ಬೆಂಗಳೂರು ಗ್ರಾಮಾಂತರ ಜಿಲ್ಲೆ (Krishna Byre Gowda): ಕಂದಾಯ ಇಲಾಖೆ ಮತ್ತು ಭೂ ಮಾಪನ ಇಲಾಖೆಯಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನದ ವಿದ್ಯುಕ್ತ ಚಾಲನೆ ಮತ್ತು ಪೋಡಿ ದುರಸ್ತಿ/ ಹೊಸ ದಾಖಲೆ ವಿತರಣಾ ಸಮಾರಂಭವನ್ನು ಜನವರಿ 24 ರಂದು ಬೆಳಿಗ್ಗೆ 10 ಗಂಟೆಗೆ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಸಮೀಪ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ (Krishna Byre Gowda) ಅವರು ಉದ್ಘಾಟಿಸಲಿದ್ದಾರೆ.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ (KH Mniyappa) ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಮುಖಂಡರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.