ಉತ್ತರ ಕನ್ನಡ: ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪಲ್ಟಿಯಾಗಿ (Accident) 10 ಜನ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ.
ಘಟನೆಯಲ್ಲಿ 13 ಜನರಿಗೆ ಗಂಭೀರ ಗಾಯಗಳಾಗಿವೆ.
ಲಾರಿಯು ಸವಣೂರಿನಿಂದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಕಡೆ ಹೋಗುತ್ತಿದ್ದು, ಮೃತರು ಲಾರಿಯಲ್ಲಿ ಕುಮಟಾ ಸಂತೆ ಮಾರುಕಟ್ಟೆ ತರಕಾರಿ ವ್ಯಾಪಾರಕ್ಕಾಗಿ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಮೃತರು ಸವಣೂರು ತಾಲೂಕಿನವರು ಎನ್ನಲಾಗಿದ್ದು, ಲಾರಿಯಲ್ಲಿ ಒಟ್ಟು 28 ಜನ ಪ್ರಯಾಣಿಸುತ್ತಿದ್ದರು.
ಘಟನೆ ಬಗ್ಗೆ ಯಲ್ಲಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಪರಿಹಾರ ಘೋಷಣೆ
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು.
— CM of Karnataka (@CMofKarnataka) January 22, 2025
ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು.
ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ…
ಅಲ್ಲದೆ ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು.
ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಸಿಎಂ ಮಾಡಿದ್ದಾರೆ.
ಸಂತಾಪ
ಇನ್ನೂ ಎರಡು ಪ್ರತ್ಯೇಕ ಅಪಘಾತದಲ್ಲಿ 13 ಮಂದಿ ಸಾವನಪ್ಪಿರುವ ಕುರಿತು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ, ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಸಂಭವಿಸಿರುವ ಎರಡು ಭೀಕರ ಅಪಘಾತಗಳಲ್ಲಿ 14 ಜನ ಸಾವನ್ನಪ್ಪಿರುವ ವಾರ್ತೆ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ.
ರಾಜ್ಯದಲ್ಲಿ ಸಂಭವಿಸಿರುವ ಎರಡು ಭೀಕರ ಅಪಘಾತಗಳಲ್ಲಿ 14 ಜನ ಸಾವನ್ನಪ್ಪಿರುವ ವಾರ್ತೆ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 22, 2025
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿಯ ಅರೆಬೈಲ್ ಬಳಿ ಸಂಭವಿಸಿದ ಅಪಘಾತದಲ್ಲಿ 10 ಜನರು ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರು ಬಳಿ ರಸ್ತೆ ದುರಂತದಲ್ಲಿ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ದುರ್ಮರಣಕ್ಕೆ…
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿಯ ಅರೆಬೈಲ್ ಬಳಿ ಸಂಭವಿಸಿದ ಅಪಘಾತದಲ್ಲಿ 10 ಜನರು ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರು ಬಳಿ ರಸ್ತೆ ದುರಂತದಲ್ಲಿ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ದುರ್ಮರಣಕ್ಕೆ ತುತ್ತಾಗಿರುವುದು ನನಗೆ ಅತೀವ ನೋವುಂಟು ಮಾಡಿದೆ.
ಮೃತರ ಆತ್ಮಗಳಿಗೆ ಚಿರಶಾಂತಿ ಸಿಗಲಿ, ದುಃಖತಪ್ತ ಕುಟುಂಬಗಳಿಗೆ ತಮ್ಮವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಅಸಮರ್ಪಕ ರಸ್ತೆ ಮೂಲಸೌಕರ್ಯ, ವಾಹನಗಳ ಆತುರದ ಚಾಲನೆ, ನಿದ್ದೆಗಣ್ಣಿನಲ್ಲಿ ವಾಹನ ಚಾಲನೆ, ಸಂಚಾರ ನಿಯಮಗಳ ಉಲ್ಲಂಘನೆ ಇತ್ಯಾದಿ ಕಾರಣಗಳು ಅಪಘಾತಗಳಿಗೆ ಕಾರಣವಾಗುತ್ತಿವೆ.
ಈ ಬಗ್ಗೆ ಅಧಿಕಾರಿಗಳು ಹೆಚ್ಚು ಗಮನ ಕೊಟ್ಟು ಅಮೂಲ್ಯ ಜೀವಗಳ ಹರಣ ತಪ್ಪಿಸಬೇಕು ಎಂದು ಹೆಚ್‌ಡಿಕೆ ಒತ್ತಾಯಿಸಿದ್ದಾರೆ.
ತನಿಖೆಗೆ ಬಸವರಾಜ ಬೊಮ್ಮಾಯಿ ಆಗ್ರಹ
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಅರಬೈಲ್ ಬಳಿ ನಡೆದ ಅಪಘಾತದಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹತ್ತು ಜನರು ನಿಧನ ಹೊಂದಿರುವ ಸುದ್ದಿ ಮನಸ್ಸಿಗೆ ನೋವುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಸಂತಾಪ ಸೂಚಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಅರಬೈಲ್ ಬಳಿ ನಡೆದ ಲಾರಿ ಅಪಘಾತದಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹತ್ತು ಜನರು ದುರಂತ ಸಾವಿಗೀಡಾದ ಸುದ್ದಿ ಮನಸ್ಸಿಗೆ ನೋವುಂಟು ಮಾಡಿದೆ.
— Basavaraj S Bommai (@BSBommai) January 22, 2025
ಈ ಘಟನೆಯಲ್ಲಿ ಇನ್ನೂ ಕೆಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ರಾಜ್ಯ ಸರ್ಕಾರವು ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು,… pic.twitter.com/oQR3YHkDsw
ಈ ಕುರಿತು ಎಕ್ಸ್ ಮಾಡಿರುವ ಅವರು, ಮೃತರು ತಮ್ಮ ಉಪ ಜೀವನಕ್ಕಾಗಿತರಕಾರಿ ವ್ಯಾಪಾರ ಮಾಡಿಕೊಂಡಿದ್ದು ಅತ್ಯಂತ ಬಡ ಕುಟುಂಬಕ್ಕೆ ಸೇರಿದವರಾಗಿದ್ದಾರೆ.
ಈ ಘಟನೆಯಲ್ಲಿ ಇನ್ನೂ ಕೆಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸರ್ಕಾರ ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು, ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಅಲ್ಲದೇ ಈ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇವೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಸ್ಥರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.