Conflict in BJP.. Congress to power again in 2028; CMSiddaramaiah

ಬಿಜೆಪಿಯಲ್ಲಿ ಕಚ್ಚಾಟ.. 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ; ಸಿಎಂ ಸಿದ್ದರಾಮಯ್ಯ| Video

ಚಿತ್ರದುರ್ಗ: ಬಿಜೆಪಿಯಲ್ಲಿ ಎರಡು ಮೂರು, ನಾಲ್ಕು ಗುಂಪುಗಳಿವೆ, ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಳಿಲ್ಲ. ನಾನು ಮತ್ತು ಡಿ.ಕೆ ಶಿವಕುಮಾರ್ ಇಲ್ಲಿಯೇ ಇದ್ದೇವೆ. ನಮ್ಮಲ್ಲಿ ಗುಂಪುಗಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿಯಲ್ಲಿ ಕಚ್ಚಾಟ ನಡೆದಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟಿದೆ. ಸರ್ಕಾರ ಸುಭದ್ರವಾಗಿದ್ದು, ನಾವು ಐದು ವರ್ಷ ಅಧಿಕಾರ ನಡೆಸಿ 2028 ನಡೆವ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ ಎಂದರು.

ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ನೀಡುವುದಾಗಿ 2023-24 ರ ಕೇಂದ್ರ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದರು. ಅದೇ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿಯವರು ತಮ್ಮ ಬಜೆಟ್ ನಲ್ಲಿಯೂ ಇದನ್ನು ಪುನರುಚ್ಚರಿಸಿದ್ದರು.

ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವುದಾಗಿ ಹೇಳಿದ್ದರು. ಇಷ್ಟು ವರ್ಷಗಳಾದರೂ ಒಂದು ಪೈಸೆಯೂ ರಾಜ್ಯಕ್ಕೆ ಬಂದಿಲ್ಲ.

ಸರ್ಕಾರ ಅನೇಕ ಬಾರಿ ಕೇಂದ್ರ ಸರ್ಕಾರಕ್ಕೆ ಮನವಿಯನ್ನು ನೀಡಿದ್ದು , ಪ್ರಧಾನಿಗಳು, ನಿರ್ಮಲಾ ಸೀತಾರಾಮನ್, ಅಮಿತ್ ಶಾ ಅವರನ್ನೂ ಭೇಟಿ ಮಾಡಲಾಗಿದೆ. ಅವರೇ ಬಜೆಟ್ ನಲ್ಲಿ ಘೋಷಣೆ ಮಾಡಿರುವುದನ್ನು ಕೊಡಿ ಎಂದರೂ ಬಿಡುಗಡೆ ಮಾಡಿಲ್ಲ ಎಂದರು.

ನನ್ನನ್ನೂ ಒಳಗೊಂಡಂತೆ ಉಪಮುಖ್ಯಮಂತ್ರಿಗಳು ಭೇಟಿಯಾಗಿ ಬಂದಿದ್ದೇವೆ. ನಬಾರ್ಡ್ ನಲ್ಲಿ ರಾಜ್ಯಕ್ಕೆ ಬರಬೇಕಾದ ಸಾಲದ ಮೊತ್ತ ಕಡಿತವಾಗಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದಾಗಲೂ ಈ ವಿಷಯವನ್ನು ಪ್ರಸ್ತಾಪಿಸಲಾಯಿತು. ಆದರೆ ಇಂದಿನವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಜೆಟ್ ನಲ್ಲಿಯಾದರೂ ಹಣ ಮೀಸಲಿಟ್ಟು ಬಿಡುಗಡೆ ಮಾಡಲಿ ಎಂದು ಪತ್ರವನ್ನು ಕೇಂದ್ರಕ್ಕೆ ಬರೆದು ಒತ್ತಡ ಹಾಕಲಾಗುತ್ತಿದೆ.

