Netaji was a great patriot who fought for India's independence

ನೇತಾಜಿ ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ – ಸಿಎಂ

ಬೆಂಗಳೂರು: ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು (netaji) ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128 ನೇ ಜನ್ಮ ದಿನ. ದೇಶದ ಬಗ್ಗೆ ಅಪಾರ ಗೌರವಾಭಿಮಾನ ಹೊಂದಿದ್ದ ಮಹಾನ್ ದೇಶಭಕ್ತ. ಈಗಿನ ಐಎಎಸ್ ನಂತೆ ಬ್ರಿಟೀಷರ ಕಾಲದಲ್ಲಿದ್ದ ಐಸಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಆದರೆ ತಮ್ಮ ಉಜ್ವಲ ಭವಿಷ್ಯವನ್ನು ತ್ಯಾಗ ಮಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಮೀಸಲಾಗಿಟ್ಟರು.

ಎರಡು ಬಾರಿ ಕಾಂಗ್ರೆಸ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮಹಾತ್ಮಾ ಗಾಂಧಿಯವರು ಪ್ರತಿಪಾದಿಸುತ್ತಿದ್ದ ಸತ್ಯ ಹಾಗೂ ಅಹಿಂಸೆಯ ಮಾರ್ಗದಲ್ಲಿ ನಡೆದು ಭಾರತ ಸ್ವಾತಂತ್ರ್ಯ ಹೊಂದುವುದು ಕಷ್ಟಸಾಧ್ಯ ಎಂಬುದು ಸುಭಾಷರ ಅಭಿಪ್ರಾಯವಾಗಿತ್ತು.

ಆದ್ದರಿಂದ ಶಸ್ತ್ರಾಸ್ತ್ರಗಳನ್ನು ಬಳಸಿಯೇ ಬ್ರಿಟೀಷರನ್ನು ಭಾರತದಿಂದ ಹೊರದೂಡುವ ಉದ್ದೇಶದಿಂದ ಐಎನ್ ಎ (ಇಂಡಿಯನ್ ನ್ಯಾಷನಲ್ ಆರ್ಮಿ)ಯನ್ನು ಸ್ಥಾಪಿಸಿದರು.

ನೇತಾಜಿ ಸುಭಾಷ್ ಚಂದ್ರ ಬೋಸ್ ರ ಜನ್ಮದಿಂದು ಅವರ ಜೀವನ-ಸಾಧನೆಗಳನ್ನು ಸ್ಮರಿಸುವ ಜೊತೆಗೆ ಅವರ ಆದರ್ಶಗಳ ಹಾದಿಯಲ್ಲಿ ನಡೆಯುವ ಸಂಕಲ್ಪ ಮಾಡಬೇಕಿದೆ. ಈ ದಿಸೆಯಲ್ಲಿ ಸರ್ಕಾರ ಈ ಮಹಾನ್ ನಾಯಕನಿಗೆ ಗೌರವ ಸಲ್ಲಿಸಿದೆ ಎಂದರು.

ದಾವೋಸ್ ಶೃಂಗಸಭೆ

ದಾವೋಸ್ ಶೃಂಗಸಭೆಯಲ್ಲಿ ಭಾಗವಹಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಸಾಲಿನ ಆಯವ್ಯಯದ ಸಿದ್ಧತೆಯಲ್ಲಿ ತೊಡಗಿಕೊಳ್ಳ ಬೇಕಾಗಿರುವುದರಿಂದ 2025 ರ ದಾವೋಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.

ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ

ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಅವರನ್ನು ಮುಖ್ಯಮಂತ್ರಿಗಳಾಗುವಂತೆ ಆಶಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ ಎಂದರು.

ಬಿಜೆಪಿಯ ಆರೋಪಗಳು ರಾಜಕೀಯ ಪ್ರೇರಿತ

ಕಾರ್ಪೊರೇಶನ್ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಬಿಜೆಪಿಯರವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದರು.

ಲೋಕಾಯುಕ್ತದವರು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಕುಟುಂಬದವರಿಗೆ ಕ್ಲೀನ್ ಚಿಟ್ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ತನಗೆ ಮಾಹಿತಿ ಇಲ್ಲವೆಂದು ತಿಳಿಸಿದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!