ಎನ್ನುವುದು ಹೆಮ್ಮೆಯ ಸಂಗತಿ.

ಹೆಚ್ಚಿನ ಮತ್ತು ಪೂರಕ ಮಾಹಿತಿಗಾಗಿ: ಹೇಮಂತ್ ಎಂ ನಿಂಬಾಳ್ಕರ್, ಐಪಿಎಸ್, ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (94481 10100), ಸಿ. ಆರ್. ನವೀನ್, ಸ್ತಬ್ಧಚಿತ್ರದ ನೋಡಲ್ ಅಧಿಕಾರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (94480 58775), ಶಶಿಧರ ಅಡಪ, ಅಂತರರಾಷ್ಟ್ರೀಯ ಕಲಾನಿರ್ದೇಶಕ, ಸತೀಶ್ ರೈ, ಪ್ರತಿರೂಪಿ ಸಂಸ್ಥೆ (9448497073, 9448497076).

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!