ರೈತರ ಜಮೀನು ಮುಳುಗಡೆಯಾಗದಂತೆ ತಡೆಯಲು ಪ್ರಯತ್ನ

ಹೊಸದುರ್ಗ ತಾಲ್ಲೂಕಿನ ಹಿನ್ನೀರಿನಲ್ಲಿ ರೈತರ ಜಮೀನು ಮುಳುಗಡೆಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮುಳುಗಡೆಯಾಗದ ರೀತಿಯಲ್ಲಿ ತಡೆಯುವ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ವಾಣಿ ವಿಲಾಸ ಸಾಗರ ಅಣೆಕಟ್ಟೆಗೆ 115 ವರ್ಷಗಳ ಇತಿಹಾಸವಿದೆ. ಇಷ್ಟು ವರ್ಷಗಳಲ್ಲಿ ಈ ಅಣೆಕಟ್ಟು ಕೋಡಿ ಬಿದ್ದಿರುವುದು ಮೂರು ಬಾರಿ ಮಾತ್ರ. ಅಂದರೆ 1933, 2022 ಹಾಗೂ ಜನವರಿ 14, 2025 ರಲ್ಲಿ ಕೋಡಿ ಬಿದ್ದಿದೆ.

ಕರ್ನಾಟಕದ ಮೊದಲನೇ ಜಲಾಶಯ ಇದಾಗಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ತಾಯಿ ಸಂಪಾಜಮ್ಮಣಿಯವರ ಹೆಸರಿನಲ್ಲಿ ಕಟ್ಟಿಸಿದ್ದು, ವಾಣಿ ವಿಲಾಸ ಸಾಗರ ಎಂದು ಕರೆಯಲಾಗಿದೆ. 1898 ನೇ ಇಸವಿಯಲ್ಲಿ ಪ್ರಾರಂಭವಾಗಿ 1907 ರಲ್ಲಿ ಅಣೆಕಟ್ಟು ನಿರ್ಮಾಣ ಮುಕ್ತಾಯವಾಯಿತು. 30.ಟಿ.ಎಂ.ಸಿ ನೀರು ಶೇಖರಣೆ ಮಾಡುವ ಸಾಮರ್ಥ್ಯವಿರುವ ಅಣೆಕಟ್ಟು 33 ಸಾವಿರ ಎಕರೆಗೆ ನೀರುಣಿಸುತ್ತದೆ ಎಂದು ಸಿಎಂ ವಿವರಿಸಿದರು.

ಈ ಜಿಲ್ಲೆಯ ಅನೇಕ ತಾಲ್ಲೂಕುಗಳು ಬರಪೀಡಿತ ಎಂದು ಆಗ ಹಳೇ ಮೈಸೂರಿನಲ್ಲಿ ರಾಜರ ಪ್ರತಿನಿಧಿಯಾಗಿದ್ದ ಸಂಪಾಜಮ್ಮಣ್ಣಿಯವರು ಈ ಕೆರೆಯನ್ನು ನಿರ್ಮಾಣ ಮಾಡಿದರು. ಈ ಭಾಗದಲ್ಲಿ ಮಳೆ ಕಡಿಮೆಯಿರುವುದರಿಂದ ಅಣೆಕಟ್ಟು ನಿರ್ಮಿಸಿದರೆ ಈ ಭಾಗದ ಜನರಿಗೆ ನೀರು ದೊರೆಯಲಿದೆ ಎಂಬ ಉದ್ದೇಶದಿಂದ ಅವರ ಒಡವೆಗಳನ್ನು ಅಡವಿಟ್ಟು ಸುಮಾರು 45 ಲಕ್ಷ ರೂ.ಗಳನ್ನು ವೆಚ್ಚ ಮಾಡಿದ್ದರು ಎಂದು ತಿಳಿಸಿದರು.

ಸಮೃದ್ಧ ಮಳೆಗಾಗಿ ಪ್ರಾರ್ಥನೆ

ಇಂದು ಗಂಗಾಪೂಜೆಯನ್ನು ಮಾಡಿ ಬಾಗಿನ ಅರ್ಪಿಸಿದ್ದೇವೆ. ಪ್ರತಿ ವರ್ಷವೂ ರೈತರ ಜಮೀನುಗಳಿಗೆ ನೀರು ಸಿಗುವಂತಾಗಲಿ ಒಳ್ಳೆ ಮಳೆ, ಬೆಳೆಯಾಗಿ ಪ್ರತಿ ವರ್ಷವೂ ಕೋಡಿ ಬೀಳುವಂತೆ ಕೆರೆಗೆ ನೀರು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನವಾದರೆ ಪ್ರತಿ ವರ್ಷವೂ ಅಣೆಕಟ್ಟಿಗೆ ನೀರು ಹರಿಯಲಿದೆ ಎಂದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!